ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಪ್ರಕರಣಗಳ ಏರಿಕೆ; ಶೀಘ್ರದಲ್ಲೇ ಕೇರಳಕ್ಕೆ ಕೇಂದ್ರ ತಂಡ

|
Google Oneindia Kannada News

ತಿರುವನಂತಪುರಂ, ಜುಲೈ 28: ಕೇರಳದಲ್ಲಿ ಕೊರೊನಾ ಪ್ರಕರಣಗಳ ಏರಿಕೆಯಾಗಿದ್ದು, ಪರಿಸ್ಥಿತಿ ವಿಶ್ಲೇಷಣೆಗೆ ತಜ್ಞರು ಹಾಗೂ ಸೋಂಕುಶಾಸ್ತ್ರಜ್ಞರನ್ನು ಒಳಗೊಂಡ ನಾಲ್ಕು ಸದಸ್ಯರ ಕೇಂದ್ರದ ತಂಡ ಶೀಘ್ರದಲ್ಲೇ ಕೇರಳಕ್ಕೆ ಭೇಟಿ ನೀಡಲಿದೆ.

ಕೊರೊನಾ ನಿರ್ವಹಣೆ ಸಂಬಂಧ ರಾಜ್ಯ ಆರೋಗ್ಯ ಇಲಾಖೆಗೆ ಈ ತಂಡ ಸಲಹೆ ನೀಡಲಿದೆ.

 ಕೇರಳದಲ್ಲಿ ಕೋವಿಡ್ ಪರಿಸ್ಥಿತಿ ಕೈ ಮೀರಿದೆಯೇ, ಸರ್ಕಾರದ ತಜ್ಞರು ಹೇಳಿದ್ದೇನು? ಕೇರಳದಲ್ಲಿ ಕೋವಿಡ್ ಪರಿಸ್ಥಿತಿ ಕೈ ಮೀರಿದೆಯೇ, ಸರ್ಕಾರದ ತಜ್ಞರು ಹೇಳಿದ್ದೇನು?

ದೇಶದಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ಎರಡು ರಾಜ್ಯಗಳಿಂದಲೇ 50% ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ಈ ಸಂಬಂಧ ಚರ್ಚೆಗೆ ಗೃಹ ಸಚಿವಾಲಯದ ಉನ್ನತಾಧಿಕಾರಿಗಳು ಈ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಲಿದ್ದಾರೆ.

Central Team To Visit Kerala Over Increase In COVID Cases

ರಾಜ್ಯದಲ್ಲಿ ಕೊರೊನಾ ನಿಯಮಗಳನ್ನು ಇನ್ನಷ್ಟು ಕಟ್ಟುನಿಟ್ಟುಗೊಳಿಸಬೇಕು. ಸೂಪರ್ ಸ್ಪ್ರೆಡರ್‌ಗಳಾಗಬಹುದಾದ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದೆ.

ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಾದಿಯಲ್ಲಿದ್ದರೂ ಕೇರಳದಲ್ಲಿ ಕಳೆದ ಕೆಲವು ವಾರಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ದೇಶದ ಇತರ ಭಾಗಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ನೂರು, ಎರಡು ಅಂಕಿಯಲ್ಲಿ ವರದಿಯಾಗುತ್ತಿದ್ದರೆ ಕೇರಳದಲ್ಲಿ ಪ್ರತಿದಿನ 10,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.

ಮಂಗಳವಾರ ಕೇರಳದಲ್ಲಿ 22,129 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದವು. 156 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಮೇ 29ರ ನಂತರ ದಾಖಲಾದ ಅತಿ ಹೆಚ್ಚು ಪ್ರಕರಣ ಇದಾಗಿದೆ. ಕೇರಳದಲ್ಲಿ ಒಟ್ಟು 1,45,371 ಸಕ್ರಿಯ ಪ್ರಕರಣಗಳಿವೆ.

ಕೇರಳದ ಲ್ಲಿ18 ವರ್ಷ ಮೇಲ್ಪಟ್ಟ ಜನಸಂಖ್ಯೆಯ ಶೇಕಡ 20.9 ರಷ್ಟು ಜನರು ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ. ಇದು ರಾಷ್ಟ್ರೀಯ ಸರಾಸರಿ ಶೇಕಡಾ 9.9 ಕ್ಕಿಂತ ಹೆಚ್ಚಾಗಿದೆ. ಆದರೂ ನಾಲ್ಕನೇ ಐಸಿಎಂಆರ್ ಸಿರೊ-ಸಮೀಕ್ಷೆಯು ರಾಜ್ಯದ ಜನಸಂಖ್ಯೆಯ ಶೇಕಡ 42.7 ರಷ್ಟು ಮಾತ್ರ ಪ್ರತಿಕಾಯಗಳನ್ನು ಹೊಂದಿದೆ ಎಂದು ತೋರಿಸುತ್ತದೆ.

English summary
Central team consisting of experts and epidemiologists will be visiting Kerala soon over increase in coronavirus cases,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X