ಕೋವ್ಯಾಕ್ಸಿನ್ ರೂಪಾಂತರಿ ಕೊರೊನಾ ಸೋಂಕಿನ ಮೇಲೂ ಪರಿಣಾಮಕಾರಿ
ತಿರುವನಂತಪುರಂ,ಫೆಬ್ರವರಿ 19: ಕೋವ್ಯಾಕ್ಸಿನ್ ಕೊರೊನಾ ಲಸಿಕೆ ರೂಪಾಂತರಿ ಕೊರೊನಾ ಸೋಂಕಿನ ಮೇಲೂ ಪರಿಣಾಮ ಬೀರಲಿದೆ ಎಂದು ಅಧ್ಯಯನದ ಮೂಲಕ ತಿಳಿದುಬಂದಿದೆ.
ಬ್ರಿಟನ್,ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲ್‌ನಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ರೂಪಾಂತರ ತಳಿಗಳ ವಿರುದ್ಧ ಕೋವ್ಯಾಕ್ಸಿನ್ ಗುಣಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.
ಈ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಡಾ. ಬಲರಾಂ ಭಾರ್ಗವ್ ತಿಳಿಸಿದ್ದಾರೆ.ಗುರುವಾರ ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ವೆಬಿನಾರ್ ಉದ್ದೇಶಿಸಿ ಅವರು ಮಾತನಾಡಿದರು.

ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್‌ನಲ್ಲಿಪತ್ತೆಯಾದ ಕೊರೊನಾ ವೈರಸ್‌ನ ರೂಪಾಂತರ ತಳಿಗಳ ಮಾದರಿಯನ್ನು ಪ್ರಯಾಣಿಕರಿಂದ ಸಂಗ್ರಹಿಸಲಾಗಿದೆ.
ಈಗಾಗಲೇ ಕೋವ್ಯಾಕ್ಸಿನ್ ಬಿಬಿ 152 ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲಾಗಿದೆ.ಇದರಲ್ಲಿ 25,800 ಸ್ವಯಂ ಸೇವಕರು ಭಾಗಿಯಾಗಿದ್ದರು. ಅವರಿಗೆ ಕೊರೊನಾ ಲಸಿಕೆಯ ಎರಡು ಡೋಸ್‌ಗಳನ್ನು ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಜನತೆ ಆತಂಕದಲ್ಲಿದೆ.ಈ ಸಂದರ್ಭದಲ್ಲಿ ಹೆಚ್ಚೆಚ್ಚು ಕೊರೊನಾ ಪರೀಕ್ಷೆಗಳ ಅಗತ್ಯವಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.ಯಾವುದೇ ಕಾರಣಕ್ಕೂ ಕೊರೊನಾ ಪರೀಕ್ಷೆ ಪ್ರಮಾಣವನ್ನು ಕಡಿಮೆ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.
ಈ ಸೋಂಕು ವೇಗವಾಗಿ ಅಥವಾ ನಿಧಾನಗತಿಯಲ್ಲಿ ಹೇಗೆ ಹರಡುತ್ತಿದೆ ಎನ್ನುವ ಬಗ್ಗೆ ಅಧ್ಯಯನದ ಅಗತ್ಯವಿದೆ. ಅದನ್ನು ಈಗಲೇ ಕೊರೊನಾ ವೈರಸ್‌ನ ಮತ್ತೊಂದು ತಳಿ ಎಂದು ಕರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಜೀನ್ ಸೀಕ್ವೆನ್ಸಿಂಗ್ ಮಾಡುತ್ತಿದ್ದು 10-15 ದಿನಗಳೊಳಗಾಗಿ ಫಲಿತಾಂಶ ಹೊರಬರಲಿದೆ.ಬಳಿಕ ಇನ್ನೂ ವಿವರವಾಗಿ ಅಧ್ಯಯನ ಮಾಡಲಾಗುತ್ತದೆ. ಜನಸಮೂಹದ ವಿರುದ್ಧ ವಿಪತ್ತು ನಿರ್ವಹಣಾ ನಿಯಂತ್ರಣ ನಿಯಮಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications