ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವ್ಯಾಕ್ಸಿನ್ ರೂಪಾಂತರಿ ಕೊರೊನಾ ಸೋಂಕಿನ ಮೇಲೂ ಪರಿಣಾಮಕಾರಿ

|
Google Oneindia Kannada News

ತಿರುವನಂತಪುರಂ,ಫೆಬ್ರವರಿ 19: ಕೋವ್ಯಾಕ್ಸಿನ್ ಕೊರೊನಾ ಲಸಿಕೆ ರೂಪಾಂತರಿ ಕೊರೊನಾ ಸೋಂಕಿನ ಮೇಲೂ ಪರಿಣಾಮ ಬೀರಲಿದೆ ಎಂದು ಅಧ್ಯಯನದ ಮೂಲಕ ತಿಳಿದುಬಂದಿದೆ.

ಬ್ರಿಟನ್,ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲ್‌ನಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ರೂಪಾಂತರ ತಳಿಗಳ ವಿರುದ್ಧ ಕೋವ್ಯಾಕ್ಸಿನ್ ಗುಣಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.

ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆ: ವಿಜ್ಞಾನಿಗಳು ಹೇಳಿದ್ದೇನು?ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆ: ವಿಜ್ಞಾನಿಗಳು ಹೇಳಿದ್ದೇನು?

ಈ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಡಾ. ಬಲರಾಂ ಭಾರ್ಗವ್ ತಿಳಿಸಿದ್ದಾರೆ.ಗುರುವಾರ ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ವೆಬಿನಾರ್ ಉದ್ದೇಶಿಸಿ ಅವರು ಮಾತನಾಡಿದರು.

Clinical Trials Indicate Indias Covid-19 Vaccines Will Be Effective Against New Variants, Says ICMR

ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್‌ನಲ್ಲಿಪತ್ತೆಯಾದ ಕೊರೊನಾ ವೈರಸ್‌ನ ರೂಪಾಂತರ ತಳಿಗಳ ಮಾದರಿಯನ್ನು ಪ್ರಯಾಣಿಕರಿಂದ ಸಂಗ್ರಹಿಸಲಾಗಿದೆ.

ಈಗಾಗಲೇ ಕೋವ್ಯಾಕ್ಸಿನ್ ಬಿಬಿ 152 ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲಾಗಿದೆ.ಇದರಲ್ಲಿ 25,800 ಸ್ವಯಂ ಸೇವಕರು ಭಾಗಿಯಾಗಿದ್ದರು. ಅವರಿಗೆ ಕೊರೊನಾ ಲಸಿಕೆಯ ಎರಡು ಡೋಸ್‌ಗಳನ್ನು ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಜನತೆ ಆತಂಕದಲ್ಲಿದೆ.ಈ ಸಂದರ್ಭದಲ್ಲಿ ಹೆಚ್ಚೆಚ್ಚು ಕೊರೊನಾ ಪರೀಕ್ಷೆಗಳ ಅಗತ್ಯವಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.ಯಾವುದೇ ಕಾರಣಕ್ಕೂ ಕೊರೊನಾ ಪರೀಕ್ಷೆ ಪ್ರಮಾಣವನ್ನು ಕಡಿಮೆ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ಈ ಸೋಂಕು ವೇಗವಾಗಿ ಅಥವಾ ನಿಧಾನಗತಿಯಲ್ಲಿ ಹೇಗೆ ಹರಡುತ್ತಿದೆ ಎನ್ನುವ ಬಗ್ಗೆ ಅಧ್ಯಯನದ ಅಗತ್ಯವಿದೆ. ಅದನ್ನು ಈಗಲೇ ಕೊರೊನಾ ವೈರಸ್‌ನ ಮತ್ತೊಂದು ತಳಿ ಎಂದು ಕರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜೀನ್ ಸೀಕ್ವೆನ್ಸಿಂಗ್ ಮಾಡುತ್ತಿದ್ದು 10-15 ದಿನಗಳೊಳಗಾಗಿ ಫಲಿತಾಂಶ ಹೊರಬರಲಿದೆ.ಬಳಿಕ ಇನ್ನೂ ವಿವರವಾಗಿ ಅಧ್ಯಯನ ಮಾಡಲಾಗುತ್ತದೆ. ಜನಸಮೂಹದ ವಿರುದ್ಧ ವಿಪತ್ತು ನಿರ್ವಹಣಾ ನಿಯಂತ್ರಣ ನಿಯಮಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

English summary
The Indian Council of Medical Research (ICMR) on Thursday said interim results of the ongoing clinical trials indicated that the indigenous Covid-19 vaccines would be effective against the mutated virus strains reported from the United Kingdom, South Africa and Brazil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X