ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ವೈರಸ್ ಕೋಟೆಯಿಂದ 15 ಭಾರತೀಯ ವಿದ್ಯಾರ್ಥಿಗಳು ಬಚಾವ್

|
Google Oneindia Kannada News

ತಿರುವನಂತಪುರಂ, ಫೆಬ್ರವರಿ.08: ಚೀನಾದಲ್ಲಿ ಕೊರೊನಾ ವೈರಸ್ ನಿಂದ ಸಾವಿನ ಮನೆ ಸೇರುತ್ತಿರುವವ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರ ಮಧ್ಯೆ ಕೇರಳದ 15 ವಿದ್ಯಾರ್ಥಿಗಳು ಸಾವಿನ ಸುಳಿಯಿಂದ ಬಚಾವ್ ಆಗಿ ಭಾರತಕ್ಕೆ ವಾಪಸ್ ಆಗಿದ್ದಾರೆ.

ಚೀನಾದ ಹುಬೇ ನಗರದಲ್ಲಿದ್ದ ಕೇರಳ ಮೂಲದ ವಿದ್ಯಾರ್ಥಿಗಳನ್ನು ವಿಶೇಷ ವಿಮಾನದ ಮೂಲದ ಕೇರಳ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಶನಿವಾರ ವಾಪಸ್ ಕರೆದುಕೊಂಡು ಬರಲಾಗಿದೆ. ಕೊಚ್ಚಿ ವಿಮಾನ ನಿಲ್ದಾಣದಲ್ಲೇ 15 ವಿದ್ಯಾರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಭಾರತಕ್ಕೆ ಕೊರೊನಾ ವೈರಸ್ ಹೊತ್ತು ತಂದವರು 150 ಮಂದಿ!ಭಾರತಕ್ಕೆ ಕೊರೊನಾ ವೈರಸ್ ಹೊತ್ತು ತಂದವರು 150 ಮಂದಿ!

ಚೀನಾದ ಕುನ್ಮಿಂಗ್ ವಿಮಾನ ನಿಲ್ದಾಣದಿಂದ ಕೇರಳ ಮೂಲದ 15 ವಿದ್ಯಾರ್ಥಿಗಳು ಬ್ಯಾಂಕಾಕ್ ಗೆ ಆಗಮಿಸಿದ್ದು, ಅಲ್ಲಿಂದ ಏರ್ ಏಷಿಯಾ ವಿಶೇಷ ವಿಮಾನದ ಮೂಲಕ ಕೇರಳದ ರಾಜಧಾನಿ ಕೊಚ್ಚಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲಾಯಿತು ಎಂದು ಮೂಲಗಳು ತಿಳಿಸಿವೆ.

Coronavirus: 15 Indian Students Returned Kerala From China

ಕೊಚ್ಚಿಗೆ ಆಗಮಿಸುತ್ತಿದ್ದಂತೆ ವಿದ್ಯಾರ್ಥಿಗಳು ಆಸ್ಪತ್ರೆಗೆ ರವಾನೆ:

ಕಳೆದ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ 15 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳನ್ನು ಚೀನಾದಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಬರಲಾಯಿತು. ಆತಕ್ಷಣಕ್ಕೆ ಎಲ್ಲ ವಿದ್ಯಾರ್ಥಿಗಳನ್ನು ಕಲಮ್ಸೆರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ವಿಶೇಷ ಆಂಬುಲೆನ್ಸ್ ಮೂಲಕ ಕಳುಹಿಸಲಾಯಿತು. ಆಸ್ಪತ್ರೆಯ ವಿಶೇಷ ಚಿಕಿತ್ಸಾ ಘಟಕದಲ್ಲಿ ಇರಿಸಿ ವಿದ್ಯಾರ್ಥಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಇನ್ನು, ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ವಿದ್ಯಾರ್ಥಿಗಳನ್ನು ಭೇಟಿ ಮಾಡಲು ಅವರ ಕುಟುಂಬ ಸದಸ್ಯರಿಗೂ ಅವಕಾಶ ನೀಡಲಾಗಲಿಲ್ಲ ಎಂದು ತಿಳಿದು ಬಂದಿದೆ.

English summary
Coronavirus: 15 Indian Students Returned Kerala From China.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X