ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕೇರಳದಲ್ಲಿ ಎರಡನೇ ಮಂಕಿಪಾಕ್ಸ್‌ ಪ್ರಕರಣ ಪತ್ತೆ

|
Google Oneindia Kannada News

ತಿರುವನಂತಪುರಂ, ಜುಲೈ, 18: ಕೇರಳದಲ್ಲಿ ದೇಶದ ಎರಡನೇ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾಗಿರುವ ಬಗ್ಗೆ ರಾಜ್ಯದ ಆರೋಗ್ಯ ಸಚಿವೆ ವೀಣಾ ಚಾರ್ಜ್​ ಮಾಹಿತಿ ನೀಡಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ವೈರಲ್‌ ಆಗಿದ್ದ ಮಂಕಿಪಾಕ್ಸ್‌ ಮಹಾಮಾರಿ ಇದೀಗ ದೇಶಕ್ಕೂ ಕಾಲಿಟ್ಟಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಇದುವರೆಗೂ ನೆರೆ ರಾಜ್ಯ ಕೇರಳ ಒಂದರಲ್ಲೇ ಎರಡು ಪ್ರಕರಣಗಳು ದಾಖಲಾಗಿದ್ದು, ರಾಜ್ಯದ ಜನರಲ್ಲಿ ಭಯ ಹುಟ್ಟಿಸಿದೆ.

ಕೇರಳ ಸರ್ಕಾರವು ಮಂಕಿಪಾಕ್ಸ್ ಹರಡದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ ಹೈ ಅಲರ್ಟ್​ ಘೋಷಿಸಿದೆ. ಕೆಲವು ದಿನಗಳ ಹಿಂದೆಯಷ್ಟೇ ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ದೃಢಪಟ್ಟಿತ್ತು. ದುಬೈನಿಂದ ಜುಲೈ 13ರಂದು ಕೇರಳಕ್ಕೆ ಬಂದಿದ್ದ 31 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ತಗುಲಿದ್ದು, ಅವರಿಗೆ ಕಣ್ಣೂರಿನಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಅವರ ಪ್ರಾಥಮಿಕ ಸಂಪರ್ಕದಲ್ಲಿರುವವನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗಿದೆ.

Countrys second case of monkeypox detected in Kerala

ಮೊದಲ ಪ್ರಕರಣ ಪತ್ತೆಯಾದಾಗ, ಕೇಂದ್ರ ಆರೋಗ್ಯ ಸಚಿವಾಲಯವು ಮಂಕಿಪಾಕ್ಸ್‌ ವೈರಸ್‌ ತಡೆಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು. ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ಅಂತರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು. ಸತ್ತ ಅಥವಾ ಜೀವಂತ ಕಾಡು ಪ್ರಾಣಿಗಳ ಸಂಪರ್ಕವನ್ನು ತಪ್ಪಿಸಬೇಕು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ 60 ದೇಶಗಳಲ್ಲಿ 6,000ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿವೆ.

ಈಗಾಗಲೇ ದೇಶದಲ್ಲಿ ಮಂಕಿಪಾಕ್ಸ್‌ 2 ಪಕ್ರರಣಗಳು ಪತ್ತೆಯಾಗಿದ್ದು, ವಿಶ್ವ ಆರೋಗ್ಯ ಇಲಾಖೆಯು ಕೇರಳ ಸೇರಿದಂತೆ ಇನ್ನಿತರ ರಾಜ್ಯಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ. ವಿಮಾನ ನಿಲ್ದಾಣಗಳು ಗಡಿಭಾಗಗಳಲ್ಲಿ ನಿಗಾ ವಹಿಸುವಂತೆಯೂ ಆಯಾ ರಾಜ್ಯಗಳ ಆರೋಗ್ಯ ಇಲಾಖೆಗಳಿಗೆ ಸೂಚಿಸಿದೆ.

English summary
State Health Minister Veena Charge has informed about the detection of the country's second monkeypox case in Kerala, Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X