ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ 19: ಕೇರಳದಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್ ಘೋಷಣೆ

|
Google Oneindia Kannada News

ತಿರುವನಂತಪುರಂ, ಜುಲೈ 21: ಕೇರಳದಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್ ವಿಧಿಸಿ ಸರ್ಕಾರ ಆದೇಶ ಮಾಡಿದೆ.

ಜುಲೈ 24 ಹಾಗೂ 25ರಂದು ಎರಡು ದಿನ ರಾಜ್ಯದಲ್ಲಿ ಸಂಪೂರ್ಣವಾಗಿ ಲಾಕ್‌ಡೌನ್ ಮಾಡುವಂತೆ ಸೂಚಿಸಲಾಗಿದೆ. ಹಾಗೆಯೇ ಜುಲೈ 12 ಹಾಗೂ 13ರಂದು ವಿಧಿಸಿದ ಮಾರ್ಗಸೂಚಿಗಳೇ ಈ ಎರಡು ದಿನವೂ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

ಬಕ್ರೀದ್‌ ಕಾರಣ ಕೋವಿಡ್‌ ನಿರ್ಬಂಧ ಸಡಿಲಿಕೆಯ ಕೇರಳ ಸರ್ಕಾರ ನಿರ್ಧಾರಕ್ಕೆ ಐಎಂಎ ಟೀಕೆಬಕ್ರೀದ್‌ ಕಾರಣ ಕೋವಿಡ್‌ ನಿರ್ಬಂಧ ಸಡಿಲಿಕೆಯ ಕೇರಳ ಸರ್ಕಾರ ನಿರ್ಧಾರಕ್ಕೆ ಐಎಂಎ ಟೀಕೆ

ಪ್ರತಿ ದಿನವೂ 3 ಲಕ್ಷ ಪರೀಕ್ಷೆಗಳನ್ನು ಮಾಡುವ ಕುರಿತು ಆರೋಗ್ಯ ಇಲಾಖೆ ಗುರಿ ಹೊಂದಿದೆ. ಎಲ್ಲಾ ಜಿಲ್ಲೆಗಳಲ್ಲೂ ಮೈಕ್ರೋ ಕಂಟೈನ್ಮೆಂಟ್ ಜೋನ್‌ಗಳನ್ನು ಪತ್ತೆ ಹಚ್ಚಲು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

Covid 19: Kerala Orders Complete Lockdown On July 24, 25

ರಾಜ್ಯಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದ್ದು, ಬಕ್ರಿದ್ ಆಚರಣೆಗಾಗಿ ಭಾನುವಾರದಿಂದ ದಿನಗಳ ಕಾಲ ಟೆಕ್ಸ್‌ಟೈಲ್ ಶಾಲ್, ಚಪ್ಪಲಿ ಅಂಗಡಿಗಳು ಸೇರಿ ಹಲವು ಅಂಗಡಿಗಳಿಗೆ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿತ್ತು.

ದೇಶದಲ್ಲಿ ಬಹುತೇಕ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗಿವೆ ಆದರೆ, ಕೇರಳದಲ್ಲಿ ಮಾತ್ರ ನಿತ್ಯ 10 ರಿಂದ 15 ಸಾವಿರ ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಮಹಾರಾಷ್ಟ್ರದಲ್ಲೂ ಕೂಡ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ. ಮತ್ತೆ ದೇಶದಲ್ಲಿ ಇಂದಿನಿಂದ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.

ಭಾರತದಲ್ಲಿ ಕೊರೊನಾ 2ನೇ ಅಲೆಯ ಏರಿಳಿತ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 42,015 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 3,998 ಮಂದಿ ಬಲಿಯಾಗಿದ್ದಾರೆ.

ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,12,16,337ಕ್ಕೆ ತಲುಪಿದ್ದು, ಸಾವಿನ 4,18,480ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,07,170ಕ್ಕೆ ಕುಸಿದಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 40,026 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,03,90,687ಕ್ಕೆ ತಲುಪಿದೆ.

English summary
Keeping in view the Supreme Court’s recent observations flagging laxity in COVID-19 curbs in Kerala, the state government on Wednesday (July 21) ordered a complete state-wide lockdown on July 24 (Saturday) and 25 (Sunday).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X