ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯ್ಯಪ್ಪ ಭಕ್ತರೇ ಗಮನಿಸಿ: ಶಬರಿಮಲೆ ಏರಲು ಈ ದಾಖಲೆ ಅತ್ಯಗತ್ಯ

|
Google Oneindia Kannada News

ತಿರುವನಂತಂಪುರಂ, ಡಿ. 20: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ಸನ್ನಿಧಿಗೆ ಬರುವ ಭಕ್ತರ ಸಂಖ್ಯೆಗೆ ವಿಧಿಸಲಾಗಿರುವ ಗರಿಷ್ಠ ಮಿತಿಯನ್ನು ಹೆಚ್ಚಿಸಲು ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಧರಿಸಿದ್ದು, ತಿಳಿದಿರಬಹುದು. ಡಿಸೆಂಬರ್ 27ರಿಂದ ಹೆಚ್ಚುವರಿ ಭಕ್ತ ಸಮೂಹವನ್ನು ಸಂಭಾಳಿಸಲು ದೇಗುಲ ಮಂಡಳಿ ಸಜ್ಜಾಗಿದೆ.

ದೇವಸ್ಥಾನಕ್ಕೆ ಬರುವ ಭಕ್ತರು ಎಲ್ಲ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಈ ಸಂಬಂಧ ಕೇರಳ ಆರೋಗ್ಯ ಇಲಾಖೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿ ಪ್ರಕಾರ, ಭಕ್ತರು ಭೇಟಿಗೂ 48 ಗಂಟೆಗಳ ಮುನ್ನ ಆರ್‌ಟಿ-ಪಿಸಿಆರ್ ಪರೀಕ್ಷೆ ಮೂಲಕ ಕೋವಿಡ್ ಸೋಂಕಿನ ಪರೀಕ್ಷೆಗೆ ಒಳಗಾಗಬೇಕು ಎಂಬ ನಿಬಂಧನೆ ಹಾಕಲಾಗಿದೆ.

ಸ್ವಾಮಿ ಅಯ್ಯಪ್ಪನಿಗೆ ಪತ್ರ ತಲುಪಿಸುವ ವಿಶಿಷ್ಟ ಅಂಚೆ ಕಚೇರಿಸ್ವಾಮಿ ಅಯ್ಯಪ್ಪನಿಗೆ ಪತ್ರ ತಲುಪಿಸುವ ವಿಶಿಷ್ಟ ಅಂಚೆ ಕಚೇರಿ

ಈ ನಿಬಂಧನೆಗಳ ಜೊತೆಗೆ ಕೊವಿಡ್ 19 ನೆಗಟಿವ್ ಪ್ರಮಾಣ ಪತ್ರ ಅತ್ಯಗತ್ಯ. ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿದ್ದರೂ ನೆಗಟಿವ್ ಎಂದು ನಮೂದಿಸಿರುವ ಇತ್ತೀಚಿನ ವೈದ್ಯಕೀಯ ದಾಖಲೆ ಇಲ್ಲದಿದ್ದರೆ ಸನ್ನಿಧಾನಕ್ಕೆ ಪ್ರವೇಶ ನಿರ್ಬಂಧಿಸಲಾಗುತ್ತದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಮುಖ್ಯಸ್ಥ ಎನ್ ವಾಸು ಹೇಳಿದ್ದಾರೆ.

COVID-Negative Certificate After RT-PCR Test Must For Sabarimala Visit

ಶಬರಿಮಲೆಗೆ ಮಂಡಲ-ಮಕರವಿಳಕ್ಕು ಅವಧಿಯಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆಗೆ ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಮಿತಿ ಹೇರಲಾಗಿತ್ತು. ಕಳೆದ ತಿಂಗಳಷ್ಟೇ ಭಕ್ತರ ಪ್ರವೇಶದ ಸಂಖ್ಯೆಯನ್ನು 1,000 ದಿಂದ 2,000ಕ್ಕೆ ವಾರದ ದಿನಗಳಲ್ಲಿ ಮತ್ತು ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ 3,000ಕ್ಕೆ ಹೆಚ್ಚಿಸಲಾಗಿತ್ತು. ಈಗ ಹೈಕೋರ್ಟ್ ಸೂಚನೆಯಂತೆ ದೈನಂದಿನ ಭಕ್ತರ ಸಂಖ್ಯೆಯ ಮಿತಿಯನ್ನು 5,000ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ಶಬರಿಮಲೆ: ಮಾರ್ಗಸೂಚಿ ಪರಿಷ್ಕರಣೆ, ಭಕ್ತರು ಪಾಲಿಸಬೇಕಾಗಿದ್ದಿಷ್ಟುಶಬರಿಮಲೆ: ಮಾರ್ಗಸೂಚಿ ಪರಿಷ್ಕರಣೆ, ಭಕ್ತರು ಪಾಲಿಸಬೇಕಾಗಿದ್ದಿಷ್ಟು

ಡಿಸೆಂಬರ್ 31 ರಿಂದ ಜನವರಿ 19ರ ತನಕ ಮಕರವಿಳಕ್ಕು ಹಬ್ಬದ ಋತು ಆರಂಭವಾಗಲಿದೆ. ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ, ಕೊವಿಡ್ 19 ನೆಗಟಿವ್ ಇದ್ದ ಭಕ್ತರು ಮಾತ್ರ ಶಬರಿ ಬೆಟ್ಟವನ್ನೇರಬಹುದಾಗಿದೆ. ಈ ಮುಂಚೆ ಆಂಟಿಜನ್ ಪರೀಕ್ಷೆ ವರದಿಯಲ್ಲಿ ನೆಗಟಿವ್ ಎಂದರೆ ಬಂದರೆ ಸಾಕಿತ್ತು. ಆದರೆ, ಈಗ ಹೊಸ ನಿಬಂಧನೆ ಹಾಕಲಾಗಿದೆ.

English summary
Travancore Devaswom Board president said devotees must carry COVID-negative certificate from an RT-PCR test conducted not more than 48 hours prior to their visit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X