ಕೇರಳ ಚುನಾವಣೆ: ಸಿಪಿಐ(ಎಂ)ನಿಂದ 83 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಧರ್ಮದಂನಿಂದ ಪಿಣರಾಯಿ ವಿಜಯನ್ ಸ್ಪರ್ಧೆ

ತಿರುವನಂತಪುರಂ, ಮಾರ್ಚ್ 10: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಪಿಐ(ಎಂ) 83 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಪಕ್ಷದ ರಾಜ್ಯ ಕಾರ್ಯದರ್ಶಿ ಎ ವಿಜಯರಾಘವನ್ ಅವರು ಮಾಹಿತಿ ನೀಡಿ, ಧರ್ಮದಂ ಕ್ಷೇತ್ರದಿಂದ ಸಿಎಂ ಪಿಣರಾಯಿ ವಿಜಯನ್ ಸ್ಪರ್ಧಿಸಲಿದ್ದಾರೆ. ಸಿಪಿಐ(ಎಂ)ಗೆ ಬೆಂಬಲ ನೀಡಿದ್ದ ಒಂಬತ್ತು ಪಕ್ಷೇತರರು, ಬಂಡಾಯ ನಾಯಕ, ಉನ್ನತ ಶಿಕ್ಷಣ ಸಚಿವ ಕೆ.ಟಿ.ಜಲೀಲ್ ಹಾಗೂ 12 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 83 ಅಭ್ಯರ್ಥಿಗಳನ್ನು ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.

ವಿವಿಧ ಗೆಲುವಿನ ಅಂಶಗಳನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಮತ್ತು ಕೆಲವು ಅಭ್ಯರ್ಥಿಗಳ ಬಗ್ಗೆ ಆಕ್ಷೇಪ ಹೊಂದಿರುವ ಕಾರ್ಯಕರ್ತರ ಮನವೊಲಿಸಲು ಪ್ರಯತ್ನಿಸಲಾಗುವುದು ಎಂದಿದ್ದಾರೆ. ಇನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಧರ್ಮದಂ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

CPI-M Releases List Of 83 Candidates, Pinarayi Vijayan To Contest

140 ಸದಸ್ಯ ಬಲದ ಕೇರಳ ವಿಧಾನಸಭೆಗೆ ಏಪ್ರಿಲ್ 6 ರಂದು ಚುನಾವಣೆ ನಡೆಯಲಿದೆ. ಹಣಕಾಸು ಸಚಿವ ಥಾಮಸ್ ಐಸಾಕ್ ಮತ್ತು ಕಾರ್ಮಿಕ ಸಚಿವ ಜಿ ಸುಧಾಕರನ್ ಸೇರಿದಂತೆ ಐವರು ಹಾಲಿ ಸಚಿವರು ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ಆದರೆ ಡಿವೈಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಳಿಯ ಪಿಎ ಮೊಹಮ್ಮದ್ ರಿಯಾಸ್ ಅವರಿಗೆ ಬೆಪುರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+