ಕೇರಳದ ತಲಚ್ಚೇರಿಯಲ್ಲಿ ಸಿಪಿಐಎಂ ಕಾರ್ಯಕರ್ತನ ಹತ್ಯೆ
ಕಣ್ಣೂರು, ಫೆಬ್ರವರಿ 21: ಕೇರಳದ ಕಣ್ಣೂರಿನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸೋಮವಾರ ನಸುಕಿನ 2 ಗಂಟೆ ಸುಮಾರಿಗೆ ತಲಚ್ಚೇರಿಯ ನ್ಯೂ ಮಾಹೆಯಲ್ಲಿ ಈ ಘಟನೆ ನಡೆದಿದೆ.
ಕೊಲೆಯಾದವರನ್ನು ಪುನ್ನೋಲ್‌ನ ನಿವಾಸಿ ಎಂದು ಗುರುತಿಸಲಾಗಿದೆ. ಮೀನುಗಾರನಾಗಿದ್ದ ಕೊರಂಬಿಲ್ ಹರಿದಾಸ್ ಎಂಬಾತ ಕೊಲೆಯಾದ ವ್ಯಕ್ತಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ "ರಾಜಕೀಯ ಕೊಲೆ"ಯ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತರು ಇದ್ದಾರೆ ಎಂದು ಸಿಪಿಐ(ಎಂ) ಆರೋಪಿಸಿದೆ. ಆದರೆ, ಆರೆಸ್ಸೆಸ್ ಅಲ್ಲಗೆಳೆದಿದೆ.

ವರದಿಗಳ ಪ್ರಕಾರ, ಹರಿದಾಸ್ ಅವರು ಸಿಪಿಐಎಂನ ಸಕ್ರಿಯ ಸದಸ್ಯರಾಗಿದ್ದರು ಮತ್ತು ಅವರು ಕೆಲಸದಿಂದ ಮನೆಗೆ ಮರಳುತ್ತಿದ್ದಾಗ ಅವರ ಮನೆಯ ಮುಂದೆ ದಾಳಿ ಮಾಡಿದ್ದಾರೆ.
ಕೊಲೆ ಆರೋಪದ ಮೇಲೆ ಸಿಪಿಐ(ಎಂ) ನ್ಯೂ ಮಾಹೆ ಮತ್ತು ತಲಚ್ಚೇರಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೇರಳದಲ್ಲಿ ರಾಜಕೀಯ ಪ್ರೇರಿತ ಕೊಲೆಗಳು
2016ರಲ್ಲಿ ಆರೆಸ್ಸೆಸ್ ಹಾಗೂ ಬಿಜೆಪಿಯ ಕಾರ್ಯಕರ್ತ ವಿನೀಶ್ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕಣ್ಣೂರು ಜಿಲ್ಲೆ ಇರಿಟ್ಟಿಯ ತಿಲ್ಲಂಗೇರಿ ಸಮೀಪದ ನಿವಾಸಿಯಾಗಿದ್ದ. ಇದಕ್ಕೂ ಮುನ್ನ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್) ಹಾಗೂ ರಾಷ್ಟೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನ ಸಕ್ರಿಯ ಕಾರ್ಯಕರ್ತ ಸಿ.ಕೆ ರಾಮಚಂದ್ರನ್ ಅವರನ್ನು ಕಚ್ಚಾ ಬಾಂಬ್ ಎಸೆದು ಕೊಲೆ ಮಾಡಲಾಗಿತ್ತು.
2017ರಲ್ಲಿ ಸಿಪಿಐ(ಎಂ) ಕಾರ್ಯಕರ್ತ ಧನರಾಜ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಆರೆಸ್ಸೆಸ್ -ಬಿಜೆಪಿ ಕಾರ್ಯಕರ್ತ ಚೂರಕ್ಕತ್ತು ಬಿಜು ಅವರನ್ನು ಕಣ್ಣೂರಿನ ಪಯಣ್ಣೂರು ಬಳಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕಕ್ಕಂಪರ ಮಂಡಲದ ಆರೆಸ್ಸೆಸ್ ಕಾರ್ಯಕರ್ತನಾಗಿದ್ದ ಬಿಜು ಅವರು ಧನರಾಜ್ ಕೊಲೆ ಕೇಸಿನಲ್ಲಿ 12ನೇ ಆರೋಪಿಯಾಗಿದ್ದಾರೆ. ಧನರಾಜ್ ಅವರನ್ನು ಜುಲೈ 2016ರಲ್ಲಿ ಅವರ ಮನೆಯಲ್ಲೇ ಹತ್ಯೆ ಮಾಡಲಾಗಿತ್ತು.
ಕಣ್ಣೂರು ಬಿಜೆಪಿ ಕಾರ್ಯಕರ್ತ ಅಂಡಲ್ಲೂರ್ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಸಿಪಿಎಂ ಕಾರ್ಯಕರ್ತರನ್ನು ಬಂಧಿಸಿದ್ದರು.
ಸಿಪಿಐಎಂ ಹಾಗೂ ಬಿಜೆಪಿ ನಡುವಿನ ರಾಜಕೀಯ ದ್ವೇಷಕ್ಕೆ 2016-2018ರ ಅವಧಿಯಲ್ಲಿ 12ಕ್ಕೂ ಅಧಿಕ ಮಂದಿ ಬಲಿಯಾಗಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications