ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪ್ಪಳಿಸಲಿದೆ ಬುರೆವಿ ಚಂಡಮಾರುತ: ಡಿ.3ರಂದು ಕೇರಳಕ್ಕೆ ರೆಡ್ ಅಲರ್ಟ್

|
Google Oneindia Kannada News

ತಿರುವನಂತಪುರಂ, ಡಿಸೆಂಬರ್ 02: ಬುರೆವಿ ಚಂಡಮಾರುತ ಅಪ್ಪಳಿಸಲಿರುವ ಕಾರಣ ಕೇರಳಕ್ಕೆ ಡಿಸೆಂಬರ್ 03 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ನಿವಾರ್ ಚಂಡಮಾರುತ ಹೋದ ಬಳಿಕ ಮತ್ತೊಂದು ಚಂಡಮಾರುತ ಆರಂಭವಾಗಲಿದೆ. ಇಂದು ರಾತ್ರಿ ಶ್ರೀಲಂಕಾ ಗಡಿಯನ್ನು ತಲುಪಲಿದೆ.

ಕರ್ನಾಟಕದಲ್ಲಿ ಡಿಸೆಂಬರ್ 3ರಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಕರ್ನಾಟಕದಲ್ಲಿ ಡಿಸೆಂಬರ್ 3ರಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ತಿರುವನಂತಪುರಂ, ಕೊಲ್ಲಂ, ತಟ್ಟಣಂತಿಟ್ಟ, ಅಲಪ್ಪುರದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

Cyclone Burevi: IMD Issues Red Alert In Four Kerala Districts For December 3

ತಮಿಳುನಾಡು ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬುರೆವಿ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಡಿಸೆಂಬರ್ 4ಕ್ಕೆ ಚಂಡುಮಾರುತ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ವಿಭಾಗ ಮಂಗಳವಾರ ಹೇಳಿತ್ತು. ಡಿಸೆಂಬರ್ 3 ರಂದು ಕೇರಳ ಮತ್ತು ದಕ್ಷಿಣ ತಮಿಳುನಾಡಿನಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಆಲರ್ಟ್ ಘೋಷಿಸಿದೆ.

ಚಂಡಮಾರುತ ಭಾದಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ.

ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿರುವ ವಿಷಯವನ್ನು ಟ್ವೀಟರ್ ನಲ್ಲಿ ತಿಳಿಸಿರುವ ಪ್ರಧಾನಿ ಮೋದಿ, ಬುರೆವಿ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದು, ಉಭಯ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದಾರೆ.

English summary
The Indian Meteorological department has issued a red alert in four districts of Kerala — Thiruvananthapuram, Kollam, Pathanamthitta and Alappuzha for December 3 in the view of Burevi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X