ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏರ್ ಇಂಡಿಯಾ ವಿಮಾನ ಅವಘಡದ ಬಗ್ಗೆ ವಿದೇಶಾಂಗ ಸಚಿವರ ಟ್ವೀಟ್

|
Google Oneindia Kannada News

ತಿರುವನಂತಪುರಂ, ಆಗಸ್ಟ್.07: ಕೇರಳದ ದುಬೈ-ಕೋಳಿಕ್ಕೋಡ್ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ ಕೇಳಿ ತುಂಬಾ ಸಂಕಟವಾಗುತ್ತಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಟ್ವೀಟ್ ಮಾಡಿದ್ದಾರೆ.

Recommended Video

Kerala Flight Crash ನಂತರ ಮತ್ತೆ ನೆನಪಾಯ್ತು Mangalore ದುರಂತ | Oneindia Kannada

ಏರ್ ಇಂಡಿಯಾ ವಿಮಾನ ಅವಘಡದಲ್ಲಿ ಗಾಯಗೊಂಡವರಿಗೆ ಯಾವುದೇ ಅಪಾಯವಾಗದಂತೆ ಪ್ರಾರ್ಥಿಸೋಣ. ಈಗಾಗಲೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಡಾ.ಎಸ್. ಜೈಶಂಕರ್ ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

Just In: ಏರ್ ಇಂಡಿಯಾ ವಿಮಾನ ಅವಘಡ, ಇಬ್ಬರು ಸಾವುJust In: ಏರ್ ಇಂಡಿಯಾ ವಿಮಾನ ಅವಘಡ, ಇಬ್ಬರು ಸಾವು

ದುಬೈನಿಂದ ಕೇರಳದ ಕೋಳಿಕೋಡ್ ಗೆ ಹೊರಟಿದ್ದ ಏರ್ ಇಂಡಿಯಾದ IX1344 ವಿಮಾನವು ಶುಕ್ರವಾರ ಸಂಜೆ 7.45ರ ವೇಳೆಗೆ ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

Deeply Distressed To Hear About The Air India Express Tragedy At Kozhikode: Dr.Jaishankar

ಯಾವುದೇ ರೀತಿ ಬೆಂಕಿ ಕಾಣಿಸಿಕೊಂಡಿಲ್ಲ:

ಇನ್ನು, ಏರ್ ಇಂಡಿಯಾದ IX1344 ವಿಮಾನದಲ್ಲಿ ಇಬ್ಬರು ಪೈಲೆಟ್, ಆರು ಮಂದಿ ಸಿಬ್ಬಂದಿ, 10 ಶಿಶುಗಳು ಸೇರಿದಂತೆ 174 ಮಂದಿ ಪ್ರಯಾಣಿಕರಿದ್ದರು. ವಿಮಾನ ಅವಘಡದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕರಿಪುರ್ ವಿಮಾನ ದುರಂತ: ಸಂತ್ರಸ್ತರಿಗೆ ಸಹಾಯವಾಣಿ ಪ್ರಕಟ ಕರಿಪುರ್ ವಿಮಾನ ದುರಂತ: ಸಂತ್ರಸ್ತರಿಗೆ ಸಹಾಯವಾಣಿ ಪ್ರಕಟ

ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನದ ವೇಳೆ ಅವಘಡ ಸಂಭವಿಸಿದೆ. ಆದರೆ ರನ್ ವೇನಲ್ಲಿ ಲ್ಯಾಂಡಿಂಗ್ ವೇಳೆ ಯಾವುದೇ ರೀತಿಯ ಬೆಂಕಿ ಕಾಣಿಸಿಕೊಂಡಿಲ್ಲ. ವಿಮಾನ ಅವಘಡದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ತೆರಳಿದ್ದು, ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗುತ್ತಿದೆ.

English summary
Deeply Distressed To Hear About The Air India Express Tragedy At Kozhikode: External Affairs Minister Dr.Jaishankar Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X