Just In: ಏರ್ ಇಂಡಿಯಾ ವಿಮಾನ ಅವಘಡ, ಇಬ್ಬರು ಸಾವು

ಕೋಯಿಕ್ಕೋಡ್, ಆಗಸ್ಟ್.07: ಕೇರಳದ ಕೋಯಿಕ್ಕೋಡ್ ನಲ್ಲಿ ಏರ್ ಇಂಡಿಯಾ ವಿಮಾನ ಅವಘಡವೊಂದು ಸಂಭವಿಸಿದೆ. ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನವು ಸ್ಕಿಡ್ ಆಗಿರುವ ಬಗ್ಗೆ ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ.

Recommended Video

      Kerala Flight Crash ನಂತರ ಮತ್ತೆ ನೆನಪಾಯ್ತು Mangalore ದುರಂತ | Oneindia Kannada

      ದುಬೈನಿಂದ ಕೇರಳದ ಕೋಯಿಕ್ಕೋಡ್ ಗೆ ಹೊರಟಿದ್ದ ಏರ್ ಇಂಡಿಯಾದ IX1344 ವಿಮಾನವು ಶುಕ್ರವಾರ ಸಂಜೆ 7.45ರ ವೇಳೆಗೆ ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

      Dubai-Kozhikode Air India Flight Crash On Karipur Runway, Many Injured

      ಇನ್ನು, ಏರ್ ಇಂಡಿಯಾದ IX1344 ವಿಮಾನದಲ್ಲಿ ಇಬ್ಬರು ಪೈಲೆಟ್ ಆರು ಮಂದಿ ಸಿಬ್ಬಂದಿ ಸೇರಿದಂತೆ 174 ಮಂದಿ ಪ್ರಯಾಣಿಕರಿದ್ದರು. ವಿಮಾನ ಅವಘಡದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

      ಯಾವುದೇ ರೀತಿ ಬೆಂಕಿ ಕಾಣಿಸಿಕೊಂಡಿಲ್ಲ:
      ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನದ ವೇಳೆ ಅವಘಡ ಸಂಭವಿಸಿದೆ. ಆದರೆ ರನ್ ವೇನಲ್ಲಿ ಲ್ಯಾಂಡಿಂಗ್ ವೇಳೆ ಯಾವುದೇ ರೀತಿಯ ಬೆಂಕಿ ಕಾಣಿಸಿಕೊಂಡಿಲ್ಲ. ವಿಮಾನ ಅವಘಡದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ತೆರಳಿದ್ದು, ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+