• search
 • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಿಎಫ್ಐ ಚೇರ್ಮನ್ ಮನೆ ಸೇರಿದಂತೆ ವಿವಿಧೆಡೆ ED ದಾಳಿ

|

ತಿರುವನಂತಪುರಂ, ಡಿ.3: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಚೇರ್ಮನ್ ಓ.ಎಂ ಅಬ್ದುಲ್ ಸಲಾಂ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್ ಎಲಾಮರಂ ಅವರ ಕೇರಳ ಕಚೇರಿ ಹಾಗೂ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಳಗ್ಗೆಯಿಂದ ಪರಿಶೀಲನೆ, ದಾಳಿ ನಡೆಸಿದ್ದಾರೆ.

ಮನಿ ಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪಿಎಫ್ಐ ಮುಖಂಡರ ಮನೆ ಹಾಗೂ ಕಚೇರಿ ಮೇಲೆ ಇಡಿ ದಾಳಿ ಮುಂದುವರೆಸಿದೆ.

ಕೇರಳ, ಕರ್ನಾಟಕರ ಸೇರಿದಂತೆ 26 ಕಡೆ ಏಕ ಕಾಲದಲ್ಲಿ ದಾಳಿ ಮಾಡಲಾಗಿದ್ದು, ಪಿಎಫ್ಐ ಸಂಘಟನೆಗೆ ದೇಶ ವಿದೇಶದಿಂದ ಹಣ ಬಂದ ಹಿನ್ನಲೆಯನ್ನು ಪರಿಶೀಲಿಸಲಾಗುತ್ತಿದೆ.

ಕೇರಳದ ಮಲಪ್ಪುರಂ, ಎರ್ನಾಕುಲಂ ಹಾಗೂ ತಿರುವನಂತಪುರಂ ಜಿಲ್ಲೆಗಳ ವಿವಿಧೆಡೆ ದಾಳಿ ನಡೆದಿದೆ. ಮನಿಲಾಂಡ್ರಿಂಗ್ ಕಾಯ್ದೆ ಉಲ್ಲಂಘನೆ(ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೆಂಗಳೂರು, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ,ದೆಹಲಿ, ಉತ್ತರ ಪ್ರದೇಶ,ಬಿಹಾರ, ಮಹಾರಾಷ್ಟ್ರ ರಾಜಸ್ಥಾನಗಳಲ್ಲಿ ಏಕಕಾಲಕ್ಕೆ ದಾಳಿ ಮುಂದುವರೆದಿದೆ.

   Atulya Ganga : ಗಂಗೆಯನ್ನು ಶುದ್ಧಗೊಳಿಸಲು ನಿವೃತ್ತ ಸೈನಿಕರ ಮಹಾ ಯೋಜನೆ | Oneindia Kannada

   ವಿದೇಶದಿಂದ ಕೋಟಿ ಕೋಟಿ ಹಣ ಪಿಎಫ್ಐ ಸಂಘಟನೆಗೆ ಬಂದಿದ್ದುಮ, ಹಣದ ಮೂಲದ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಬ್ಯಾಂಕ್ ಖಾತೆಗಳ ವಿವರವನ್ನು ಇಡಿ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.

   English summary
   The Enforcement Directorate(ED) on Thursday raided the premises of Popular front of India(PFI) chairman O.M Abdul Salam and many places in Kerala.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X