ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಸೂಪರ್ ಸ್ಟಾರ್ ಕಣಕ್ಕೆ?
ವಯನಾಡು(ಕೇರಳ), ಮಾರ್ಚ್ 31: ಕೇರಳದ ವಯಾನಾಡ್ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ಅಧ್ಯಕ್ಷ ರಾಹುಲ್ಗಾಂಧಿ ಅವರು ಸ್ಪರ್ಧಿಸುವುದಾಗಿ ಘೋಷಿಸಿದ ಬಳಿಕ ಭಾರಿ ರಾಜಕೀಯ ಚಟುವಟಿಕೆಗಳು ಆರಂಭವಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಆಡಳಿತಾರೂಢದ ಎಡಪಕ್ಷದ ಅಭ್ಯರ್ಥಿಯ ವಿರುದ್ಧ ರಾಹುಲ್ ಸ್ಪರ್ಧಿಸುತ್ತಿದ್ದು, ಈಗ ರಾಹುಲ್ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಈ ಕುರಿತಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಉತ್ತರಪ್ರದೇಶದ ಅಮೇಥಿಯಲ್ಲಿ ರಾಹುಲ್ವಿರುದ್ಧ ಸ್ಪರ್ಧಿಸುತ್ತಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ರಾಹುಲ್ ಇನ್ನೊಂದು ಕ್ಷೇತ್ರದಿಂದ ಸ್ಪರ್ಧೆಗಿಳಿದರೆ, ಆ ಕ್ಷೇತ್ರದಿಂದಲೂ ಉಮೇದುವಾರಿಕೆ ಸಲ್ಲಿಸಲು ಸ್ಮೃತಿ ಮುಂದಾಗುತ್ತಾರೆ ಎನ್ನಲಾಗಿತ್ತು.

ಆದರೆ, ಈ ಬಗ್ಗೆ ಯಾವುದೇ ಸುದ್ದಿ ಇನ್ನೂ ಬಂದಿಲ್ಲ. ಹೀಗಾಗಿ, ಚಿತ್ರರಂಗದ ಸೂಪರ್ ಸ್ಟಾರ್ ನಟ ಸುರೇಶ್ ಗೋಪಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿರುವ ಸುದ್ದಿ ಬಂದಿದೆ. ಸುರೇಶ್ ಅಲ್ಲದೆ ಸ್ಥಳೀಯ ಬಿಜೆಪಿ ಮುಖಂಡರ ಹಲವು ಹೆಸರುಗಳು ಪ್ರಸ್ತಾಪಗೊಳ್ಳುತ್ತಿವೆ. ಭಾನುವಾರ ರಾತ್ರಿಯೊಳಗೆ ಈ ಬಗ್ಗೆ ಒಂದು ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ಬಿಜೆಪಿ ರಾಜ್ಯಾಧ್ಯಕ್ಷ ಶ್ರೀಧರನ್ ಪಿಳ್ಳೈ ಅವರು ಪಕ್ಷ ಬಯಸಿದರೆ ಕಣಕ್ಕಿಳಿಯಲು ಸಿದ್ಧ ಎಂದು ಘೋಷಿಸಿದಾರೆ. ಬಿಡಿಜೆಎಸ್ ಅಧ್ಯಕ್ಷ ತುಷಾರ್ ವೆಲ್ಲಪಲ್ಲಿ ಅವರು ತಮ್ಮ ಪಕ್ಷದ ಅಭ್ಯರ್ಥಿ ಪೈಲಿ ವಾಥ್ಯಾತ್ ಜತೆ ಕೂಡಾ ಈ ಬಗ್ಗೆ ಚರ್ಚಿಸಿದ್ದು, ಶ್ರೀಧರನ್ ಅವರ ಜೊತೆ ಕೂಡಾ ಸಭೆ ನಡೆಸಿದ್ದಾರೆ.












Click it and Unblock the Notifications