ಕೇರಳದಲ್ಲಿ ಕೊಲ್ಲಂನಲ್ಲಿ ಆನೆ ಹತ್ಯೆ; ಮೂವರ ಬಂಧನ
ತಿರುವನಂತಪುರಂ, ಜೂನ್ 11 : ಕೇರಳದಲ್ಲಿ ಏಪ್ರಿಲ್ ನಡೆದಿದ್ದ ಆನೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಗರ್ಭಿಣಿ ಆನೆ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದ ಬಳಿಕ ಕೇರಳದಲ್ಲಿ ಆನೆಗಳ ಹತ್ಯೆ ಬಗ್ಗೆ ಚರ್ಚೆ ನಡೆಯುತ್ತಿದೆ.
Recommended Video
ಕೇರಳದ ಕೊಲ್ಲಂ ಜಿಲ್ಲೆಯಲ್ಲಿ 2020ರ ಏಪ್ರಿಲ್‌ನಲ್ಲಿ ಆನೆ ಮೃತಪಟ್ಟಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಬೇಟೆಯಾಡಿದ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಕೊಲ್ಲಂನ ಪುನಲೂರ್ ಅರಣ್ಯ ಪ್ರದೇಶದಲ್ಲಿ ಹೆಣ್ಣು ಆನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಆಗ ಗುಂಪಿನ ಜೊತೆ ಕಾಡಿನೊಳಗೆ ಓಡಿ ಹೋಗಿತ್ತು. ಎರಡು ದಿನದ ಬಳಿಕ ಅದೇ ಪ್ರದೇಶದಲ್ಲಿ ಪತ್ತೆಯಾಗಿತ್ತು.

ಆನೆಯ ದವಡೆ ಮುರಿದಿತ್ತು, ಆಹಾರ ಸೇವಿಸಲು ಸಾಧ್ಯವಾಗದೇ ನಿತ್ರಾಣಗೊಂಡಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಆನೆಗೆ ಎರಡು ದಿನ ಚಿಕಿತ್ಸೆ ನೀಡಿದ್ದರು. ಆದರೆ, ನಿತ್ರಾಣಗೊಂಡಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿತ್ತು.
ಪಟಾಕಿ ತುಂಬಿದ ಅನಾನಸ್ ಹಣ್ಣನ್ನು ನೀಡಿ ಗರ್ಭಿಣಿ ಆನೆಯನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದ ಬಳಿಕ ಕೇರಳದಲ್ಲಿ ಈ ಆನೆಯ ಹತ್ಯೆ ಬಗ್ಗೆಯೂ ಚರ್ಚೆ ಆರಂಭವಾಗಿತ್ತು. ಆಗ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು. ಗುರುವಾರ ಮೂವರನ್ನು ಬಂಧಿಸಲಾಗಿದೆ.
ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಾಥಮಿಕ ವರದಿ ಬಂದಿದ್ದು, ಆಕಸ್ಮಿಕವಾಗಿ ಆನೆ ಪಟಾಕಿ ತಿಂದಿದೆ ಎಂದು ವರದಿ ಹೇಳಿದೆ.












Click it and Unblock the Notifications