ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಕೊಲ್ಲಂನಲ್ಲಿ ಆನೆ ಹತ್ಯೆ; ಮೂವರ ಬಂಧನ

|
Google Oneindia Kannada News

ತಿರುವನಂತಪುರಂ, ಜೂನ್ 11 : ಕೇರಳದಲ್ಲಿ ಏಪ್ರಿಲ್ ನಡೆದಿದ್ದ ಆನೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಗರ್ಭಿಣಿ ಆನೆ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದ ಬಳಿಕ ಕೇರಳದಲ್ಲಿ ಆನೆಗಳ ಹತ್ಯೆ ಬಗ್ಗೆ ಚರ್ಚೆ ನಡೆಯುತ್ತಿದೆ.

Recommended Video

ಚಿರು ನಂತರ ಕೇರಳದಲ್ಲಿ ನಡೆಯಿತು ಮತ್ತೊಂದು ಮನಕಲಕುವ ಘಟನೆ | Nithin Chandran

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ 2020ರ ಏಪ್ರಿಲ್‌ನಲ್ಲಿ ಆನೆ ಮೃತಪಟ್ಟಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಬೇಟೆಯಾಡಿದ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ; ಒಬ್ಬ ಆರೋಪಿ ಬಂಧನಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ; ಒಬ್ಬ ಆರೋಪಿ ಬಂಧನ

ಕೊಲ್ಲಂನ ಪುನಲೂರ್ ಅರಣ್ಯ ಪ್ರದೇಶದಲ್ಲಿ ಹೆಣ್ಣು ಆನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಆಗ ಗುಂಪಿನ ಜೊತೆ ಕಾಡಿನೊಳಗೆ ಓಡಿ ಹೋಗಿತ್ತು. ಎರಡು ದಿನದ ಬಳಿಕ ಅದೇ ಪ್ರದೇಶದಲ್ಲಿ ಪತ್ತೆಯಾಗಿತ್ತು.

Elephant Killed In Kollam Three Arrested

ಆನೆಯ ದವಡೆ ಮುರಿದಿತ್ತು, ಆಹಾರ ಸೇವಿಸಲು ಸಾಧ್ಯವಾಗದೇ ನಿತ್ರಾಣಗೊಂಡಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಆನೆಗೆ ಎರಡು ದಿನ ಚಿಕಿತ್ಸೆ ನೀಡಿದ್ದರು. ಆದರೆ, ನಿತ್ರಾಣಗೊಂಡಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿತ್ತು.

ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ; ಎಫ್‌ಐಆರ್ ದಾಖಲುಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ; ಎಫ್‌ಐಆರ್ ದಾಖಲು

ಪಟಾಕಿ ತುಂಬಿದ ಅನಾನಸ್ ಹಣ್ಣನ್ನು ನೀಡಿ ಗರ್ಭಿಣಿ ಆನೆಯನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದ ಬಳಿಕ ಕೇರಳದಲ್ಲಿ ಈ ಆನೆಯ ಹತ್ಯೆ ಬಗ್ಗೆಯೂ ಚರ್ಚೆ ಆರಂಭವಾಗಿತ್ತು. ಆಗ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು. ಗುರುವಾರ ಮೂವರನ್ನು ಬಂಧಿಸಲಾಗಿದೆ.

ಕೇರಳದಲ್ಲಿ ಗರ್ಭಿಣಿ ಆನೆ ಸಾವು; ಪ್ರಾಥಮಿಕ ತನಿಖಾ ವರದಿ ಬಹಿರಂಗ ಕೇರಳದಲ್ಲಿ ಗರ್ಭಿಣಿ ಆನೆ ಸಾವು; ಪ್ರಾಥಮಿಕ ತನಿಖಾ ವರದಿ ಬಹಿರಂಗ

ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಾಥಮಿಕ ವರದಿ ಬಂದಿದ್ದು, ಆಕಸ್ಮಿಕವಾಗಿ ಆನೆ ಪಟಾಕಿ ತಿಂದಿದೆ ಎಂದು ವರದಿ ಹೇಳಿದೆ.

English summary
Three accused have been arrested and booked for hunting in connection with the death of an elephant in Pathanapuram region of Kollam district in April 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X