• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಅವರಿಗೆ ಕೊವಿಡ್-19 ಸೋಂಕು

|

ತಿರುವನಂತಪುರಂ, ಏಪ್ರಿಲ್ 08: ಕೇರಳದಲ್ಲಿ ಕೊರೊನಾವೈರಸ್ ಸೋಂಕು ಮುಖ್ಯಮಂತ್ರಿ ಆದಿಯಾಗಿ ರಾಜಕಾರಣಿಗಳನ್ನು ಸುತ್ತುವರಿಯುತ್ತಿದೆ. ಕಾಂಗ್ರೆಸ್ಸಿನ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕೊರೊನಾವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆ 77 ವರ್ಷದ ಉಮ್ಮನ್ ಚಾಂಡಿ ಅವರನ್ನು ತಿರುವನಂತಪುರಂನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಕೊಟ್ಟಾಯಂ ಕ್ಷೇತ್ರದಿಂದ ಕಾಂಗ್ರಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿರಲಿಲ್ಲ ಎಂದು ತಿಳಿದು ಬಂದಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರಿಗೆ ಕೊರೊನಾವೈರಸ್

ಗುರುವಾರವೇ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. "ನನಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಿಂದ ಗೊತ್ತಾಗಿದೆ. ಕೊಚಿಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಐದು ದಿನಗಳ ಹಿಂದೆಯಷ್ಟೇ ಲಸಿಕೆ ಪಡೆದಿದ್ದರು:

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಳೆದ ಏಪ್ರಿಲ್ 3ರಂದು ಕೊವಿಡ್-19 ಲಸಿಕೆಯನ್ನು ಪಡೆದುಕೊಂಡಿದ್ದರು. ಅದಾಗಿ ಐದು ದಿನಗಳಲ್ಲೇ ಕೊರೊನಾವೈರಸ್ ಸೋಂಕು ತಗುಲಿರುವುದು ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆ ಇತ್ತೀಚಿನ ದಿನಗಳಲ್ಲಿ ನನ್ನ ಜೊತೆ ಸಂಪರ್ಕಕ್ಕೆ ಬಂದವರು ಕೊರೊನಾವೈರಸ್ ಸೋಂಕಿತ ತಪಾಸಣೆ ಮಾಡಿಸಿಕೊಳ್ಳಬೇಕು ಹಾಗೂ ಸ್ವಯಂಪ್ರೇರಿತರಾಗಿ ಆರೋಗ್ಯದ ಮೇಲೆ ನಿಗಾ ವಹಿಸಬೇಕು ಎಂದು ಪಿಣರಾಯಿ ವಿಜಯನ್ ಮನವಿ ಮಾಡಿಕೊಂಡಿದ್ದಾರೆ.

English summary
Senior Congress Leader And Former Kerala CM, Oommen Chandy Tests Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X