ಕೇಂದ್ರದ ಮಾಜಿ ಸಚಿವ ವೀರೇಂದ್ರ ಕುಮಾರ್ ನಿಧನ

ಕೋಳಿಕ್ಕೋಡ್, ಮೇ 29: ಕೇಂದ್ರದ ಮಾಜಿ ಸಚಿವ ರಾಜ್ಯಸಭೆ ಸದಸ್ಯ ವೀರೇಂದ್ರ ಕುಮಾರ್ ಕೋಳಿಕ್ಕೋಡ್ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 84 ವರ್ಷದ ವೀರೇಂದ್ರ ಕುಮಾರ್ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಲೋಕತಾಂತ್ರಿಕ ಜನತಾದಳದ ಅಧ್ಯಕ್ಷರಾಗಿದ್ದ ವಿರೇಂದ್ರ ಕುಮಾರ್ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು, ಸುದ್ದಿ ಸಂಸ್ಥೆಗಳಾದ ಪಿಟಿಐ ಮತ್ತು ಐಎನ್ ಎಸ್ ಗಳ ಅಧ್ಯಕ್ಷರು ಮತ್ತು ಮಾತೃಭೂಮಿ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

1996 ಮತ್ತು 1997 ರಲ್ಲಿ ಕೋಳಿಕ್ಕೋಡ್ ಸಂಸದರಾಗಿದ್ದ ಇವರು ಕೇಂದ್ರದಲ್ಲಿ ಸಚಿವರು ಆಗಿದ್ದರು, ಉತ್ತಮ ಬರಹಗಾರರಾಗಿದ್ದ ವಿರೇಂದ್ರ ಕುಮಾರ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವ- ಪುರಸ್ಕಾರಗಳು ಸಂದಿವೆ.

Former Union Minister MP Veerendra Kumar Passed Away

ಕೇರಳದ ವೈನಾಡಿನ ಕಲ್ಪೇಟದ ಜೈನ ಕುಟುಂಬದಲ್ಲಿ ಜನಿಸಿದ ವಿರೇಂದ್ರ ಕುಮಾರ್ 1968 ರಲ್ಲಿ ಸಂಯುಕ್ತ ಸೋಷಲಿಸ್ಟ್ ಪಕ್ಷದ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+