ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಸ್ಮಗಲಿಂಗ್ ಕೇಸ್: ಕೇರಳ ಸಚಿವ ಕೆಟಿ ಜಲೀಲ್ ವಿಚಾರಣೆ

|
Google Oneindia Kannada News

ತಿರುವನಂತಪುರಂ, ಸೆ. 17: ಕೇರಳದ ಚಿನ್ನ ಸ್ಮಗಲಿಂಗ್ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಹಾಗೂ ಇತರರಿಗೆ ನೆರವಾದ ಆರೋಪದ ಮೇಲೆ ಕೇರಳದ ಆರೋಗ್ಯ ಸಚಿವ ಕೆ.ಟಿ ಜಲೀಲ್ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ರಾಷ್ಟ್ರೀಯ ತನಿಖಾ ದಳ(ಎನ್ಐಎ) ಕಚೇರಿಗೆ ಇಂದು ಜಲೀಲ್ ಆಗಮಿಸಿದರು.

ಜಲೀಲ್ ಬಂಧನಕ್ಕೆ ಆಗ್ರಹಿಸಿ ಕೇರಳದೆಲ್ಲೆಡೆ ಬಿಜೆಪಿ ಹಾಗೂ ಇತರೆ ಪಕ್ಷಗಳು ಭಾರಿ ಪ್ರತಿಭಟನೆ ನಡೆಸಿದ್ದವು. ಸಿಎಂ ಆಪ್ತರಾಗಿರುವ ಅಮಾನತುಗೊಂಡಿರುವ ಐಎಎಎಸ್ ಅಧಿಕಾರಿ ಎಂ ಶಿವಶಂಕರ್ ಅವರನ್ನು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ದ ಅಧಿಕಾರಿಗಳು, ಕಸ್ಟಮ್ಸ್ ಅಧಿಕಾರಿಗಳು, ಜಾರಿ ನಿರ್ದೇಶನಾಲಯವು ಹಲವು ಬಾರಿ ವಿಚಾರಣೆಗೊಳಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಚಿನ್ನ ಸ್ಮಗಲಿಂಗ್: ಪಿಣರಾಯಿಗೆ ಕ್ಲೀನ್ ಚಿಟ್ ಕೊಟ್ಟ ಎನ್ಐಎ ಚಿನ್ನ ಸ್ಮಗಲಿಂಗ್: ಪಿಣರಾಯಿಗೆ ಕ್ಲೀನ್ ಚಿಟ್ ಕೊಟ್ಟ ಎನ್ಐಎ

ಪ್ರಕರಣದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಅವರಿಗೆ ಸಿಎಂ ಸಚಿವಾಲಯದ ಅಧೀನದ ಐಟಿ ಇಲಾಖೆಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಯನ್ನು ಕೊಡಿಸುವಲ್ಲಿ ಶಿವಶಂಕರ್ ಮಹತ್ವದ ಪಾತ್ರ ವಹಿಸಿದ್ದರು ಎಂದು ಆರೋಪ ಕೇಳಿ ಬಂದಿದೆ. ಆರೋಪ ಕೇಳಿ ಬಂದ ಬಳಿಕ ಸಿಎಂ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ತೆಗೆದು ಹಾಕಲಾಗಿತ್ತು. ಜೊತೆಗೆ ಸಿಎಂ ಪಿಣರಾಯಿ ವಿಜಯನ್ ಅವರಿಗೂ ಕ್ಲೀನ್ ಚಿಟ್ ಸಿಕ್ಕಿರುವ ಸುದ್ದಿ ಬಂದಿದೆ.

Gold smuggling case: Minister Jaleel appears before NIA team

ಕೇರಳ ಸಚಿವ ಕೆಟಿ ಜಲೀಲ್ ವಿಚಾರಣೆ ಏಕೆ?

ಕೆಟಿ ಜಲೀಲ್ ಅವರುಎಫ್ ಸಿ ಆರ್ ಎ ಉಲ್ಲಂಘನೆ ಮಾಡಿ ಯುಎಇ ಕಾನ್ಸುಲೇಟ್ ಮೂಲಕ ರಾಜತಾಂತ್ರಿಕ ಭದ್ರತೆಯೊಂದಿಗೆ ಪವಿತ್ರ ಖುರಾನ್ ತರೆಸಿಕೊಂಡಿದ್ದರು ಎಂದು ಟಿವಿ ವಾಹಿನಿಯೊಂದು ವಿಡಿಯೋ ಪ್ರಸಾರ ಮಾಡಿತ್ತು. ಈ ಬಗ್ಗೆ ಪ್ರಶ್ನಿಸಲು ಎನ್ಐಎ ಬಯಸಿದ್ದರಿಂದ ಖಾಸಗಿ ವಾಹನದ ಮೂಲಕ ಎನ್ಐಎ ಕಚೇರಿಗೆ ಬಂದಿದ್ದಾರೆ.

ಕಳೆದ ವಾರ ಜಾರಿ ನಿರ್ದೇಶನಾಲಯದ ಕಚೇರಿಗೆ ತೆರಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ದಾಖಲಿಸಿದ್ದರು. ಯುಎಇ ರಾಯಭಾರ ಕಚೇರಿಯಿಂದ ಸಾಮಾಗ್ರಿ ಸಾಗಣಿಕೆಯಲ್ಲಿ ಸ್ವಪ್ನಗೆ ನೆರವಾದ ಆರೋಪವೂ ಇದೆ.

Gold smuggling case: Minister Jaleel appears before NIA team

ಚಿನ್ನದ ಸ್ಮಗಲಿಂಗ್ ಕೇಸ್ ಹಿನ್ನೆಲೆ:
ಯುಎಇ ಕಾನ್ಸುಲೇಟ್ ಅಧಿಕಾರಿಯಾಗಿದ್ದ ಪಿಎಸ್ ಸರೀತ್, ಮಾಜಿ ಉದ್ಯೋಗಿ ಸ್ವಪ್ನ ಸುರೇಶ್, ಸಂದೀಪ್ ನಾಯರ್, ಫೈಜಲ್ ಫರೀದ್ ಅವರ ವಿರುದ್ಧ Unlawful Activities (Prevention) Act ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಎನ್ಐಎ ತನಿಖೆ ಮುಂದುವರೆಸಿದೆ.

2019ರಿಂದ ಇಲ್ಲಿ ತನಕ ಸುಮಾರು 200 ಕೆ.ಜಿಗೂ ಅಧಿಕ ಚಿನ್ನವನ್ನು ಈ ರೀತಿ ಅಕ್ರಮವಾಗಿ ರವಾನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ವಪ್ನ ಪ್ರಭ ಸುರೇಶ್, ಫಾಜೀಲ್ ಫರೀದ್, ಸಂದೀಪ್ ನಾಯರ್ ಹಾಗೂ ಸರೀತ್ ಕುಮಾರ್ ಅವರ ವಿಚಾರಣೆಗೆ ಅಗತ್ಯವಿದೆ ಎಂದು ಎನ್ಐಎ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಹೇಳಿದ್ದಾರೆ.

ಈ ಪೈಕಿ ಫಾಜೀರ್ ಫರೀದ್ ದುಬೈನಲ್ಲಿ ಬಂಧನವಾಗಿದೆ. ಯುಎಇ ಕಾನ್ಸುಲೇಟ್ ಕಚೇರಿಯ ಪಿಆರ್ ಒ ಪಿಎಸ್ ಸರೀತ್ ಮೊದಲಿಗೆ ಬಂಧನವಾಗಿದ್ದು, ಆತನ ಮೂಲಕವೇ ಸ್ವಪ್ನ ಈ ಕೇಸಿನಲ್ಲಿರುವುದು ಪತ್ತೆಯಾಗಿತ್ತು. ಸಿಎಂ ಪಿಣರಾಯಿ ವಿಜಯನ್ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ಜೊತೆ ಸ್ವಪ್ನ ಸಂಪರ್ಕದಲ್ಲಿರುವುದು ಪತ್ತೆಯಾಯಿತು.

English summary
Kerala Higher Education Minister KT Jaleel on Thursday appeared before the NIA teamprobing the sensational Kerala gold smuggling case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X