ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ ಹೈಕೋರ್ಟ್‌ ಮೊರೆಹೋದ ಆರೋಪಿ ಸ್ವಪ್ನ ಸುರೇಶ್

|
Google Oneindia Kannada News

ತಿರುವನಂತಪುರಂ, ಜುಲೈ 8: ಕೇರಳದಲ್ಲಿ ಭಾರಿ ಸಂಚಲನ ಮೂಡಿಸಿದ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸ್ವಪ್ನ ಸುರೇಶ್‌ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ವಿಶೇಷ ನ್ಯಾಯಾಲಯವು ತನ್ನನ್ನು ಸೇರಿದಂತೆ ಪ್ರಕರಣದ ಇತರ ಏಳು ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದ ಆದೇಶವನ್ನು ಪ್ರಶ್ನಿಸಿ ಪ್ರಮುಖ ಆರೋಪಿ ಸ್ವಪ್ನ ಸುರೇಶ್‌ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅಕ್ರಮ ಹಣವರ್ಗಾವಣೆ, ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಣೆ, ಕಾನೂನು ಬಾಹಿರ ಆರ್ಥಿಕ ವ್ಯವಹಾರ ಮುಂತಾದ ಆರೋಪಗಳನ್ನು ಹೊತ್ತುಕೊಂಡಿರುವ ಸ್ವಪ್ನ ಸುರೇಶ್ ಹಾಗೂ ಇತರೆ ಆರೋಪಿಗಳನ್ನು ಜಾರಿ ನಿರ್ದೇಶನಾಲಯವು ಕಳೆದ ವರ್ಷ ಜುಲೈನಲ್ಲಿ ಬಂಧಿಸಿತ್ತು. ‌

Gold Smuggling case: Swapna Suresh moves bail plea in Kerala HC

ರಾಜತಾಂತ್ರಿಕ ರಕ್ಷಣೆ ಹೊಂದಿರುವ ''ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌'' ನಲ್ಲಿದ್ದ 30 ಕೆಜಿ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶ ಪಡಿಸಿಕೊಂಡಿದ್ದರು. ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಈ ಚಿನ್ನ ಅಕ್ರಮ ಸಾಗಣೆಯ ಆರೋಪಿ ರಾಜತಾಂತ್ರಿಕ ಕಚೇರಿಯ ಮಾಜಿ ಸಿಬ್ಬಂದಿ ಸ್ವಪ್ನ ಸುರೇಶ್ ಎಂದು ಆರೋಪಿಸಲಾಗಿದೆ.

ಯುಎಇ ಕಾನ್ಸುಲೇಟ್ ಅಧಿಕಾರಿಯಾಗಿದ್ದ ಪಿಎಸ್ ಸರೀತ್, ಮಾಜಿ ಉದ್ಯೋಗಿ ಸ್ವಪ್ನ ಸುರೇಶ್, ಸಂದೀಪ್ ನಾಯರ್, ಫೈಜಲ್ ಫರೀದ್ ಅವರ ವಿರುದ್ಧ Unlawful Activities (Prevention) Act ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಎನ್ಐಎ ತನಿಖೆ ಮುಂದುವರೆಸಿದೆ.

English summary
The prime accused in the gold smuggling case through diplomatic channel, Swapna Suresh, on Monday moved the Kerala High court seeking bail in the case registered by the National Investigation Agency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X