ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಭಾರೀ ಮಳೆ: 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

|
Google Oneindia Kannada News

ಮಲಪ್ಪುರಂ ಮೇ 17: ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದ್ದು ಮುಂದಿನ ಕೆಲವು ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪ ಸೇರಿದಂತೆ ಹಲವೆಡೆ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕೇರಳದ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ದಕ್ಷಿಣ ರಾಜ್ಯದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಕೊಟ್ಟಾಯಂನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು ನದಿಗಳು ಉಕ್ಕಿ ಹರಿಯುತ್ತಿವೆ. ಜೊತೆಗೆ ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಪೂರ್ಣವಾಗಿ ಹಾನಿಗೊಳಗಾಗಿವೆ ಮತ್ತು ಬೆಳೆ ಇಳುವರಿ ನಾಶವಾಗಿದೆ.

ಅವಧಿಗೂ ಮುನ್ನವೇ ಮುಂಗಾರು ಮಳೆ ಆಗಮನ,ಈ ರಾಜ್ಯಗಳಿಗೆ ಎಚ್ಚರಿಕೆಅವಧಿಗೂ ಮುನ್ನವೇ ಮುಂಗಾರು ಮಳೆ ಆಗಮನ,ಈ ರಾಜ್ಯಗಳಿಗೆ ಎಚ್ಚರಿಕೆ

Heavy Rain in Kerala: Orange Alert in 4 Districts

ಹೀಗಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮುಂಗಾರು ಪೂರ್ವ ಸಿದ್ಧತೆ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಎಲ್ಲಾ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇರಳ ಸಂಕಷ್ಟದಲ್ಲಿರುವ ಜನರು 1077ಗೆ ಕರೆ ಮಾಡಬಹುದು - ತುರ್ತು ಪರಿಸ್ಥಿತಿಗಳನ್ನು ಎದುರಿಸಲು 24 ಗಂಟೆಗಳ ವಿಶೇಷ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.

English summary
Indian Meteorological Department (IMD) has forecast heavy rains and thunderstorms in several parts of Kerala, including Kerala and Lakshadweep, over the next few days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X