ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಸಂಕಷ್ಟ ತಂದ ಮಳೆ; 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

|
Google Oneindia Kannada News

ತಿರುವನಂತಪುರಂ, ಆಗಸ್ಟ್ 2: ಕೇರಳದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಭೂಕುಸಿತವಾಗಿದೆ ಮತ್ತು ನದಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ರಾಜ್ಯದ ದಕ್ಷಿಣ ಭಾಗದ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಆಗಸ್ಟ್ 3 ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ಕೇರಳಕ್ಕೆ ನೀಡಲಾದ ಮುನ್ಸೂಚನೆಯ ಪ್ರಕಾರ ಆಗಸ್ಟ್ 2 ಮತ್ತು 3 ರಂದು ಆರೆಂಜ್ ಅಲರ್ಟ್‌ಗಳನ್ನು ನೀಡಲಾಗಿರುವ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಕಾಸರಗೋಡು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

 ಭಕ್ತಾದಿಗಳಿಗೆ ಎಚ್ಚರಿಕೆ; ಭಾರಿ ಮಳೆ ಕಾರಣ 2 ದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಿಷೇಧ ಭಕ್ತಾದಿಗಳಿಗೆ ಎಚ್ಚರಿಕೆ; ಭಾರಿ ಮಳೆ ಕಾರಣ 2 ದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಿಷೇಧ

ಆಗಸ್ಟ್ 5 ರವರೆಗೆ ರಾಜ್ಯದಲ್ಲಿ ಭಾರೀ ಮತ್ತು ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಭಾರೀ ಮಳೆ ಮುಂದುವರಿದ ಕಾರಣ, ಅಧಿಕಾರಿಗಳು ವಿವಿಧ ಜಿಲ್ಲೆಗಳಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದಾರೆ. ಇಡುಕ್ಕಿಯ ಉನ್ನತ ಶ್ರೇಣಿಯ ಪ್ರದೇಶಗಳಲ್ಲಿನ ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ. ಕೊಟ್ಟಾಯಂನಲ್ಲಿ, ಒಂದು ದಿನದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವವನ್ನು ಮಂಗಳವಾರ ಬೆಳಿಗ್ಗೆ ಜಿಲ್ಲೆಯ ಕೂಟ್ಟಿಕ್ಕಲ್ ಚಪ್ಪತ್ ಪ್ರದೇಶದಿಂದ ಪತ್ತೆಹಚ್ಚಲಾಗಿದೆ ಎಂದು ಅಲ್ಲಿನ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

Heavy rains continue to lash Kerala, Red alert in 10 districts

ತ್ರಿಶೂರ್‌ನಲ್ಲಿ ಮಂಗಳವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಚಲಕುಡಿ ನದಿಯ ನೀರಿನ ಮಟ್ಟ ಸುಮಾರು 5 ಮೀಟರ್‌ಗಳಷ್ಟು ಏರಿಕೆಯಾಗಿದ್ದು, ಭಾರೀ ಮಳೆಯಿಂದಾಗಿ ನದಿಯ ದಡದ ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಡಳಿತ ಸೂಚಿಸಿದೆ.

ಸೋಮವಾರ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಸ್ಟ್ 1 ರವರೆಗೆ ಮಳೆ ಸಂಬಂಧಿತ ಘಟನೆಗಳಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಹೇಳಿದ್ದರು. ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚಿನ ಭಾರೀ ಮಳೆಯನ್ನು ಸೂಚಿಸುತ್ತದೆ. ಆದರೆ ಆರೆಂಜ್ ಅಲರ್ಟ್ ಎಂದರೆ 6 ಸೆಂ.ಮೀ ನಿಂದ 20 ಸೆಂ.ಮೀ ವರೆಗೆ ಅತಿ ಹೆಚ್ಚು ಮಳೆಯಾಗುತ್ತದೆ.

Recommended Video

ಪುನೀತ್ ರಾಜಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಮಣಿದ ಚಕ್ರವರ್ತಿ ಸೂಲಿಬೆಲೆ ಕ್ಷಮೆಯಾಚನೆ | OneIndia Kannada

English summary
As incessant rains continue to lash Kerala with reports of landslides and rising river water levels in some parts of the state, the India Meteorological Department (IMD) issued red alert in 10 districts of the southern state for Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X