Explained: ಕೇರಳ ವಿಧಾನಸಭಾ ಚುನಾವಣೆಗೆ ಹೇಗಿದೆ ಭದ್ರತೆ?
ತಿರುವನಂತಪುರಂ, ಏಪ್ರಿಲ್ 05: ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ಏಪ್ರಿಲ್ 6ರಂದು ನಡೆಯಲಿದೆ. 2,74,46,039 ಮತದಾರನ್ನು ಹೊಂದಿರುವ ರಾಜ್ಯದಲ್ಲಿ ಚುನಾವಣೆ ನಡೆಸುವುದಕ್ಕೆ ಆಯೋಗ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಎಲ್‌ಡಿಎಫ್ ಎರಡನೇ ಬಾರಿ ಅಧಿಕಾರದ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿದೆ. ಕಾಂಗ್ರೆಸ್ ಮತ್ತು ಸಿಪಿಎಂ ನೇತೃತ್ವದ ಸರ್ಕಾರಗಳನ್ನು ಪರ್ಯಾಯವಾಗಿ ಆಯ್ಕೆ ಮಾಡುವ ಅವಕಾಶ ಮತದಾರ ಪ್ರಭುಗಳ ಎದುರಿಗಿದೆ.
ಎಲ್‌ಡಿಎಫ್ ಸರ್ಕಾರದ ಆಡಳಿತ ವಿರೋಧಿ ಅಲೆ, ನಿರುದ್ಯೋಗ ಮತ್ತು ಭ್ರಷ್ಟಾಚಾರ ಆರೋಪವನ್ನು ಸರ್ಕಾರದ ವಿರುದ್ಧ ಯುಡಿಎಫ್ ಅಸ್ತ್ರವಾಗಿ ಬಳಸಿಕೊಳ್ಳಲು ನೋಡುತ್ತಿದೆ. ರಾಜ್ಯದಲ್ಲಿ ಕೇವಲ ಒಂದು ಸ್ಥಾನವನ್ನು ಪಡೆದಿರುವ ಎನ್‌ಡಿಎ ಮೈತ್ರಿಕೂಟ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ತಂತ್ರ ಹೆಣೆಯುತ್ತಿದೆ.

ಚುನಾವಣಾ ಭದ್ರತೆಗಾಗಿ 59,000ಕ್ಕೂ ಹೆಚ್ಚು ಸಿಬ್ಬಂದಿ
ಕೇರಳದಲ್ಲಿ ವಿಧಾನಸಭಾ ಚುನಾವಣಾ ಭದ್ರತೆ ದೃಷ್ಟಿಯಿಂದ 59292 ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಇದರಲ್ಲಿ 24,788 ವಿಶೇಷ ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ. ಈ ಪ್ರದೇಶದ 481 ಪೊಲೀಸ್ ಠಾಣೆಗಳನ್ನು 142 ಚುನಾವಣಾ ಉಪ ವಿಭಾಗಗಳನ್ನಾಗಿ ವಿಭಾಗಿಸಲಾಗಿದೆ. 4405 ಸಬ್ ಇನ್ಸ್ ಪೆಕ್ಟರ್, 784 ಇನ್ಸ್ ಪೆಕ್ಟರ್, 258 ಡಿವೈಎಸ್ಪಿ ಹಾಗೂ 35504 ಪೊಲೀಸ್ ಪೇದೆ ಮತ್ತು ಮುಖ್ಯ ಪೇದೆಗಳನ್ನು ನಿಯೋಜನೆ ಮಾಡಲಾಗಿದೆ.

ಭದ್ರತೆಗೆ 140 ಕಂಪನಿಗಳ ಸಿಬ್ಬಂದಿ ನಿಯೋಜನೆ
ಸರ್ಕಾರಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆಗೆ ಚುನಾವಣಾ ಭದ್ರತೆಗೆ 140 ಖಾಸಗಿ ಕಂಪನಿಗಳ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಕೇಂದ್ರ ಪಡೆಗಳಿಗೆ ಸ್ವಯಂಚಾಲಿತ ಬಂದೂಕು ಹೊಂದಿದ್ದು, ಜನಸಮೂಹ ಹಿಂಸಾಚಾರವನ್ನು ಎದುರಿಸಲು ತರಬೇತಿ ನೀಡಲಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ದೊಡ್ಡ ಸಂಖ್ಯೆಯ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ. ಈ ಪೈಕಿ ಸಿಐಎಸ್ಎಫ್, ಸಿಆರ್‌ಪಿಎಫ್ ಮತ್ತು ಬಿಎಸ್ಎಫ್ ಸಿಬ್ಬಂದಿಯೂ ಸೇರಿದ್ದಾರೆ.

ಡ್ರೋನ್ ಬಳಸಿ ನಿಯಮ ಉಲ್ಲಂಘಿಸದಂತೆ ಕ್ರಮ
ವಿಧಾನಸಭಾ ಚುನಾವಣಾ ನೀತಿ ಸಂಹಿತೆಯ ನಿಯಮಗಳ ಪಾಲನೆ ಮತ್ತು ನಿಯಮ ಉಲ್ಲಂಘನೆಗಳ ಬಗ್ಗೆ ಲಕ್ಷ್ಯ ವಹಿಸಲು ಡ್ರೋನ್ ಕ್ಯಾಮರಾಗಳನ್ನು ಬಳಸಲಾಗುತ್ತಿದೆ. ಡ್ರೋನ್‌ಗಳ ಮೂಲಕ ಸಂಗ್ರಹಿಸಿದ ದೃಶ್ಯಗಳನ್ನು ತಕ್ಷಣದ ಕ್ರಮಕ್ಕಾಗಿ ಗಸ್ತು ಪಕ್ಷಗಳಿಗೆ ಕಳುಹಿಸಲಾಗುತ್ತದೆ.

ಕೇರಳದಲ್ಲಿ ಮತದಾರರ ಸಂಖ್ಯೆ 2,74,46,039
ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 2,74,46,039 ಮತದಾರನ್ನು ಹೊಂದಿರುವ ರಾಜ್ಯದಲ್ಲಿ 1.32 ಪುರುಷ, 1.41 ಮಹಿಳಾ ಮತ್ತು 290 ತೃತೀಯ ಲಿಂಗದ ಮತದಾರರಿದ್ದಾರೆ. ಮೇ 2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಜೊತೆಗೆ ಕೇರಳ ವಿಧಾನಸಭಾ ಚುನಾವಣೆ ಭವಿಷ್ಯ ಹೊರ ಬೀಳಲಿದೆ.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications