ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರೀ ಮಳೆಗೆ ಕೇರಳದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

|
Google Oneindia Kannada News

ತಿರುವನಂತಪುರಂ, ನವೆಂಬರ್ 16: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ಕೇರಳ ರಾಜ್ಯದ 8 ಜಿಲ್ಲೆಗಳಲ್ಲಿ ಮಂಗಳವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೇರಳದ ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕಣ್ಣೂರು, ಕಾಸರಗೋಡು ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೇ ಕೊಟ್ಟಾಯಂ, ಪತ್ತನಂತಿಟ್ಟ, ಕೊಲ್ಲಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೇರಳ ವಿಶ್ವವಿದ್ಯಾನಿಲಯ ಮತ್ತು ಎಂ.ಜಿ ವಿಶ್ವವಿದ್ಯಾನಿಲಯಗಳಲ್ಲಿ ಮಂಗಳವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.

ನವೆಂಬರ್ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಧಿಕ ಮಳೆನವೆಂಬರ್ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಧಿಕ ಮಳೆ

ವಾರಾಂತ್ಯದಿಂದ ಕೇರಳದಲ್ಲಿ ನಿರಂತರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಇನ್ನು ಮಳೆಯಿಂದಾಗಿ ರಾಜ್ಯದ ಹಲವೆಡೆ ಜಲಾವೃತವಾಗಿದ್ದು, ಕೇರಳದ ಅಪ್ಪರ್ ಕುಟ್ಟನಾಡ್‍ನ ಹಲವಾರು ಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ.

IMD Issues Yellow Alert For 8 Districts of Kerala Warning of Heavy Rainfall

ನಿರಂತರ ಮಳೆಯಿಂದಾಗಿ ಈಗಾಗಲೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದರು.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ
ಕರ್ನಾಟಕದ ಕರಾವಳಿ, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ನೀಡಿದೆ.

ಹಾಗೇ, ಕಳೆದ ವಾರದಿಂದ ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ರಾಜ್ಯದಲ್ಲಿ ಇಲ್ಲಿಯವರೆಗೆ 4 ಜನರು ಸಾವನ್ನಪ್ಪಿದ್ದಾರೆ ಮತ್ತು 15ಕ್ಕೂ ಹೆಚ್ಚು ಮನೆಗಳು ಕುಸಿದಿವೆ.

IMD Issues Yellow Alert For 8 Districts of Kerala Warning of Heavy Rainfall

ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಸತತ ಮಳೆಯಿಂದಾಗಿ ಚಾಮರಾಜನಗರ ಜಿಲ್ಲೆಯ ಸುವರ್ಣಾವತಿ ಜಲಾಶಯ 11 ವರ್ಷಗಳ ನಂತರ ಗರಿಷ್ಠ ಮಟ್ಟ ತಲುಪಿದೆ. ಜಲಾಶಯದ ಎರಡು ಗೇಟ್‌ಗಳಿಂದ 900 ಕ್ಯೂಸೆಕ್ಸ್​ ನೀರು ಬಿಡಲಾಗುತ್ತಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆಯಿದ್ದು, 'ಯೆಲ್ಲೋ ಅಲರ್ಟ್' ನೀಡಲಾಗಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿ, ವಾಯುಭಾರ ಕುಸಿತದಿಂದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ. ಚಿತ್ರದುರ್ಗ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರದಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ.

IMD Issues Yellow Alert For 8 Districts of Kerala Warning of Heavy Rainfall

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪರಿಣಾಮ ಚೆನ್ನೈ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಮಳೆ ಮತ್ತು ಪ್ರವಾಹ ಉಂಟಾಗಿದೆ. ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆ ಅಬ್ಬರಿಸಿದೆ. ಕರಾವಳಿಯಲ್ಲಿ ಇಂದು ಗಂಟೆಗೆ 40ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗೋವಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಒಡಿಶಾ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾನದಿ ಪಶ್ಚಿಮ ಬಂಗಾಳ, ಕೊಂಕಣ ಮತ್ತು ಗೋವಾ, ಮರಾಠವಾಡ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ವಾಯುಭಾರ ಕುಸಿತದ ಪ್ರಭಾವದಿಂದ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಶುಕ್ರವಾರದವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

English summary
Yellow Alert issued in 8 districts of Kerala and holidays for schools and colleges in four districts due to heavy rain lashed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X