ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೆ ವಾಯುಭಾರ ಕುಸಿತ; ಅಕ್ಟೋಬರ್ 17ರ ತನಕ ಮಳೆ

|
Google Oneindia Kannada News

ತಿರುವನಂತಪುರಂ, ಅಕ್ಟೋಬರ್ 14; ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಅಕ್ಟೋಬರ್ 17ರ ತನಕ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಲಕ್ಷದ್ವೀಪದ ಆಗ್ನೇಯ ಭಾಗದಲ್ಲಿ ಮತ್ತು ಬಂಗಳಾಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 14ರಂದು ಕೇರಳದಲ್ಲಿ ಭಾರೀ ಮಳೆಯಾಗಲಿದೆ, ಅಕ್ಟೋಬರ್ 17ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ 3 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಮುಂದಿನ 3 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ

ವಾಯುಭಾರ ಕುಸಿತವು ಆಂಧ್ರ ಪ್ರದೇಶದ ಕಡೆ ಸಾಗಲಿದ್ದು, ಆಂಧ್ರ ಪ್ರದೇಶ ಮತ್ತು ಓಡಿಶಾ ಕರಾವಳಿಯಲ್ಲಿ ಮಂದಿನ 24 ಗಂಟೆಯಲ್ಲಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಕೇರಳದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.

ಅ.17ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆಅ.17ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ

IMD Predicted Heavy Rain In Kerala Due To Low Pressure

ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿರುವುದರಿಂದ ಬೆಟ್ಟ ಪ್ರದೇಶದಲ್ಲಿ ರಾತ್ರಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಳೆಯಿಂದ ಹಾನಿಯಾದರೆ ಕಾರ್ಯಾಚರಣೆಗಾಗಿ 6 ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.

ಕರ್ನಾಟಕ; ಸತತ ಮಳೆ, ತರಕಾರಿ ಬೆಲೆಗಳಲ್ಲಿ ಏರಿಕೆ ಕರ್ನಾಟಕ; ಸತತ ಮಳೆ, ತರಕಾರಿ ಬೆಲೆಗಳಲ್ಲಿ ಏರಿಕೆ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಸ್ಥಿತಿ ಇನ್ನೂ ಎರಡು ದಿನ ಮುಂದುವರೆಯಲಿದೆ. ಇದರ ಪ್ರಭಾವದಿಂದ ಕೇರಳದಲ್ಲಿ ಮಳೆ ಅಕ್ಟೋಬರ್ 17ರ ತನಕ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕೇರಳ ಸರ್ಕಾರ ಘಟ್ಟ ಪ್ರದೇಶಗಳಲ್ಲಿ ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯ ತನಕ ಪ್ರಯಾಣ ನಿರ್ಬಂಧಿಸಿದೆ.

ಎಲ್ಲಾ ಜಿಲ್ಲೆಗಳಲ್ಲಿ ಎಚ್ಚರದಿಂದ ಇರಲು ಕೇರಳ ಸರ್ಕಾರ ಸೂಚನೆ ನೀಡಿದೆ. ಹವಾಮಾನ ಇಲಾಖೆ ತಿರುವನಂತಪುರಂ ಸೇರಿದಂತೆ 13 ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಿದೆ. 6 ಎನ್‌ಡಿಆರ್‌ಎಫ್ ತಂಡದ ಜೊತೆ ವಿವಿಧ ಇಲಾಖೆಗಳ ತಂಡಗಳು ಸಹ ಸನ್ನದ್ಧವಾಗಿರುವಂತೆ ಸೂಚನೆ ಕೊಡಲಾಗಿದೆ.

ಸರ್ಕಾರ ಈಗಾಗಲೇ 27 ಕಾಳಜಿ ಕೇಂದ್ರಗಳನ್ನು ಆರಂಭಿಸಿದೆ. ಹೆಚ್ಚು ಮಳೆ ಬೀಳುವ ಪ್ರದೇಶ ಎಂದು ಗುರುತಿಸಲಾದ ಸ್ಥಳಗಳಿಂದ 622 ಜನರನ್ನು ಈಗಾಗಲೇ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ನದಿಗಳ ನೀರಿನ ಮಟ್ಟವೂ ಹೆಚ್ಚಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿರುವಂತೆ ನಿರ್ದೇಶನ ನೀಡಲಾಗಿದೆ.

ಕೇರಳ ರಾಜ್ಯದ ಕೊಯಿಕ್ಕೋಡ್, ಪಾಲಕ್ಕಾಡ್, ಮಲಪ್ಪುರಂ, ವಯನಾಡು ಪ್ರದೇಶದಲ್ಲಿ ಅಕ್ಟೋಬರ್ 15ರ ತನಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹೆಚ್ಚು ಮಳೆ ಬೀಳುವ ಪ್ರದೇಶಗಳನ್ನು ಪಟ್ಟಿ ಮಾಡಿದ್ದು, ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿಯೂ ಮಳೆ; ಕರ್ನಾಟಕದ ಕರಾವಳಿ ಮತ್ತು ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಮಳೆಯಾಗಿದೆ. ಅಕ್ಟೋಬರ್ 15ರ ತನಕ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಕೊಡಗು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿಯೂ ಮಂಗಳವಾರದಿಂದ ಮಳೆಯಾಗುತ್ತಲೇ ಇದೆ. ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸುರಿದ ಮಳೆಯಿಂದಾಗಿ 20 ಮನೆಗಳಿಗೆ ಹಾನಿಯಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಅಕ್ಟೋಬರ್ 15ರ ತನಕ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

English summary
The India Meteorological Department (IMD) has predicted heavy rain in Kerala due to low pressure. Heavy rain likely to continue in Kerala till October 17, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X