ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಸ್ರೋ ಬೇಹುಗಾರಿಕೆ ಪ್ರಕರಣ: 18 ಮಂದಿ ವಿರುದ್ಧ ಚಾರ್ಜ್ ಶೀಟ್

|
Google Oneindia Kannada News

ತಿರುವನಂತಪುರಂ, ಜೂನ್ 24: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಹೆಮ್ಮೆಯ ವಿಜ್ಞಾನಿ ನಂಬಿ ನಾರಾಯಣನ್ ಅವರು ಬೇಹುಗಾರಿಕೆ ಆರೋಪದಿಂದ ಮುಕ್ತರಾಗಿದ್ದಾರೆ. 1994ರ ಗೂಢಚಾರಿಕೆ ಪ್ರಕರಣದ ಕುರಿತು ಜೈನ್ ಸಮಿತಿ ಸಲ್ಲಿಸಿರುವ ವರದಿ ಆಧಾರದ ಮೇಲೆ ಸುಪ್ರೀಂಕೋರ್ಟ್, ಸಿಬಿಐ ತನಿಖೆಗೆ ಆದೇಶಿಸಿದೆ. ತನಿಖೆ ನಡೆಸುತ್ತಿರುವ ಸಿಬಿಐ, 18 ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದೆ.

ದೇಶಿ ಕ್ರಯೋಜೆನಿಕ್ ತಂತ್ರಜ್ಞಾನ ಅಭಿವೃದ್ಧಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಂಬಿ ನಾರಾಯಣನ್ ಅವರು ಇಸ್ರೋದ ಗೌಪ್ಯ ದಾಖಲೆ, ಸೂಕ್ಷ್ಮ ಮಾಹಿತಿ, ತಂತ್ರಜ್ಞಾನವನ್ನು ಪಾಕಿಸ್ತಾನಕ್ಕೆ ಮಾರಾಟ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರೆಸಿ ಅವರನ್ನು ಬಂಧಿಸಿದ್ದ ಕೇರಳದ ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವಾರು ಮಂದಿ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.

1994ರಲ್ಲಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ವಿರುದ್ಧ ಗೂಢಚಾರಿಕೆ ಆರೋಪ ಹೊರಿಸಿದ್ದ ಪೊಲೀಸ್ ಅಧಿಕಾರಿಗಳು ಎಸಗಿದ ತಪ್ಪುಗಳ ಬಗ್ಗೆ ಜೈನ್ ಸಮಿತಿ ಸಲ್ಲಿಸಿರುವ ವರದಿಯಲ್ಲಿ ವಿವರಣೆ ನೀಡಲಾಗಿದೆ. ಇದರ ಆಧಾರದ ಮೇಲೆ ತನಿಖೆ ಆರಂಭಿಸಿದ ಸಿಬಿಐ, ಸಂಚು, ಕಸ್ಟಡಿಯಲ್ಲಿದ್ದ ವಿಜ್ಞಾನಿ ನಂಬಿ ನಾರಾಯಣ್ ಅವರಿಗೆ ಕಿರುಕುಳ ನೀಡಿದ ಆರೋಪವನ್ನು ಪೊಲೀಸರ ಮೇಲೆ ಹೊರೆಸಿದೆ.

ISRO espionage case: CBI files charge sheet

ಅಂದಿನ ನಗರ ಪೊಲೀಸ್ ಆಯುಕ್ತ ವಿ.ಆರ್ ರಾಜೀವನ್, ಸಬ್ ಇನ್ಸ್ ಪೆಕ್ಟರ್ ತಂಪಿ ಎಸ್ ದುರ್ಗದತ್ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ. ಎಸ್ ವಿಜಯನ್ ಆರೋಪಿ ನಂ.1 ಆಗಿದ್ದು, ಸಿಬಿ ಮ್ಯಾಥ್ಯೂ(ಎ4), ಆರ್ ಬಿ ಶ್ರೀಕುಮಾರ್(ಎ7), ಕೆಕೆ ಜೋಶುವಾ ( ಎ5) ಪ್ರಮುಖ ಹೆಸರು ಗಳಾಗಿವೆ.

ಸಿಬಿಐ ತನಿಖೆಯನ್ನು ಸ್ವಾಗತಿಸಿದ್ದ ನಂಬಿ ನಾರಾಯಣ್, ಇದು ಉತ್ತಮ ಪ್ರಗತಿ, ಸಂಚಿನಲ್ಲಿ ಭಾಗಿಯಾದ ವ್ಯಕ್ತಿಗಳ ವಿರುದ್ಧ ಕಾನೂನು ಪ್ರಕ್ರಿಯೆ ನಡೆಯಲಿದೆ ಎಂಬುದನ್ನು ನಿರೀಕ್ಷಿಸುತ್ತಿದ್ದೆ ಎಂದಿದ್ದರು.

ಏನಿದು ಪ್ರಕರಣ?:
ಇಸ್ರೋದ ಗೌಪ್ಯ ದಾಖಲೆ, ಸೂಕ್ಷ್ಮ ಮಾಹಿತಿ, ತಂತ್ರಜ್ಞಾನವನ್ನು ನಂಬಿ ನಾರಾಯಣ್ ಅವರು ಪಾಕಿಸ್ತಾನಕ್ಕೆ ಮಾರಾಟ ಮಾಡಿದ್ದಾರೆ. ಮಾಲ್ಡೀವ್ಸ್ ಮಹಿಳೆಯ ನೆರವು ಪಡೆದುಕೊಂಡಿದ್ದರು ಎಂದು ಆರೋಪಿಸಲಾಗಿತ್ತು. 1994ರಲ್ಲಿ ವಿಜ್ಞಾನಿ ನಂಬಿ ಅವರನ್ನು ಬಂಧಿಸಲಾಗಿತ್ತು.

1998 ರಲ್ಲಿ ಸುಪ್ರೀಂಕೋರ್ಟ್ ಈ ಪ್ರಕರಣವನ್ನೇ ವಜಾಗೊಳಿಸಿ ತೀರ್ಪು ನೀಡಿತು. ಆ ಬಳಿಕ ರಾಷ್ಟ್ರೀಯ ಮಾನವ ಹಕ್ಕು ಆಯೋಗ ನಂಬಿ ನಾರಾಯಣನ್ ಅವರ ವೃತ್ತಿ ಜೀವನಕ್ಕೆ ಅನ್ಯಾಯವಾಗಿ ಕಲ್ಲು ಹಾಕಿದ್ದಕ್ಕಾಗಿ ಕೇರಳ ಸರ್ಕಾರಕ್ಕೆ ಛೀಮಾರಿ ಹಾಕಿ ಪರಿಹಾರ ನೀಡುವಂತೆ ಆದೇಶ ನೀಡಿತು. ಕೇರಳ ಸರ್ಕಾರ ನಂಬಿಯವರಿಗೆ 10 ಲಕ್ಷ ರೂ. ಪರಿಹಾರ ಕೊಡುವಂತೆ ಕೇರಳ ಹೈಕೋರ್ಟ್ ಇದೇ ಸಂದರ್ಭದಲ್ಲಿ ಸೂಚಿಸಿತು. ಐಬಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆಯೂ ಅದು ಹೇಳಿತ್ತು. ಅಲ್ಲಿಗೆ ನಂಬಿ ನಾರಾಯಣನ್ ನಿರ್ದೋಷಿ ಎಂಬುದು ಸಂಪೂರ್ಣ ಸಾಬೀತಾಗಿತ್ತು..

2018ರ ಸೆ. 14ರಂದು ಸುಪ್ರೀಂಕೋರ್ಟ್, ನಿವೃತ್ತ ನ್ಯಾಯಮೂರ್ತಿ ಡಿಕೆ ಜೈನ್ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ನೇಮಿಸಿತ್ತು. ಇದೇ ಸಂದರ್ಭದಲ್ಲಿ ನಂಬಿ ನಾರಾಯಣನ್ ಅವರನ್ನು ಅತೀವವಾಗಿ ಅವಮಾನಿಸಿದ್ದ ಕಾರಣಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೇರಳ ಸರ್ಕಾರಕ್ಕೆ ಆದೇಶಿಸಿತ್ತು.

ಕೇರಳ ಸಚಿವ ಸಂಪುಟ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಅವರಿಗೆ 1.3 ಕೋಟಿ ರೂಪಾಯಿ ಪರಿಹಾರ ನೀಡಲು 2019 ಡಿ.27ರಂದು ತಾತ್ವಿಕ ಒಪ್ಪಿಗೆ ನೀಡಿತು. ಈ ಮೊತ್ತ ಮಂಗಳವಾರ( ಆ.12, 2020)ರಂದು ನಾರಾಯಣನ್ ಅವರ ಖಾತೆಗೆ ಸಂದಾಯವಾಗಿದೆ.

English summary
ISRO espionage case: The CBI has filed FIR naming 18 as accused and a charge sheet against all of them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X