ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ ವಿಧಾನಸಭಾ ಚುನಾವಣೆಗೆ ನಾಲ್ಕು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

|
Google Oneindia Kannada News

ತಿರುವನಂತಪುರಂ, ಮಾರ್ಚ್.09: ಕೇರಳ ವಿಧಾನಸಭಾ ಚುನಾವಣೆಗೆ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರ ನೇತೃತ್ವದ ಜನತಾ ದಳ ಪಕ್ಷವು ಮಂಗಳವಾರ ನಾಲ್ವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಕೇರಳದ ಕೊವಳಂ, ತಿರುವಲ್ಲಾ, ಚಿತ್ತೂರ್ ಮತ್ತು ಅಂಕಮಾಲಿ ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಕೊವಳಂ ಕ್ಷೇತ್ರದಿಂದ ಮಾಜಿ ಸಚಿವ ಡಾ. ನೀಲಾ ಲೋಹಿತ್ ದಾಸ್ ನಾಡರ್, ತಿರುವಲ್ಲಾ ಕ್ಷೇತ್ರದಲ್ಲಿ ಮಾಜಿ ಸಚಿವ ಮ್ಯಾಥ್ಯೂ ಥಾಮಸ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಚಿತ್ತೂರ್ ವಿಧಾನಸಭಾ ಕ್ಷೇತ್ರದಿಂದ ಸಚಿವ ಕೆ. ಕೃಷ್ಣನ್ ಕುಟ್ಟಿ ಮತ್ತು ಅಂಕಮಾಲಿ ವಿಧಾನಸಭಾ ಕ್ಷೇತ್ರದಲ್ಲಿ ಕೇರಳದ ಮಾಜಿ ಸಚಿವ ಜೋಸ್ ಥೆಟ್ಟಯಿಲ್ ಅವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದೆ.

Janata Dal Announces Four Candidates List For Kerala Legislative Assembly Elections

ಕೇರಳ ವಿಧಾನಸಭೆ ಚುನಾವಣೆ:

ಕೇರಳ ವಿಧಾನಸಭೆಯ 140 ಕ್ಷೇತ್ರಗಳಿಗೆ ಏಪ್ರಿಲ್.06ರಂದು ಒಂದೇ ಹಂತದಲ್ಲಿ ಮತದಾನ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲು 71 ಸ್ಥಾನಗಳನ್ನು ಗಳಿಸಬೇಕಿದೆ. ಪ್ರಸ್ತುತ ಕೇರಳದಲ್ಲಿ ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ 93 ಸ್ಥಾನ, ಕಾಂಗ್ರೆಸ್ ನೇತೃತ್ವ ಯುಡಿಎಫ್ 42 ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ 1 ಸ್ಥಾನವನ್ನು ಹೊಂದಿದೆ.

English summary
Janata Dal Announces Four Candidates List For Kerala Legislative Assembly Elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X