ಲಸಿಕೆ ಹಾಕಿಸಿಕೊಂಡ 40,000 ಜನರಿಗೆ ಕೊರೊನಾವೈರಸ್ ಸೋಂಕು!

ತಿರುವನಂತಪುರಂ, ಆಗಸ್ಟ್ 11: ಭಾರತದಲ್ಲಿ ಪ್ರತಿನಿತ್ಯ ವರದಿಯಾಗುತ್ತಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪಾಲು ಹೊಸ ಪ್ರಕರಣಗಳು ಕೇರಳ ರಾಜ್ಯವೊಂದರಲ್ಲೇ ಪತ್ತೆಯಾಗುತ್ತಿವೆ. ಕೊವಿಡ್-19 ಸೋಂಕಿನ ಸುಳಿಗೆ ಸಿಲುಕಿರುವ ಕೇರಳದಲ್ಲಿ ಲಸಿಕೆ ಪಡೆದ 40,000 ಮಂದಿಗೆ ಸೋಂಕು ತಗುಲಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ.

ಕೇರಳದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಸೋಂಕಿತರ ಪೈಕಿ 40,000 ಮಂದಿ ಎರಡೂ ಡೋಸ್ ಲಸಿಕೆ ಪಡೆದುಕೊಂಡವರೇ ಆಗಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.

ಕೊವಿಡ್-19 ಲಸಿಕೆ ಪಡೆದ ನಂತರದಲ್ಲೂ ಸೋಂಕು ತಗುಲಿರುವ ವ್ಯಕ್ತಿಗಳ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿ ಕೊಡುವಂತೆ ಕೇರಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಸಾಮಾನ್ಯ ಕೊರೊನಾವೈರಸ್ ಸೋಂಕಿತರು ಹಾಗೂ ಲಸಿಕೆ ಪಡೆದ ನಂತರದಲ್ಲೂ ಸೋಂಕು ತಗುಲಿದವರ ಮಾದರಿಯನ್ನು ಪರೀಕ್ಷಿಸಿ ಪರಾಮರ್ಶೆ ಮಾಡುವುದಕ್ಕೆ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಲಸಿಕೆ ಪಡೆದ ನಂತರದಲ್ಲೂ ಕೊವಿಡ್-19 ಸೋಂಕು ಅಂಟಿಕೊಳ್ಳುತ್ತಿರುವುದು ನಿಜವಾಗಿ ಅಪಾಯಕಾರಿ ಬೆಳವಣಿಗೆಯಾಗಿದೆ.

ಕೊರೊನಾವೈರಸ್ ಲಸಿಕೆ ಪಡೆದುಕೊಂಡವರು ರಾಜಾರೋಷವಾಗಿ ನಿಯಮಗಳನ್ನು ಪಾಲಿಸದೇ ಓಡಾಡಬಹುದು ಎಂದುಕೊಂಡ ಮಂದಿ ತಿಳಿದುಕೊಳ್ಳಬೇಕಾಗಿರುವ ವಿಷಯ ಸಾಕಷ್ಟಿದೆ. ಲಸಿಕೆಯಿಂದ ಸೋಂಕು ಅಂಟಿಕೊಳ್ಳುವುದೇ ಇಲ್ಲ ಎಂದು ವಾದಿಸುವ ಮತ್ತು ತಪ್ಪು ಪರಿಕಲ್ಪನೆಯನ್ನು ಹೊಂದಿರುವ ಜನರು ತಿಳಿದುಕೊಳ್ಳಬೇಕಾದ ವಿಷಯ ಇಲ್ಲಿದೆ ಓದಿ.

ಡೆಲ್ಟಾ ವೈರಸ್ ಸೋಂಕಿನಿಂದ ಹೆಚ್ಚಿದ ಆತಂಕ

ಡೆಲ್ಟಾ ವೈರಸ್ ಸೋಂಕಿನಿಂದ ಹೆಚ್ಚಿದ ಆತಂಕ

ಭಾರತದಲ್ಲೇ ಮೊದಲು ಕಾಣಿಸಿಕೊಂಡ ಡೆಲ್ಟಾ ರೂಪಾಂತರ ವೈರಸ್ ಸೋಂಕು ಸಾಮಾನ್ಯ ತಳಿಗಿಂತ ವೇಗವಾಗಿ ಹರಡುವ ಸಾಮರ್ಥ್ಯವನ್ನು ಹೊಂದಿದೆ. ಕೇರಳದಲ್ಲಿ ಇದೇ ಡೆಲ್ಟಾ ರೂಪಾಂತರ ತಳಿಯಿಂದ ಸೋಂಕಿನ ಹರಡುವಿಕೆ ಹೆಚ್ಚಾಗುತ್ತಿದೆಯೇ ಎಂಬ ಆತಂಕ ಹೆಚ್ಚಾಗುತ್ತಿದೆ. ಇನ್ನೊಂದು ಕಡೆ ಈ ಮೊದಲು ತೆಗೆದುಕೊಂಡ ಲಸಿಕೆಗಳ ಪ್ರಭಾವಕ್ಕೆ ಒಳಗಾಗದ ಮಟ್ಟಿಗೆ ರೂಪಾಂತರ ವೈರಸ್ ಬದಲಾಗಿದ್ದರೆ, ಅಪಾಯ ಮತ್ತಷ್ಟು ಹೆಚ್ಚಾಗಿರುತ್ತದೆ.

ಎರಡನೇ ಬಾರಿ ಅಂಟಿಕೊಳ್ಳುತ್ತಿದೆಯಾ ಮಹಾಮಾರಿ?

ಎರಡನೇ ಬಾರಿ ಅಂಟಿಕೊಳ್ಳುತ್ತಿದೆಯಾ ಮಹಾಮಾರಿ?

ಕೇರಳದ ಪಥನಂತಿಟ್ಟಾ ಜಿಲ್ಲೆಯಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇದೊಂದು ಜಿಲ್ಲೆಯಲ್ಲೇ ಮೊದಲ ಡೋಸ್ ಪಡೆದುಕೊಂಡ 14,974 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದರೆ, ಎರಡೂ ಡೋಸ್ ಲಸಿಕ ಪಡೆದುಕೊಂಡಿರುವ 5,042 ಮಂದಿಗೆ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ಸ್ಪಷ್ಟವಾಗಿದೆ. ಒಂದು ಬಾರಿ ಸೋಂಕು ತಗುಲಿದ ವ್ಯಕ್ತಿಯು ಗುಣಮುಖರಾದ ನಂತರದಲ್ಲಿ ಮತ್ತೊಮ್ಮೆ ಸೋಂಕು ತಗುಲುವ ಅಪಾಯವನ್ನೂ ಅಲ್ಲಗೆಳೆಯುವಂತಿಲ್ಲ. ಕೇರಳದ ಹಲವು ಜಿಲ್ಲೆಗಳಲ್ಲಿ ಇದೇ ರೀತಿ ಎರಡನೇ ಬಾರಿ ಸೋಂಕು ತಗುಲಿದವರ ಸಂಖ್ಯೆ ಕೂಡ ಏರಿಕೆಯಾಗುತ್ತಿರುವುದು ಮತ್ತಷ್ಟು ಆತಂಕಕಾರಿ ಬೆಳವಣಿಗೆಯಾಗಿದೆ.

ಭಾರತದಲ್ಲಿ 207 ದಿನಗಳಲ್ಲಿ 52 ಲಕ್ಷ ಜನರಿಗೆ ಲಸಿಕೆ ವಿತರಣೆ

ಭಾರತದಲ್ಲಿ 207 ದಿನಗಳಲ್ಲಿ 52 ಲಕ್ಷ ಜನರಿಗೆ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆ ಪ್ರತಿನಿತ್ಯ 50 ಲಕ್ಷದ ಗಡಿ ದಾಟುತ್ತಿದ್ದ ಲಸಿಕೆ ವಿತರಣೆ ಪ್ರಮಾಣ ಮತ್ತೊಮ್ಮೆ ಇಳಿಮುಖವಾಗಿದೆ. ದೇಶದಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಿ 207 ದಿನಗಳಲ್ಲಿ 51.85 ಕೋಟಿಗೂ ಅಧಿಕ ಮಂದಿಗೆ ಲಸಿಕೆ ವಿತರಿಸಲಾಗಿದೆ. ಮಂಗಳವಾರ ರಾತ್ರಿ 8 ಗಂಟೆ ವೇಳೆಗೆ 37,76,765 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 51,85,17,148 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.

ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಳಿತ ಹೇಗಿದೆ?

ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಳಿತ ಹೇಗಿದೆ?

ಕೊರೊನಾವೈರಸ್ ಲಸಿಕೆ ವಿತರಣೆಯನ್ನು ಒಂದು ದಿಕ್ಕಿನಲ್ಲಿ ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಇನ್ನೊಂದು ದಿಕ್ಕಿನಲ್ಲಿ ಲಸಿಕೆ ಹಾಕಿಸಿಕೊಂಡವರಿಗೇ ಸೋಂಕು ತಗುಲಿರುವುದು ಜನರಲ್ಲಿ ಭಯ ಹುಟ್ಟು ಹಾಕುತ್ತಿದೆ. ಕಳೆದ 24 ಗಂಟೆಗಳಲ್ಲಿ 21,119 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 35,86,693ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 18,493 ಸೋಂಕಿತರ ಆರೋಗ್ಯದಿಂದ ಡಿಸ್ಚಾರ್ಜ್ ಆಗಿದ್ದು, 152 ಸೋಂಕಿತರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 18,004ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಕೇರಳದಲ್ಲಿ 1,71,985 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಮಾಹಿತಿ

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಮಾಹಿತಿ

2021ರ ಆಗಸ್ಟ್ 11ರ ಅಂಕಿ-ಅಂಶಗಳ ಪ್ರಕಾರ, 53,24,44,960 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 53,24,44,960

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 72,40,250

* ಬಳಕೆ ಆಗಿರುವ ಲಸಿಕೆ ಪ್ರಮಾಣ - 51,56,11,035

* ಕೊವಿಡ್-19 ಲಸಿಕೆಯ ಲಭ್ಯತೆ - 2,25,03,900

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+