ಕೇರಳ: 6 ಮಂದಿಗೆ ಶಿಗೆಲ್ಲಾ ಸೋಂಕು, ಒಂದು ಬಲಿ
ಕೊಚ್ಚಿ, ಡಿಸೆಂಬರ್ 19: ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆ ಕೇರಳದ ಕೋಯಿಕ್ಕೋಡ್ ಮತ್ತೊಂದು ಸೋಂಕು ಕಾಣಿಸಿಕೊಂಡಿದೆ. ಶಿಗೆಲ್ಲಾ ಸೋಂಕಿನ ಕನಿಷ್ಠ ಆರು ಪ್ರಕರಣಗಳು ಖಚಿತವಾಗಿದ್ದು, ಇನ್ನು 20 ಶಂಕಿತ ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಮಕ್ಕಳೇ ಹೆಚ್ಚಿದ್ದಾರೆ. ಶಿಗೆಲ್ಲಾ ಬ್ಯಾಕ್ಟೀರಿಯಾದ ಶಂಕಿತ ಸೋಂಕಿಗೆ ಒಳಗಾದ 11 ವರ್ಷದ ಮಗು ಕಳೆದ ವಾರ ಮೃತಪಟ್ಟಿದೆ.
ಶಿಗೆಲ್ಲಾ ಎಂಬ ಬ್ಯಾಕ್ಟೀರಿಯಾ ಕುಟುಂಬದಿಂದ ಈ ಶಿಗೆಲ್ಲಾ ಸೋಂಕು ಹರಡುತ್ತಿದ್ದು, ಅತಿಸಾರ, ಜ್ವರ ಮತ್ತು ಹೊಟ್ಟೆನೋವು ಇದರ ಸಾಮಾನ್ಯ ಲಕ್ಷಣಗಳಾಗಿವೆ. ಕೆಲವರಿಗೆ ಈ ಎಲ್ಲ ಲಕ್ಷಣಗಳು ಕಾಣಿಸದೆಯೂ ಇರಬಹುದು. ಮೂರು ದಿನಕ್ಕಿಂತ ಹೆಚ್ಚು ದಿನ ಅತಿಸಾರ ಮತ್ತು ಇತರೆ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವಂತೆ ಸಲಹೆ ನೀಡಲಾಗಿದೆ. ಈ ಬ್ಯಾಕ್ಟೀರಿಯಾ ಸೋಂಕು ಕಲುಷಿತ ನೀರು ಮತ್ತು ಆಹಾರದಿಂದ ಹರಡುತ್ತದೆ.
ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ಸೋಂಕು ತನ್ನ ಪಾಲಿಕೆಯ ವ್ಯಾಪ್ತಿಯ ಕೊಟ್ಟಪರಂಬು ವಾರ್ಡ್‌ನಲ್ಲಿ ಮಾತ್ರ ಕಾಣಿಸಿಕೊಂಡಿದೆ. ಹೀಗಾಗಿ ವಾರಾಂತ್ಯದಲ್ಲಿ ವೈದ್ಯಕೀಯ ಶಿಬಿರ ನಡೆಸಲು ಕೋಯಿಕ್ಕೋಡ್ ಪಾಲಿಕೆ ಆರೋಗ್ಯಾಧಿಕಾರಿಗಳು ಉದ್ದೇಶಿಸಿದ್ದಾರೆ.

ಆರು ರೋಗಿಗಳಿಂದ ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷಿಸಿದ ವೈದ್ಯಕೀಯ ಕಾಲೇಜು ಆಸ್ಪತ್ರೆಯು ಶಿಗೆಲ್ಲಾ ಸೋಂಕು ಇರುವುದನ್ನು ಖಚಿತಪಡಿಸಿದ್ದಾರೆ. ಸಣ್ಣಪುಟ್ಟ ಲಕ್ಷಣಗಳು ಕಂಡುಬಂದಿರುವ ಇನ್ನು 20 ಮಂದಿ ಕೂಡ ಸೋಂಕಿಗೆ ಒಳಗಾಗಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಕೋಯಿಕ್ಕೋಡ್ ಜಿಲ್ಲಾ ವೈದ್ಯಾಧಿಕಾರಿ ಡಾ. ಜಯಶ್ರೀ ವಿ. ತಿಳಿಸಿದ್ದಾರೆ.
ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಅತಿಸಾರಕ್ಕಿಂತ ಶಿಗೆಲ್ಲಾ ಸೋಂಕಿನ ಲಕ್ಷಣ ಹೆಚ್ಚು ಪ್ರಬಲವಾಗಿರುತ್ತದೆ. ಜತೆಗೆ ಅವರ ವೈದ್ಯಕೀಯ ಸ್ಥಿತಿ ವೇಗವಾಗಿ ಹದಗೆಡುತ್ತದೆ ಎಂದು ಅವರು ಹೇಳಿದ್ದಾರೆ.
ನಾಲ್ವರ ಹೊರತಾಗಿ ಶಂಕಿತ ಸೋಂಕಿತರೆಲ್ಲರೂ ಮಕ್ಕಳಾಗಿದ್ದಾರೆ. ಒಂದಿಬ್ಬರನ್ನು ಬಿಟ್ಟು ಉಳಿದವರೆಲ್ಲ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಕಳೆದ ವಾರ ಮೃತಪಟ್ಟಿದ್ದ ಒಂದು ಮಗುವಿಗೂ ಶಿಗೆಲ್ಲಾ ಸೋಂಕು ಇತ್ತು ಎಂದು ಶಂಕಿಸಲಾಗಿದೆ.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications