ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಫಿಗೆ ಬೆಂಬಲ ಬೆಲೆ ಘೋಷಿಸಿ ಬೆಳೆಗಾರರ ಮನಗೆದ್ದ ಕೇರಳ ಸರ್ಕಾರ

By Coovercolly Indresh
|
Google Oneindia Kannada News

ತಿರುವನಂತಪುರಂ, ಜನವರಿ 17: ದಿನೇ ದಿನೇ ಏರುತ್ತಿರುವ ಉತ್ಪಾದನಾ ವೆಚ್ಚ ಕಾಫಿ, ಕಾಳು ಮೆಣಸಿನ ಬೆಲೆ ಕುಸಿತ ಮತ್ತು ಪ್ರಾಕೃತಿಕ ವಿಕೋಪಗಳ ಕಾರಣದಿಂದ ದೇಶದ ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಬೆಳೆಗಾರರ ಒತ್ತಾಯದ ನಡುವೆಯೂ ವಾಣಿಜ್ಯ ಬೆಳೆಯಾದ ಕಾಫಿಗೆ ಈವರೆಗೂ ಕೇಂದ್ರ ಅಥವಾ ರಾಜ್ಯ ಸರ್ಕಾರವು ಕನಿಷ್ಟ ಬೆಂಬಲ ಬೆಲೆಯನ್ನು ಘೋಷಿಸಿಲ್ಲ.

ಕರ್ನಾಟಕದ ನೆರೆಯ ಕೇರಳ ರಾಜ್ಯವು ಕಾಫಿಗೆ ಬೆಂಬಲ ಬೆಲೆಯನ್ನು ಘೋಷಿಸಿ ಬೆಳೆಗಾರರ ಮನ ಗೆದ್ದಿದೆ. ಕೇರಳ ಹಣಕಾಸು ಸಚಿವ ಟಿ. ಎಂ. ಥಾಮಸ್ ಐಸಾಕ್ ಶುಕ್ರವಾರ ತಮ್ಮ ಬಜೆಟ್ ಭಾಷಣದಲ್ಲಿ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದ್ದಾರೆ.

ಕಾಫಿ ಬೆಳೆಗಾರರಿಗೆ ಸಂಕಟ ತಂದಿಟ್ಟ ಅಕಾಲಿಕ ಮಳೆ ಕಾಫಿ ಬೆಳೆಗಾರರಿಗೆ ಸಂಕಟ ತಂದಿಟ್ಟ ಅಕಾಲಿಕ ಮಳೆ

1 ಕೆಜಿ ರೋಬಸ್ಟಾ ಚೆರಿ ಕಾಫಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) 90 ರೂಪಾಯಿಗೆ ಹೆಚ್ಚಿಸಿದ್ದಾರೆ. ಪ್ರಮುಖ ರೋಬಸ್ಟಾ ಕಾಫಿ ಬೆಳೆಯುವ ಪ್ರದೇಶವಾದ ವಯನಾಡ್ ಜಿಲ್ಲೆಯ ಕಾಫಿ ಕೃಷಿಕರಿಗೆ ಬೆಂಬಲ ನೀಡುವ ಬಜೆಟ್ ನಿಬಂಧನೆಗಳನ್ನು ಕಾಫಿ ಬೆಳೆಗಾರ ಸಂಘಟನೆಗಳು ಸ್ವಾಗತಿಸಿವೆ.

ಅಕಾಲಿಕ ಮಳೆ; ಸಂಕಷ್ಟಕ್ಕೆ ಸಿಲುಕಿದ ಕಾಫಿ ಬೆಳೆಗಾರರು ಅಕಾಲಿಕ ಮಳೆ; ಸಂಕಷ್ಟಕ್ಕೆ ಸಿಲುಕಿದ ಕಾಫಿ ಬೆಳೆಗಾರರು

Kerala Announced MSP For Robusta Coffee

"ಕಾಫಿಗೆ ಬೆಲೆ ಕಡಿಮೆ ಆಗಿದ್ದು ಉತ್ಪಾದನಾ ವೆಚ್ಚ ಏರಿಕೆ ಆಗಿ ಜಿಲ್ಲೆಯ ಕಾಫಿ ಬೆಳೆಗಾರರು ತೀವ್ರ ಬಿಕ್ಕಟ್ಟಿನಲ್ಲಿರುವ ಈ ಸಮಯದಲ್ಲಿ, ನಾವು ಈ ಘೋಷಣೆಯನ್ನು ಸ್ವಾಗತಿಸುತ್ತೇವೆ" ಎಂದು ವಯನಾಡ್ ಕಾಫಿ ಬೆಳೆಗಾರರ ​​ಸಂಘದ ಅಧ್ಯಕ್ಷ ಪ್ರಶಾಂತ್ ರಾಜೇಶ್ ಹೇಳಿದ್ದಾರೆ.

 ತಮಿಳುನಾಡು, ಕೇರಳ,ಪುದುಚ್ಚೇರಿಯಲ್ಲಿ 3 ದಿನ ಮತ್ತೆ ಅಬ್ಬರದ ಮಳೆ ತಮಿಳುನಾಡು, ಕೇರಳ,ಪುದುಚ್ಚೇರಿಯಲ್ಲಿ 3 ದಿನ ಮತ್ತೆ ಅಬ್ಬರದ ಮಳೆ

ವಯನಾಡಿನಲ್ಲಿ ಶುಕ್ರವಾರ ರೊಬಸ್ಟಾ ಚೆರಿ ಬೆಲೆ ಕೆಜಿಗೆ 64 ರೂ. ಆಗಿದ್ದು, ಕಳೆದ ವರ್ಷ ಕೆಜಿಗೆ ಇದೇ ಅವಧಿಯಲ್ಲಿ 72 ರೂಪಾಯಿಗಳಷ್ಟಿತ್ತು. ಎಂ. ಎಸ್‌. ಸ್ವಾಮಿನಾಥನ್‌ ಆಯೋಗವು ಕೂಡ ಎಂಎಸ್‌ಪಿಯನ್ನು ಶಿಫಾರಸು ಮಾಡಿರಲಿಲ್ಲ. ವಯನಾಡ್ ಜಿಲ್ಲೆಯು ವರ್ಷಕ್ಕೆ 90,000 ಟನ್‌ಗಿಂತಲೂ ಹೆಚ್ಚು ರೋಬಸ್ಟಾ ಚೆರಿ ಉತ್ಪಾದಿಸುತ್ತಿದೆ.

ಕೇರಳ ಸರ್ಕಾರವು ಬ್ರಹ್ಮಗಿರಿ ಯೋಜನೆಯನ್ನು ಜಾರಿಗೆ ತಂದಿದ್ದು ಈ ಮೂಲಕ ಬೆಳೆಗಾರರಿಗೆ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಹಣಕಾಸಿನ ನೆರವು ನೀಡಲಿದೆ. ವಯನಾಡ್ ಕಾಫಿ ಬ್ರಾಂಡ್ ಹೆಸರಿನಲ್ಲಿ ಮೌಲ್ಯವರ್ಧಿತ ಕಾಫಿ ಉತ್ಪನ್ನಗಳನ್ನು ಮಾರಾಟ ಮಾಡಲು ಕುಡುಂಬಶ್ರೀ ಘಟಕಗಳ ಅಡಿಯಲ್ಲಿ ನೂರು ಕಿಯೋಸ್ಕ್‌ ಗಳನ್ನು ಮತ್ತು 500 ಕಾಫಿ ವೆಂಡಿಂಗ್‌ ಮೆಷೀನ್‌ ಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. ವಯನಾಡಿನಲ್ಲಿ ಕಾಫಿ ಪಾರ್ಕ್‌ ಕೂಡ ಸ್ಥಾಪಿಸಲಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಫಿ ಮಂಡಳಿ ಮಾಜಿ ಸದಸ್ಯ ಡಾ. ಸಣ್ಣುವಂಡ ಕಾವೇರಪ್ಪ, "ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಕಷ್ಟದಲ್ಲಿರುವ ಬೆಳೆಗಾರರ ನೆರವಿಗೆ ಧಾವಿಸಬೇಕಿದೆ. ಏಕೆಂದರೆ ಕಾಫಿಯಿಂದ ಸರ್ಕಾರಗಳು ಕೋಟಿಗಟ್ಟಲೆ ರೂಪಾಯಿ ತೆರಿಗೆ ಸಂಗ್ರಹ ಮಾಡುತ್ತಿವೆ. ಆದರೆ, ಬೆಳೆಗಾರರನ್ನು ಸಂಪೂರ್ಣ ನಿರ್ಲಕ್ಷಿಸಿವೆ" ಎಂದು ದೂರಿದರು.

"ಇಂದು ದೇಶದಲ್ಲಿ ಎಲ್ಲಾ ಬೆಳೆಗಳಿಗೂ ವಿಮೆ ಸೌಲಭ್ಯ ಇದೆ. ಆದರೆ, ಕಾಫಿಗೆ ಅಲ್ಪ ಸಮಯ ಬೆಳೆ ವಿಮೆ ಸೌಲಭ್ಯ ನೀಡಿ ನಂತರ ನಿಲ್ಲಿಸಲಾಗಿದೆ. ಸರ್ಕಾರ ಕಮಾಡಿಟಿ ಬೋರ್ಡ್‌ ಸ್ಥಾಪಿಸಿ ಬೆಳೆಗಾರರ ನೆರವಿಗೆ ಮುಂದಾಗಲಿ" ಎಂದು ಒತ್ತಾಯಿಸಿದರು.

ಕೇರಳದಲ್ಲಿ ಮುಂದಿನ ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಂಎಸ್‌ಪಿ ಘೋಷಿಸಿದೆ. ಎಂಎಸ್‌ಪಿ ಅಡಿಯಲ್ಲಿ ಬೆಳೆಗಾರನ ಪೂರ್ಣ ಉತ್ಪನ್ನವನ್ನೂ ಖರೀದಿಸುವುದಿಲ್ಲ ಬದಲಿಗೆ ಪ್ರತಿಯೊಬ್ಬ ಬೆಳೆಗಾರನಿಂದಲೂ ಸೀಮಿತ ಪ್ರಮಾಣದ ಕಾಫಿ ಖರೀದಿಸಲಿದೆ ಎಂದೂ ಹೇಳಲಾಗುತ್ತಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಸ್ಪಷ್ಟ ಚಿತ್ರಣ ದೊರೆಯಲಿದೆ.

English summary
In a budget speech Kerala finance minister T.M. Thomas Isaac increased the minimum support price (MSP) for a kg of raw Robusta coffee to Rs 90.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X