• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Times Now-C-Voter Exit Polls: ಪಿಣರಾಯಿಗೆ ಮತ್ತೆ ಅಧಿಕಾರ

|

ಐದು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದೆ. ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೆರಿ ವಿಧಾನಸಭೆ ಚುನಾವಣೆಗಳು ಏಪ್ರಿಲ್ 6ರಂದು ಮುಕ್ತಾಯಗೊಂಡರೆ, ಪಶ್ಚಿಮ ಬಂಗಾಳದಲ್ಲಿ 8ನೇ ಹಾಗೂ ಕೊನೆ ಹಂತದ ಮತದಾನ ಇಂದು(ಏಪ್ರಿಲ್ 29) ಸಂಪನ್ನವಾಗಿದೆ. ಪ್ರಮುಖ ಮಾಧ್ಯಮಗಳು ಸೇರಿದಂತೆ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸುತ್ತಿವೆ. ಮೇ 2 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದೆ.

ಟೈಮ್ಸ್ ನೌ ಟಿವಿ ಹಾಗೂ ಸಿ-ವೋಟರ್ ಸಂಸ್ಥೆ ನಡೆಸಿದ ಚುನಾವಣೋತ್ತರ ಸಮೀಕ್ಷೆಯಂತೆ ಕೇರಳದಲ್ಲಿ ಆಡಳಿತಾರೂಢ ಲೆಫ್ಟ್ ಡೆಮೊಕ್ರಾಟಿಕ್ ಫ್ರಂಟ್ (LDF) ಮತ್ತೊಮ್ಮೆ ಅಧಿಕಾರಕ್ಕೇರಲಿದೆ. ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ ಸರಳ ಬಹುಮತ ಗಳಿಸಲಿದ್ದು, ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಮುಖಭಂಗ ಅನುಭವಿಸಲಿದೆ. ಪಿಣರಾಯಿ ವಿಜಯನ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.

ಕೇರಳ (140 ಸ್ಥಾನ, 71 ಮ್ಯಾಜಿಕ್ ನಂಬರ್) 2021 ಎಕ್ಸಿಟ್ ಪೋಲ್ ಫಲಿತಾಂಶ:
ಯುಡಿಎಫ್ : 65;
ಎಲ್‌ಡಿಎಫ್: 74;
ಎನ್‌ಡಿಎ+: 1;
ಇತರೆ: 00

ಶೇಕಡಾವಾರು ಮತ ಗಳಿಕೆ:
ಯುಡಿಎಫ್ : 41.4%
ಎಲ್‌ಡಿಎಫ್: 42.8%;;
ಎನ್‌ಡಿಎ+: 13.7;
ಇತರೆ: 2.2%

ಪಶ್ಚಿಮ ಬಂಗಾಳದಲ್ಲಿ 294, ತಮಿಳುನಾಡಿನಲ್ಲಿ 234, ಕೇರಳದಲ್ಲಿ 140, ಪುದುಚೇರಿಯಲ್ಲಿ 30 ಹಾಗೂ ಅಸ್ಸಾಂನಲ್ಲಿ 126 ಸ್ಥಾನಕ್ಕಾಗಿ ಚುನಾವಣೆ ನಡೆಸಲಾಗಿದೆ.

140 ಸ್ಥಾನಗಳ ವಿಧಾನಸಭೆಯ ಬಲಾಬಲ: ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ 93 ಸ್ಥಾನ, ಕಾಂಗ್ರೆಸ್ ನೇತೃತ್ವ ಯುಡಿಎಫ್ 42 ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ 1 ಸ್ಥಾನ ಹೊಂದಿದೆ. 2016ರ ಚುನಾವಣೆಯಲ್ಲಿ ಎಲ್ ಡಿ ಎಫ್ 91, ಯುಡಿಎಫ್ 47, ಕಾಂಗ್ರೆಸ್ 1, ಇತರೆ 1 ಎಂದು ಫಲಿತಾಂಶ ಬಂದಿತ್ತು.

English summary
Check out Kerala Assembly Elections Times Now-C-Voter Opinion and Exit Poll Results 2021 in Kannada which projects victory for UDF.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X