ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೀರಂನಿಂದ ನೇರವಾಗಿ ಕೋವಿಶೀಲ್ಡ್ ಖರೀದಿಸಿದ ಕೇರಳ, ಬಂತು 3.5 ಲಕ್ಷ ಕೊರೊನಾ ಲಸಿಕೆ

|
Google Oneindia Kannada News

ಕೊಚ್ಚಿ, ಮೇ 10: ಕೇರಳ ಸರ್ಕಾರವು ಸೀರಂ ಇನ್‌ಸ್ಟಿಟ್ಯೂಟ್‌ನಿಂದ 3.5 ಲಕ್ಷ ಕೋವಿಶೀಲ್ಡ್ ಕೊರೊನಾ ಲಸಿಕೆ ಖರೀದಿಸಿದ್ದು, ಕೊಚ್ಚಿ ವಿಮಾನ ನಿಲ್ದಾಣವನ್ನು ತಲುಪಿದೆ.

ಇಂದು ಮಧ್ಯಾಹ್ನ 12: 30ಕ್ಕೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಕೋವಿಶೀಲ್ಡ್ ಲಸಿಕೆ ಆಗಮಿಸಿದ್ದು, ಅದನ್ನು ಕೊಚ್ಚಿಯ ಮಂಜುಮ್ಮೆಲ್‌ನಲ್ಲಿರುವ ಕೇರಳ ವೈದ್ಯಕೀಯ ಸೇವೆಗಳ ನಿಗಮದ ಗೋದಾಮಿಗೆ ಸ್ಥಳಾಂತರಿಸಲಾಗಿದೆ.

ಆಪರೇಷನ್ ಸಮುದ್ರ ಸೇತು: ವಿದೇಶದಿಂದ ಆಕ್ಸಿಜನ್ ಹೊತ್ತುಬಂದ ಭಾರತೀಯ ನೌಕಾಪಡೆಆಪರೇಷನ್ ಸಮುದ್ರ ಸೇತು: ವಿದೇಶದಿಂದ ಆಕ್ಸಿಜನ್ ಹೊತ್ತುಬಂದ ಭಾರತೀಯ ನೌಕಾಪಡೆ

ಕೇರಳ ಸರ್ಕಾರ ನೇರವಾಗಿ ಪುಣೆಯ ಸೆರಂ ಇನ್‌ಸ್ಟಿಟ್ಯೂಟ್‌ನಿಂದ ಕೋವಿಶೀಲ್ಡ್ ಲಸಿಕೆ ಖರೀದಿಸಿದ್ದು, ಸೋಮವಾರ 3.5 ಲಕ್ಷ ಡೋಸ್ ಲಸಿಕೆ ಕೊಚ್ಚಿ ವಿಮಾನ ನಿಲ್ದಾಣ ತಲುಪಿದೆ.

Kerala Buys Covishield Directly From Serum Institute, 3.5 Lakh Doses Land In Kochi

ಕೇರಳ ಸರ್ಕಾರ ಒಟ್ಟು ಒಂದು ಕೋಟಿ ಡೋಸ್ ಲಸಿಕೆಯನ್ನು ನೇರವಾಗಿ ಉತ್ಪಾದಕರಿಂದ ಖರೀದಿಸಲು ನಿರ್ಧರಿಸಿದ್ದು, 70 ಲಕ್ಷ ಡೋಸ್ ಕೋವಿಶೀಲ್ಡ್ ಮತ್ತು 30 ಲಕ್ಷ ಡೋಸ್ ಕೋವಾಕ್ಸಿನ್ ಖರೀದಿಸುತ್ತಿದೆ.

ಆರೋಗ್ಯ ಇಲಾಖೆಯು ನಂತರ ಪ್ರತಿ ಜಿಲ್ಲೆಗೆ ಅವಶ್ಯಕತೆಗಳನ್ನು ಆಧರಿಸಿ ಲಸಿಕೆಗಳನ್ನು ನಿರ್ಧರಿಸುತ್ತದೆ ಮತ್ತು ಹಂಚಿಕೆ ಮಾಡುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಒಂದೇ ದಿನ 3,66,161 ಮಂದಿಗೆ ಕೊರೊನಾವೈರಸ್ ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 3,53,818 ಸೋಂಕಿತರು ಗುಣಮುಖರಾಗಿದ್ದರೆ, 3,754 ಮಂದಿ ಬಲಿಯಾಗಿದ್ದಾರೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 2,26,62,575 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 2,26,62,575 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 2,46,116 ಸಾವಿನ ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ 37,45,237 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಈವರೆಗೂ 17,01,53,432 ಕೋಟಿ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಈ ಪೈಕಿ 95,46,871 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 64,71,090 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,39,71,341 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 77,54,283 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

English summary
The first consignment of the Covid vaccine purchased by the Kerala government arrived at the Kochi airport on Monday afternoon
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X