Get Updates
Get notified of breaking news, exclusive insights, and must-see stories!

ಹೇಳುವವರು, ಕೇಳುವವರು ಇಲ್ಲವೇ ನಿಮಗೆ: ಕೇರಳ ಸರ್ಕಾರಕ್ಕೆ ತರಾಟೆ!

ತಿರುವನಂತಪುರಂ, ಜನವರಿ.17: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿರುವ ಕೇರಳ ಸರ್ಕಾರವನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ತರಾಟೆ ತೆಗೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ ಸಿಎಎ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ನಿರ್ಧಾರದ ಬಗ್ಗೆ ವರದಿ ನೀಡುವಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಡಕ್ ಆಗಿ ಹೇಳಿದ್ದಾರೆ.

ಸಿಎಎ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಕ್ಕೆ ತಮ್ಮ ಅಭ್ಯಂತರವಿಲ್ಲ. ಆದರೆ, ರಾಜ್ಯದ ಸಾಂವಿಧಾನಿಕ ವ್ಯವಸ್ಥೆಯ ಮುಖ್ಯಸ್ಥರಾಗಿರುವ ತಮಗೆ ಮಾಹಿತಿ ನೀಡದೇ ನಿರ್ಧಾರ ತೆಗೆದುಕೊಂಡಿದ್ದಕ್ಕೆ ರಾಜ್ಯಪಾಲರು ಸಿಡಿಮಿಡಿಗೊಂಡಿದ್ದಾರೆ.

"ಭಾರತೀಯ ಸಾಂವಿಧಾನಿಕ ನಿಯಮ ರಕ್ಷಣೆಗೆ ಬದ್ಧ"

ಕೇರಳದ ರಾಜ್ಯಪಾಲರಾಗಿ ಕೆಲಸ ಮಾಡುತ್ತಿರುವ ತಾವು ಒಂದು ಸಾಂವಿಧಾನಿಕ ಸ್ಥಾನದಲ್ಲಿದ್ದುಕೊಂಡು ಕರ್ತವ್ಯವನ್ನು ಪಾಲಿಸಬೇಕಿದೆ. ಕೇರಳದಲ್ಲಿ ಸಾಂವಿಧಾನಿಕ ಯಂತ್ರ ಕುಸಿಯದಂತೆ ಎಚ್ಚರಿಕೆ ವಹಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ತಿಳಿಸಿದ್ದಾರೆ.

ಮಾಹಿತಿ ನೀಡದೇ ಸುಪ್ರೀಂಕೋರ್ಟ್ ಗೆ ಹೋಗಿದ್ದೇಕೆ?

ಮಾಹಿತಿ ನೀಡದೇ ಸುಪ್ರೀಂಕೋರ್ಟ್ ಗೆ ಹೋಗಿದ್ದೇಕೆ?

ಸಿಎಎ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವ ಮೊದಲು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿರುವ ರಾಜ್ಯಪಾಲರ ಗಮನಕ್ಕೆ ತರಬೇಕು. ರಾಜ್ಯಪಾಲರ ಸಹಮತದ ಬಳಿಕ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳಬೇಕು. ಆದರೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಎಲ್ಲ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ತಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತರುತ್ತಿಲ್ಲ. ಬದಲಿಗೆ ಸುದ್ದಿ ಮಾಧ್ಯಮ ಹಾಗೂ ದಿನಪತ್ರಿಕೆಗಳ ಮೂಲಕ ಅದನ್ನೆಲ್ಲ ತಿಳಿದುಕೊಳ್ಳುವಂತಾ ಪರಿಸ್ಥಿತಿ ಎದುರಾಗಿದೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ರಬ್ಬರ್ ಸ್ಟ್ಯಾಂಪ್ ನಂತೆ ರಾಜ್ಯಪಾಲರು ಅಲ್ಲವೇ ಅಲ್ಲ"

ಗುರುವಾರ ಸಹ ಕೇರಳ ಸರ್ಕಾರದ ವಿರುದ್ಧ ಕಿಡಿ ಕಾರಿದ್ದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ರಾಜ್ಯಪಾಲರು ಎಂದರೆ ರಬ್ಬರ್ ಸ್ಟ್ಯಾಂಪ್ ಅಲ್ಲ ಗರಂ ಆಗಿ ಹೇಳಿದ್ದರು. ಸಾಂವಿಧಾನಿಕ ವ್ಯವಸ್ಥೆ ಮುಖ್ಯಸ್ಥರಿಗೇ ತಿಳಿಸದೇ ಈ ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಷ್ಟು ಸರಿ ಎಂದು ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಶಿಷ್ಟಾಚಾರದ ಜೊತೆಗೆ ಸೌಜನ್ಯವನ್ನೂ ಉಲ್ಲಂಘನೆ ಮಾಡಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದ್ದಾರೆ.

ಸಿಎಎ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಪಿಣರಾಯಿ ವಿಜಯನ್

ಸಿಎಎ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಪಿಣರಾಯಿ ವಿಜಯನ್

ಈ ಹಿಂದೆ ಜನವರಿ.14ರಂದು ಸಿಎಎ ವಿರುದ್ಧ ಕೇರಳ ಸರ್ಕಾರವು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಗ್ರೀಕ್ಸ್, ರೋಮನ್ಸ್, ಅರಬ್ಸ್, ಪ್ರತಿಯೊಬ್ಬರು ಈ ನೆಲಕ್ಕೆ ಬಂದಿದ್ದಾರೆ. ಕ್ರಿಶ್ಚಿಯನ್ ಮತ್ತು ಮುಸ್ಲಿಂರು ಆರಂಭದಿಂದಲೂ ಇದ್ದಾರೆ. ಎಲ್ಲರ ಒಳ್ಳಗೊಳ್ಳುವಿಕೆ ನಮ್ಮ ಸಂಪ್ರದಾಯವಾಗಿದೆ. ನಮ್ಮ ವಿಧಾನಸಭೆಯು ಸಂಪ್ರದಾಯವನ್ನು ಉಳಿಸಬೇಕಾದ ಅಗತ್ಯವಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾದಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+