• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇರಳ ಸಿಎಂ ಪಿಣರಾಯಿ ವಿಜಯನ್, 3 ಸಚಿವರಿಗೆ ಕ್ವಾರಂಟೈನ್

|
Google Oneindia Kannada News

ತಿರುವನಂತಪುರಂ, ಆಗಸ್ಟ್ 14 : ಕೇರಳ ಮುಖ್ಯಮಂತ್ರಿ ಮತ್ತು ಮೂವರು ಸಚಿವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಏರ್ ಇಂಡಿಯಾ ವಿಮಾನ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಎಲ್ಲರೂ ಜಿಲ್ಲಾಧಿಕಾರಿಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದರು.

ಶುಕ್ರವಾರ ಮಲಪ್ಪುರಂ ಜಿಲ್ಲಾಧಿಕಾರಿ ಕೆ. ಗೋಪಾಲಕೃಷ್ಣನ್ ಸೇರಿದಂತೆ 22 ಅಧಿಕಾರಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ. ವಿಮಾನ ದುರಂತ ನಡೆದಾಗ ಎಲ್ಲರೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಜಿಲ್ಲಾಧಿಕಾರಿಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಮುಖ್ಯಮಂತ್ರಿ ಮತ್ತು ಮೂವರು ಸಚಿವರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ವಿಮಾನ ಅಪಘಾತ ನಡೆದ ಸ್ಥಳದ ದೃಶ್ಯ ಉಪಗ್ರಹ ಚಿತ್ರಗಳಲ್ಲಿ ಕಾಣಿಸಿದ್ದು ಹೀಗೆ...ವಿಮಾನ ಅಪಘಾತ ನಡೆದ ಸ್ಥಳದ ದೃಶ್ಯ ಉಪಗ್ರಹ ಚಿತ್ರಗಳಲ್ಲಿ ಕಾಣಿಸಿದ್ದು ಹೀಗೆ...

ಆಗಸ್ಟ್ 9ರಂದು ದುಬೈನಿಂದ ವಂದೇ ಭಾರತ್ ಮಿಷನ್ ಅಡಿ ಕೇರಳದ ಕೋಯಿಕ್ಕೋಡ್‌ಗೆ ಆಗಮಿಸಿದ್ದ ವಿಮಾನ ಪ್ರತಿಕೂಲ ಹವಮಾನದ ಕಾರಣ ಲ್ಯಾಂಡಿಂಗ್ ಆಗುವ ವೇಳೆ ಅಪಘಾತಕ್ಕೀಡಾಗಿತ್ತು. ಈ ಘಟನೆಯಲ್ಲಿ 18 ಪ್ರಯಾಣಿಕರು ಮೃತಪಟ್ಟಿದ್ದರು.

ಕೇರಳ ವಿಮಾನ ದುರಂತ; ಡಿಸಿ ಸೇರಿ 600 ಜನರಿಗೆ ಕ್ವಾರಂಟೈನ್ ಕೇರಳ ವಿಮಾನ ದುರಂತ; ಡಿಸಿ ಸೇರಿ 600 ಜನರಿಗೆ ಕ್ವಾರಂಟೈನ್

ವಿಮಾನ ಅಪಘಾತ ನಡೆದಾಗ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಜಿಲ್ಲಾಧಿಕಾರಿ ಕೆ. ಗೋಪಾಲಕೃಷ್ಣನ್ ಸೇರಿದಂತೆ 600 ಜನರು ಕ್ವಾರಂಟೈನ್‌ನಲ್ಲಿದ್ದರು. ಇವರಲ್ಲಿ 22 ಅಧಿಕಾರಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ.

ಕೋಯಿಕ್ಕೋಡ್‌; ದೊಡ್ಡ ವಿಮಾನಗಳ ಬಳಕೆಗೆ ನಿಷೇಧ ಕೋಯಿಕ್ಕೋಡ್‌; ದೊಡ್ಡ ವಿಮಾನಗಳ ಬಳಕೆಗೆ ನಿಷೇಧ

ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಆರೋಗ್ಯ ಸಚಿವೆ ಕೆ. ಕೆ. ಶೈಲಜಾ ಸೇರಿದಂತೆ ಸಚಿವರು, ಹಿರಿಯ ಅಧಿಕಾರಿಗಳು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು. ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಆದ್ದರಿಂದ, ಎಲ್ಲರೂ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

English summary
Kerala chief minister Pinarayi Vijayan and 3 other ministers go into self-quarantine after coming on primary contact list of Malappuram district collector. Malappuram collector K. Gopalakrishnan tested positive for COVID 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X