• search
  • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರಿಗೆ ಕೊರೊನಾವೈರಸ್

|

ತಿರುವನಂತಪುರಂ, ಏಪ್ರಿಲ್ 08: ಕೇರಳದಲ್ಲಿ ಕೊವಿಡ್-19 ಸೋಂಕಿನ ಹರಡುವಿಕೆ ಭೀತಿ ದಿನೇ ದಿನೆ ಹೆಚ್ಚುತ್ತಿದೆ. ಗುರುವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

"ನನಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಿಂದ ಗೊತ್ತಾಗಿದೆ. ಕೊಚಿಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ: ಬಿಜೆಪಿ ಆಡಳಿತದ ರಾಜ್ಯಗಳಿಗೆ ಹೆಚ್ಚು ಡೋಸ್ ಪೂರೈಕೆಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ: ಬಿಜೆಪಿ ಆಡಳಿತದ ರಾಜ್ಯಗಳಿಗೆ ಹೆಚ್ಚು ಡೋಸ್ ಪೂರೈಕೆ

ಇತ್ತೀಚಿನ ದಿನಗಳಲ್ಲಿ ನನ್ನ ಜೊತೆ ಸಂಪರ್ಕಕ್ಕೆ ಬಂದವರು ಕೊರೊನಾವೈರಸ್ ಸೋಂಕಿತ ತಪಾಸಣೆ ಮಾಡಿಸಿಕೊಳ್ಳಬೇಕು ಹಾಗೂ ಸ್ವಯಂಪ್ರೇರಿತರಾಗಿ ಆರೋಗ್ಯದ ಮೇಲೆ ನಿಗಾ ವಹಿಸಬೇಕು ಎಂದು ಪಿಣರಾಯಿ ವಿಜಯನ್ ಮನವಿ ಮಾಡಿಕೊಂಡಿದ್ದಾರೆ.


ಐದು ದಿನಗಳ ಹಿಂದೆಯಷ್ಟೇ ಲಸಿಕೆ ಪಡೆದಿದ್ದರು:

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಳೆದ ಏಪ್ರಿಲ್ 3ರಂದು ಕೊವಿಡ್-19 ಲಸಿಕೆಯನ್ನು ಪಡೆದುಕೊಂಡಿದ್ದರು. ಅದಾಗಿ ಐದು ದಿನಗಳಲ್ಲೇ ಕೊರೊನಾವೈರಸ್ ಸೋಂಕು ತಗುಲಿರುವುದು ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲೇ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾದ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಎರಡನೇ ಸ್ಥಾನದಲ್ಲಿದೆ. ಕೇರಳದಲ್ಲಿ ಈವರೆಗೂ 11,44,595 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ 4711 ಮಂದಿ ಬಲಿಯಾಗಿದ್ದಾರೆ. 11,08,078 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

English summary
Kerala Chief Minister Pinarayi Vijayan Tests Positive For COVID19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X