ತಿರುವನಂತಪುರಂ ಮೇಯರ್ ಸೋಲಿಸಿದ ಬಿಜೆಪಿ ಅಭ್ಯರ್ಥಿ
ತಿರುವನಂತಪುರಂ, ಡಿ. 15: ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯ ಮತ ಎಣಿಕೆ ಕಾರ್ಯ ಜಾರಿಯಲ್ಲಿದ್ದು, ಎಲ್ ಡಿಎಫ್ ಆರಂಭಿಕ ಹಿನ್ನಡೆ ಅನುಭವಿಸಿದೆ. ತಿರುವನಂತಪುರಂ ಮೇಯರ್ ಕೆ ಶ್ರೀಕುಮಾರ್ (ಎಲ್ ಡಿ ಎಫ್) ಅವರಿಗೆ ಸೋಲುಂಟಾಗಿದೆ.
ತಿರುವನಂತಪುರಂ ಮೇಯರ್ ಕೆ ಶ್ರೀಕುಮಾರ್ ಅವರನ್ನು ಬಿಜೆಪಿ ಅಭ್ಯರ್ಥಿ ಡಿಜಿ ಕುಮಾರನ್ ಸೋಲಿಸಿದ್ದಾರೆ. ಕಾರಿಕ್ಕಾಕೊಂ ವಾರ್ಡ್ ನಲ್ಲಿ ನಡೆದ ಬಿರುಸಿನ ಸ್ಪರ್ಧೆಯಲ್ಲಿ ಎನ್ಡಿಎ ಅಭ್ಯರ್ಥಿ ಕುಮಾರನ್ ಅವರು 116 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
ಬಿಜೆಪಿ ಆರಂಭಿಕ ಉತ್ತಮ ಮುನ್ನಡೆ: ಬಿಜೆಪಿ ಅಭ್ಯರ್ಥಿಗಳು ಕೊಚ್ಚಿಯ ಮೇಯರ್ ಅಕಾಂಕ್ಷಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದ ಬಳಿಕ ತಿರುವನಂತಪುರಂ ಮೇಯರ್ ಕೂಡಾ ಸೋಲಿಸಿದ್ದಾರೆ. ಇದಲ್ಲದೆ ಕಣ್ಣೂರು ಮುನ್ಸಿಪಲ್ ಕಾರ್ಪೊರೇಷನ್ ಹಾಗೂ ನೀಲಂಬೂರ್ ಹಾಗೂ ಕಲಚ್ಚೇರಿ ಮುನ್ಸಿಪಾಲಿಟಿಯಲ್ಲೂ ಬಿಜೆಪಿ ಗೆಲುವು ದಾಖಲಿಸಿದೆ. ಆದರೆ, ತ್ರಿಶ್ಶೂರ್ ಮುನ್ಸಿಪಾಲ್ ಕಾರ್ಪೊರೇಷನ್ ನಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಬಿ ಗೋಪಾಲಕೃಷ್ಣನ್ ಸೋಲು ಕಂಡಿದ್ದಾರೆ.
ತಿರುವನಂತಪುರಂ ಮೇಯರ್ ಸೋಲಿಸಿದರೂ ಬಿಜೆಪಿಗೆ ಹಿನ್ನಡೆಯಾಗಿದೆ. 2015ರಲ್ಲಿ ಗಳಿಸಿದ್ದಕ್ಕಿಂತ ಕಡಿಮೆ ಸಂಖ್ಯೆಗೆ ಕುಸಿದಿದೆ. ಕಳೆದ ಬಾರಿ 34 ಸ್ಥಾನ ಪಡೆದಿದ್ದ ಬಿಜೆಪಿ ಈ ಬಾರಿ 30 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಆದರೆ, ಎಲ್ ಡಿಎಫ್ 50 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ ಯುಡಿಎಫ್ 9ರಲ್ಲಿ ಮುನ್ನಡೆ ಪಡೆದಿದೆ. ಹೈದರಾಬಾದ್ ಪಾಲಿಕೆ ಚುನಾವಣೆಯಿಂದ ಪ್ರೇರಿತರಾಗಿ ಈ ಪಾಲಿಕೆ ಗೆಲ್ಲಲು ಜಿಲ್ಲಾ ಬಿಜೆಪಿ ಅಧ್ಯಕ್ಷ ವಿವಿ ರಾಜೇಶ್ ರನ್ನು ಉಸ್ತುವಾರಿವಾಗಿ ನೇಮಿಸಲಾಗಿತ್ತು.

ಸ್ಥಳೀಯ ಸಂಸ್ಥೆ ಚುನಾವಣೆ: 941 ಗ್ರಾಮ ಪಂಚಾಯಿತಿಯ 15,962ವಾರ್ಡ್, 152 ಬ್ಲಾಕ್ ಪಂಚಾಯಿತಿಯ 2080 ವಾರ್ಡು, 14 ಜಿಲ್ಲಾ ಪಂಚಾಯಿತಿಯ 331 ಡಿವಿಷನ್, 86 ಮುನ್ಸಿಪಾಲಿಟಿಯ 3078 ವಾರ್ಡು, 6 ಮುನ್ಸಿಪಲ್ ಕಾರ್ಪೊರೇಷನ್ ನ 414 ವಾರ್ಡುಗಳಿಗೆ ಡಿಸೆಂಬರ್ 8, 10 ಹಾಗೂ 14ರಂದು ಮತದಾನ ನಡೆಸಲಾಗಿದ್ದು, ಒಟ್ಟಾರೆ, 76% ಮತದಾನ ದಾಖಲಾಗಿದೆ. ಡಿಸೆಂಬರ್ 16ರಂದು ಫಲಿತಾಂಶ ಹೊರ ಬರಲಿದೆ.
ಮುಂಬರುವ ವಿಧಾನಸಭಾ ಚುನಾವಣೆ ಹಿತದೃಷ್ಟಿಯಿಂದ ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಎಲ್ ಡಿಎಫ್, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಲ್ಲದೆ ಬಿಜೆಪಿ ನೇತೃತ್ವದ ಎನ್ಡಿಎ ಸೆಣಸಾಡುತ್ತಿವೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications