ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಭಾರತವು ಕಡಿಮೆ ಬೆಲೆಯಲ್ಲಿ ಕೊರೊನಾ ಲಸಿಕೆ ಪಡೆಯಲು ಏನು ಮಾಡಬೇಕು"

|
Google Oneindia Kannada News

ನವದೆಹಲಿ, ಮೇ 24: ಭಾರತದಲ್ಲಿ ಕೊರೊನಾವೈರಸ್ ಲಸಿಕೆಯು ಕಡಿಮೆ ಬೆಲೆಯಲ್ಲಿ ಸಿಗಬೇಕಿದ್ದರೆ ಕೇಂದ್ರ ಸರ್ಕಾರವೇ ಅದನ್ನು ಜಾಗತಿಕ ಮಾರುಕಟ್ಟೆಯಲ್ಲಿ ನಿರ್ವಹಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರ ಬರೆದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಕೊವಿಡ್-19 ಲಸಿಕೆ ಖರೀದಿ ಟೆಂಡರ್ ನಲ್ಲಿ ರಾಜ್ಯ ಸರ್ಕಾರಗಳು ಭಾಗವಹಿಸಲು ಅನುಮತಿ ನೀಡಿದ್ದಲ್ಲಿ ಪೈಪೋಟಿ ಹೆಚ್ಚುತ್ತದೆ. ಇದರಿಂದ ನೈಸರ್ಗಿಕವಾಗಿ ಲಸಿಕೆಯ ಬೆಲೆಯು ಹೆಚ್ಚಾಗುತ್ತದೆ. ಇದರ ಬದಲಿಗೆ ಕೇಂದ್ರ ಸರ್ಕಾರವೇ ಜಾಗತಿಕ ಮಾರುಕಟ್ಟೆಯಲ್ಲಿ ಲಸಿಕೆಯನ್ನು ಟೆಂಡರ್ ಮೂಲಕ ಕಡಿಮೆ ಬೆಲೆಯಲ್ಲಿ ಖರೀದಿಸಬೇಕು.

ಕೊರೊನಾವೈರಸ್ ಕಾಲದಲ್ಲಿ ಕೈ ಚೆಲ್ಲಿದರಾ ಪ್ರಧಾನಮಂತ್ರಿ ಮೋದಿ!?ಕೊರೊನಾವೈರಸ್ ಕಾಲದಲ್ಲಿ ಕೈ ಚೆಲ್ಲಿದರಾ ಪ್ರಧಾನಮಂತ್ರಿ ಮೋದಿ!?

ದೇಶದಲ್ಲಿ ವಿವಿಧ ರಾಜ್ಯಗಳಿಗೆ ಅಗತ್ಯಕ್ಕೆ ತಕ್ಕ ರೀತಿಯಲ್ಲಿ ಉಚಿತವಾಗಿ ಕೇಂದ್ರ ಸರ್ಕಾರವೇ ಕೊರೊನಾವೈರಸ್ ಲಸಿಕೆಯನ್ನು ಹಂಚಿಕೆ ಮಾಡಬೇಕು ಎಂದು ಪ್ರಧಾನಮಂತ್ರಿಗೆ ಬರೆದ ಪತ್ರದಲ್ಲಿ ಮುಖ್ಯಂತ್ರಿ ಪಿಣರಾಯಿ ವಿಜಯನ್ ಮನವಿ ಮಾಡಿಕೊಂಡಿದ್ದಾರೆ.

 Kerala CM Pinarayi Vijayan Request Centre To Handle Global Tender To Reduce Coronavirus Vaccine Price

ದೇಶಕ್ಕೆ ಕಡಿಮೆ ಬೆಲೆಯಲ್ಲಿ ಕೊರೊನಾವೈರಸ್ ಲಸಿಕೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ನಿಯಂತ್ರಣಕ್ಕೆ ಲಸಿಕೆ ವಿತರಣೆಯೊಂದೇ ಪ್ರಮುಖ ಮಾರ್ಗವಾಗಿದೆ. ಕೊವಿಡ್-19 ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ಎಲ್ಲರಿಗೂ ಲಸಿಕೆ ನೀಡುವ ಅನಿವಾರ್ಯತೆಯಿದೆ. ಈ ಹಿನ್ನೆಲೆ ರಾಜ್ಯಗಳಿಗೆ ಹೆಚ್ಚು ಹೆಚ್ಚು ಲಸಿಕೆಯನ್ನು ಹಂಚಿಕೆ ಮಾಡಬೇಕಿದೆ. ಕೇಂದ್ರ ಸರ್ಕಾರವೇ ನೇರವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಟೆಂಡರ್ ಮೂಲಕ ಕೊವಿಡ್-19 ಲಸಿಕೆ ಖರೀದಿಗೆ ಮುಂದಾಗುವುದರಿಂದ ಲಸಿಕೆಗಳು ಕಡಿಮೆ ಬೆಲೆಯಲ್ಲಿ ಸಿಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

English summary
Kerala CM Pinarayi Vijayan Request Centre Govt To Handle Global Tender To Reduce Coronavirus Vaccine Price.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X