ಅಳಿಯನಿಗೆ ಜೈಲು: ಚುನಾವಣೆ ಸಮೀಪದಲ್ಲಿಯೇ ಕೇರಳ ಸಿಎಂ ಪಿಣರಾಯಿಗೆ ಆಘಾತ
ತಿರುವನಂತಪುರಂ, ಮಾರ್ಚ್ 3: ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕೇರಳದಲ್ಲಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಸಂಕಷ್ಟ ಎದುರಾಗಿದೆ. ಬಹು ದೀರ್ಘ ಸಮಯದಿಂದ ಬಾಕಿ ಉಳಿದಿದ್ದ ಪ್ರತಿಭಟನೆ ಪ್ರಕರಣವೊಂದರಲ್ಲಿ ಪಿಣರಾಯಿ ವಿಜಯನ್ ಅವರ ಅಳಿಯನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಇದರಿಂದ ಚುನಾವಣೆ ಸಮೀಪದಲ್ಲಿಯೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಸಿಪಿಎಂ ಪಕ್ಷ ತೀವ್ರ ಮುಜುಗರಕ್ಕೆ ಒಳಗಾಗಿದೆ.
ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸಿಸ್ಟ್) ಮುಖಂಡರಾದ ಪಿ.ಎ. ಮೊಹಮ್ಮದ್ ರಿಯಾಸ್, ಟಿವಿ ರಾಜೇಶ್ ಮತ್ತು ಕೆಕೆ ದಿನೇಶ್ ಅವರಿಗೆ ಕೋಯಿಕ್ಕೋಡ್ ನ್ಯಾಯಾಲಯವೊಂದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವಿಮಾನಗಳ ರದ್ದತಿ ಹಾಗೂ ವಿಮಾನ ಪ್ರಯಾಣ ದರಗಳ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಪಿ.ಎ. ಮೊಹಮ್ಮದ್ ರಿಯಾಸ್ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಳಿಯ. ಜತೆಗೆ ಪಕ್ಷದ ಯುವ ಮೋರ್ಚಾ ಘಟಕ ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾದ (ಡಿವೈಎಫ್‌ಐ) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಮುಂದೆ ಓದಿ.

ರಾಜೇಶ್ ನೇತೃತ್ವದಲ್ಲಿ ಪ್ರತಿಭಟನೆ
ಕಣ್ಣೂರು ಜಿಲ್ಲೆಯಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಜೇಶ್, ಡಿವೈಎಫ್ಐ ಮುಖಂಡ ಕೆ.ಕೆ. ದಿನೇಶ್ ಹಾಗೂ ಮೊಹಮ್ಮದ್ ರಿಯಾಸ್ ಅವರು 2009ರಲ್ಲಿ ಏರ್ ಇಂಡಿಯಾ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯನ್ನು ರಾಜೇಶ್ ಅರಂಭಿಸಿದ್ದರು. ಈ ಪ್ರತಿಭಟನೆಗಾಗಿ ನಾಯಕರ ವಿರುದ್ಧ 2009ರಲ್ಲಿ ಕೋಯಿಕ್ಕೋಡ್‌ನಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸಿಗದ ಜಾಮೀನು, ಜೈಲಿಗೆ
ಈ ಪ್ರಕರಣದಲ್ಲಿ ನಾಯಕರು ಜಾಮೀನು ಪಡೆದುಕೊಂಡಿದ್ದರು. ಜಾಮೀನಿನ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಜಾಮೀನು ಪಡೆದುಕೊಳ್ಳಲು ಮಂಗಳವಾರ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಇದಕ್ಕೂ ಮುನ್ನ ಅನೇಕ ನೋಟಿಸ್‌ಗಳನ್ನು ನೀಡಿದ್ದರೂ ಅವರು ನ್ಯಾಯಾಲಯದ ಮುಂದೆ ಹಾಜರಾಗಿರಲಿಲ್ಲ. ಆದರೆ ಈ ಬಾರಿ ಅವರಿಗೆ ಜಾಮೀನು ನೀಡದ ನ್ಯಾಯಾಲಯ, ಅವರನ್ನು ಜೈಲಿಗೆ ಕಳುಹಿಸಿದೆ.

ಏರ್ ಇಂಡಿಯಾ ಕಚೇರಿಯಲ್ಲಿ ದಾಂದಲೆ
ಸುಮಾರು 12 ವರ್ಷದ ಹಿಂದೆ ಪ್ರತಿಭಟನೆ ನಡೆದ ಸಂದರ್ಭದಲ್ಲಿ ಟಿವಿ ರಾಜೇಶ್ ಅವರು ಡಿವೈಎಫ್‌ಐನ ರಾಜ್ಯ ಕಾರ್ಯದರ್ಶಿಯಾಗಿದ್ದರು. ಪಿ.ಎ. ಮೊಹಮ್ಮದ್ ರಿಯಾಸ್ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿಯಾಗಿದ್ದರು. ಸೆಪ್ಟೆಂಬರ್ 9ರಂದು ಏರ್ ಇಂಡಿಯಾ ಕಚೇರಿಗೆ ನುಗ್ಗಿದ್ದ ತಂಡ, ಕಚೇರಿ ಮೇಲೆ ದಾಳಿ ನಡೆಸಿ, ಹಾನಿ ಮಾಡಿದ್ದರು.

ಪಿಣರಾಯಿ ಮಗಳೊಂದಿಗೆ ಮದುವೆ
ಮೊಹಮ್ಮದ್ ರಿಯಾಸ್ ಪ್ರಸ್ತುತ ಡಿವೈಎಫ್‌ಐ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ಕಳೆದ ವರ್ಷ ಪಿಣರಾಯಿ ವಿಜಯನ್ ಅವರ ನಿವಾಸದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಅವರ ಮಗಳು ವೀಣಾ ಅವರನ್ನು ಮದುವೆಯಾಗಿದ್ದರು. ಇದು ರಿಯಾಸ್ ಹಾಗೂ ವೀಣಾ ಇಬ್ಬರಿಗೂ ಎರಡನೆಯ ಮದುವೆಯಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications