ಬಸವ ಜಯಂತಿಗೆ ಕನ್ನಡದಲ್ಲಿ ಶುಭಕೋರಿದ ಕೇರಳ ಮುಖ್ಯಮಂತ್ರಿ
ಬೆಂಗಳೂರು, ಏಪ್ರಿಲ್ 26: ಮಹಾ ಶಿವಶರಣ, ಅನುಭವ ಮಂಟಪ ಸಂಸ್ಥಾಪಕ, ಕ್ರಾಂತಿಯೋಗಿ ಬಸವಣ್ಣ ಜಯಂತಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದ ದೇಶದ ಹಲವು ಪ್ರಮುಖರು ಶುಭಕೋರಿದ್ದಾರೆ.
ನೆರೆ ರಾಜ್ಯ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಸವ ಜಯಂತಿಗೆ ಕನ್ನಡದಲ್ಲಿ ಶುಭಕೋರಿರುವುದು ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.

''ನಮ್ಮ ಭಿನ್ನಾಭಿಪ್ರಾಯಗಳನ್ನು ಮೀರಿ ಬೆಳೆಯಲು ಬಸವಣ್ಣ ನಮಗೆ ಮಾರ್ಗದರ್ಶಿಯಾಗಲಿ. ನಾವು ಕೊರೊನಾ ವಿರುದ್ಧ ಪ್ರತ್ಯೇಕವಾಗಿ ಹೋರಾಡಿ ಗೆಲ್ಲಲು ಸಾಧ್ಯವಿಲ್ಲ. ಈ ಸಾಂಕ್ರಾಮಿಕ ರೋಗವನ್ನು ಗೆಲ್ಲಲು ನಾವೆಲ್ಲ ಒಂದಾಗಿ ಹೋರಾಡಬೇಕಿದೆ'' ಎಂದು ಟ್ವೀಟ್ ಮಾಡಿರುವ ಪಿಣರಾಯಿ ವಿಜಯನ್ ಬಸವಣ್ಣ ಅವರ ವಚನದ ಸಾಲುಗಳನ್ನು ಕೂಡ ಬಳಸಿದ್ದಾರೆ.
#BasavaJayanti Greetings
— Pinarayi Vijayan (@vijayanpinarayi) April 26, 2020
Let the great Basavanna be our guide to transcend our differences. We will not win the battle against the pandemic by being divided. It takes all of us to win this.
"ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ.
ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ." pic.twitter.com/vQPcWYLWbc
"ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ.
ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ." ಎಂಬ ಸಾಲು ಬಳಸುವ ಮೂಲಕ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ವಿಶ್ವಗುರುವನ್ನು ಸ್ಮರಿಸಿದ್ದಾರೆ.
ಕೇರಳ ಮುಖ್ಯಮಂತ್ರಿ ಮಾತ್ರವಲ್ಲ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಬಸವಣ್ಣ ಅವರನ್ನು ಸ್ಮರಿಸಿದ್ದಾರೆ.
ಮಹಾನ್ ಸಂತ, ಕವಿ ಮತ್ತು ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣ ಅವರ ಜಯಂತಿಯಂದು ನಾನು ಅವರಿಗೆ ಶಿರಬಾಗಿ ನಮಿಸುತ್ತೇನೆ. ಸಾಮಾಜಿಕ ಅನಿಷ್ಟಗಳ ವಿರುದ್ಧ ದೃಢವಾಗಿ ಹೋರಾಡಿದ್ದ ಬಸವಣ್ಣನವರ ಬೋಧನೆಗಳು ಎಲ್ಲಾ ಗಡಿಗಳನ್ನೂ ಮೀರಿ ‘ಮಾನವೀಯತೆ ಎಲ್ಲಕ್ಕಿಂತಲೂ ಮಿಗಿಲು' ಎಂಬ ಸಂದೇಶವನ್ನು ಪಸರಿಸುವಲ್ಲಿ ಯಶಸ್ವಿಯಾಗಿದೆ. pic.twitter.com/DdYoigF2f0
— Amit Shah (@AmitShah) April 26, 2020
'ಮಹಾನ್ ಸಂತ, ಕವಿ ಮತ್ತು ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣ ಅವರ ಜಯಂತಿಯಂದು ನಾನು ಅವರಿಗೆ ಶಿರಬಾಗಿ ನಮಿಸುತ್ತೇನೆ. ಸಾಮಾಜಿಕ ಅನಿಷ್ಟಗಳ ವಿರುದ್ಧ ದೃಢವಾಗಿ ಹೋರಾಡಿದ್ದ ಬಸವಣ್ಣನವರ ಬೋಧನೆಗಳು ಎಲ್ಲಾ ಗಡಿಗಳನ್ನೂ ಮೀರಿ 'ಮಾನವೀಯತೆ ಎಲ್ಲಕ್ಕಿಂತಲೂ ಮಿಗಿಲು' ಎಂಬ ಸಂದೇಶವನ್ನು ಪಸರಿಸುವಲ್ಲಿ ಯಶಸ್ವಿಯಾಗಿದೆ' ಎಂದು ಶುಭಾಶಯ ತಿಳಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications