ಕೇರಳದಲ್ಲಿ ಆಂಬುಲೆನ್ಸ್ ಆಗಿ ಪರಿವರ್ತನೆಗೊಂಡ ಬೋಟ್!
ತಿರುವನಂತಪುರಂ, ಆಗಸ್ಟ್.18: ಕೇರಳದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತರನ್ನು ಸ್ಥಳಾಂತರಿಸುವುದಕ್ಕೆ ಮತ್ತು ಚಿಕಿತ್ಸೆ ನೀಡುವುದಕ್ಕಾಗಿ ರಾಜ್ಯದ ವಾಯುಮಾರ್ಗ ಇಲಾಖೆಯು ವಿಶೇಷ ಸೌಲಭ್ಯ ಒದಗಿಸುತ್ತಿದೆ.
Recommended Video
ರಾಜ್ಯದಲ್ಲಿ ಇರುವ ರಕ್ಷಣಾ ಬೋಟ್ ಗಳನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಿದ್ದು, ಅದರಲ್ಲಿ ಕೊವಿಡ್-19 ಸೋಂಕಿತರನ್ನು ಸ್ಥಳಾಂತರಿಸುವುದು ಮತ್ತು ಚಿಕಿತ್ಸೆ ನೀಡುವುದಕ್ಕೆ ಬಳಸಿಕೊಳ್ಳಲಾಗುತ್ತಿದೆ. ಕೊವಿಡ್ ಕೇರ್ ಆಸ್ಪತ್ರೆಗಳಿಂದ ದೂರದಲ್ಲಿ ಇರುವ ಸೋಂಕಿತರಿಗೆ ಈ ಬೋಟ್ ಆಂಬುಲೆನ್ಸ್ ಗಳಿಂದ ಹೆಚ್ಚು ಅನುಕೂಲವಾಗಲಿದೆ ಎಂದು ವಿಜಿಯನ್ಸ್ ವಿಂಗ್ ಇನ್ಸ್ ಪೆಕ್ಟರ್ ಸಂತೋಷ್ ಕುಮಾರ್ ತಿಳಿಸಿದ್ದಾರೆ.
ಕೇರಳದಲ್ಲಿ ಒಟ್ಟು 46140 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ 170 ಮಂದಿ ಪ್ರಾಣ ಬಿಟ್ಟಿದ್ದಾರೆ. 30025 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, 15891 ಸಕ್ರಿಯ ಪ್ರಕರಣಗಳಿರುವುದು ದೃಢಪಟ್ಟಿದೆ.

ಭಾರತದಲ್ಲಿ ಕೊವಿಡ್-19 ಅಂಕಿ-ಸಂಖ್ಯೆ:
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 27 ಲಕ್ಷದ ಗಡಿ ದಾಟಿದೆ. ಪ್ರತಿನಿತ್ಯ ಸೋಂಕಿತ ಪ್ರಕರಣಗಳು 50 ಸಾವಿರಕ್ಕಿಂತ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲೇ 55079 ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿನಿಂದ 876 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 51797ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು ಈಗಾಗಲೇ 2702743ಕ್ಕೆ ಏರಿಕೆಯಾಗಿದೆ.












Click it and Unblock the Notifications