ಕೇರಳ ವಿಧಾನಸಭೆ ಚುನಾವಣೆ 2021 ದಿನಾಂಕ ಪ್ರಕಟ

ನವದೆಹಲಿ, ಫೆಬ್ರವರಿ 26: ಕೇರಳ ಜೊತೆಗೆ ತಮಿಳುನಾಡು, ಅಸ್ಸಾಂ, ಪುದುಚೇರಿ , ಪಶ್ಚಿಮ ಬಂಗಾಳದ ವಿಧಾನಸಭೆಗೆ ಚುನಾವಣೆ ದಿನಾಂಕಗಳನ್ನು ಪ್ರಕಟಿಸಲಾಗಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಫೆ.26ರಂದು ಸುದ್ದಿಗೋಷ್ಠಿ ನಡೆಸಿದ ಸಿಇಸಿ ಸುನಿಲ್ ಅರೋರಾ ಅವರು ಕೇರಳ ಸೇರಿದಂತೆ ಐದು ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಿದರು.

ಕೇರಳದ 14 ಜಿಲ್ಲೆಗಳಲ್ಲಿನ 140 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಚುನಾವಣೆ ನಡೆಯಲಿದೆ.
ಮಾರ್ಚ್ 12ರಂದು ಅಧಿಸೂಚನೆ ಪ್ರಕಟ
ಮಾರ್ಚ್ 20ರಂದು ನಾಮಪತ್ರ ಪರಿಶೀಲನೆ
ಮಾರ್ಚ್ 22ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ.
ಏಪ್ರಿಲ್ 6 ರಂದು ಮತದಾನ
ಮೇ 2 ರಂದು ಮತ ಎಣಿಕೆ, ಫಲಿತಾಂಶ ಪ್ರಕಟ

Kerala Election Dates 2021: Polling on 6th April; counting of votes on 2nd May

ಮಲಪ್ಪುರಂ ಉಪ ಚುನಾವಣೆ ಏಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

2016ರಲ್ಲಿ ಯುಡಿಎಫ್ 47 ಸ್ಥಾನ ಗಳಿಸಿತ್ತು. ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಫಲಿತಾಂಶ ನೀಡಿದರೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯುಡಿಎಫ್ ಸಾಧನೆ ಕಳಪೆಯಾಗಿತ್ತು. ಕಳೆದ ಬಾರಿ 87 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ 22 ಸ್ಥಾನ ಗೆದ್ದಿತ್ತು. ಮುಸ್ಲಿಂ ಲೀಗ್ 24 ಕ್ಷೇತ್ರಗಳಲ್ಲಿ 18 ಕ್ಷೇತ್ರ ತನ್ನದಾಗಿಸಿಕೊಂಡಿತ್ತು. ಅಧಿಕಾರ ಸ್ಥಾಪಿಸಲು ಮ್ಯಾಜಿಕ್ ನಂಬರ್ 71 ದಾಟಬೇಕಾಗುತ್ತದೆ.

2020ರಲ್ಲಿ 140 ಸ್ಥಾನಗಳ ವಿಧಾನಸಭೆಯ ಬಲಾಬಲ: ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ 93 ಸ್ಥಾನ, ಕಾಂಗ್ರೆಸ್ ನೇತೃತ್ವ ಯುಡಿಎಫ್ 42 ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ 1 ಸ್ಥಾನ ಹೊಂದಿದೆ.

ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ವಿಧಾನಸಭೆಗಳಲ್ಲಿ ತಕ್ಷಣವೇ ನೀತಿ ಸಂಹಿತೆ ಜಾರಿಗೆ ಬರಲಿದೆ. 5 ರಾಜ್ಯಗಳಲ್ಲಿನ 824 ಕ್ಷೇತ್ರಗಳಲ್ಲಿ 18.68 ಕೋಟಿ ಮತದಾರರಿದ್ದಾರೆ. ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950 ಬಳಸಲು ಸೂಚಿಸಲಾಗಿದೆ. ಮತದಾನಕ್ಕೆ 1 ಗಂಟೆ ಹೆಚ್ಚಿನ ಅವಧಿ ನೀಡಲಾಗಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+