• search
 • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೂವರ ಮೇಲೆ ಕಣ್ಣು; ಕೇರಳ ಖಾಕಿಗೆ ಸಿಕ್ಕಿತಾ ಕಾಡಾನೆ ಕೊಂದವರ ಸುಳಿವು?

|

ತಿರುವನಂತಪುರಂ, ಜೂನ್.04: ಗರ್ಭಿಣಿ ಕಾಡಾನೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ.

   ಗ್ರೇಟ್ ಎಸ್ಕೇಪ್... ನಾಗರಹೊಳೆಯಲ್ಲಿ ಪ್ರವಾಸಿಗರ ವಾಹನವನ್ನು ಅಟ್ಟಾಡಿಸಿದ ಆನೆ | Oneindia Kannada

   ಕಳೆದ ಮೇ.27ರಂದು ಪಟಾಕಿ ತುಂಬಿದ ಪೈನಾಪಲ್ ಹಣ್ಣನ್ನು ಸೇವಿಸಿ ಪಲಕ್ಕದ್ ಜಿಲ್ಲೆಯಲ್ಲಿ ಗರ್ಭಿಣಿ ಕಾಡಾನೆಯೊಂದು ಪ್ರಾಣ ಬಿಟ್ಟಿರುವಂತಾ ಮನಕಲುಕುವ ಘಟನೆ ನಡೆದಿತ್ತು. ಈ ಬಗ್ಗೆ ಸಾಕಷ್ಟು ಮಂದಿ ದೂರು ನೀಡಿದ್ದು, ಪ್ರಾಣಿಗಳ ಬಗ್ಗೆ ನೀವು ಹೊಂದಿರುವ ಕಾಳಜಿಯನ್ನು ತೋರಿಸುತ್ತದೆ.

   ನಾಲ್ಕು ದಿನಕ್ಕೆ ಒಂದಾನೆ ಸಾವು, ಭಾರತದಲ್ಲೇ ಹೀಗಾದ್ರೆ ಹೇಗೆ?

   ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಕಾಡಾನೆಯ ಕುರಿತು ಸಾರ್ವಜನಿಕರು ತೋರಿದ ಕಾಳಜಿಯು ಎಂದಿಗೂ ವ್ಯರ್ಥ ಆಗುವುದಿಲ್ಲ. ನ್ಯಾಯಕ್ಕೆ ನಿಶ್ಚಿತವಾಗಿಯೂ ಗೆಲುವು ಸಿಕ್ಕೇ ಸಿಗುತ್ತದೆ ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

   ಪೊಲೀಸರು ಮತ್ತು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ

   ಪೊಲೀಸರು ಮತ್ತು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ

   ಕಾಡಾನೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಮೂವರ ಮೇಲೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಅರಣ್ಯಾಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪರಾಧಿಗಳನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

   ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಸಂಘರ್ಷ

   ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಸಂಘರ್ಷ

   ರಾಜ್ಯದಲ್ಲಿ ಮನುಷ್ಯ ಹಾಗೂ ಕಾಡು ಪ್ರಾಣಿಗಳ ನಡುವಿನ ಸಂಘರ್ಷದ ಘಟನೆಗಳು ಇತ್ತೀಚಿಗೆ ಹೆಚ್ಚಾಗುತ್ತಿವೆ. ಇದರ ಹಿಂದಿನ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಕೃತಿಯಲ್ಲಿನ ಬದಲಾವಣೆ ಹಾಗೂ ಪ್ರತೀಕೂಲ ಪರಿಸರವು ಇಂಥ ಘಟನೆಗಳು ಹೆಚ್ಚಾಗಲು ಕಾರಣವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ, ಇಂಥ ಮನಕಲುಕುವ ಘಟನೆಯನ್ನು ಕೆಲವರು ದ್ವೇಷದ ಅಭಿಯಾನವನ್ನಾಗಿ ಮಾಡಿಕೊಂಡಿರುವುದು ತುಂಬಾ ನೋವಿ ಸಂಗತಿಯಾಗಿದೆ ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

   ಪಟಾಕಿ ತುಂಬಿದ ಅನಾನಸ್ ತಿನ್ನಿಸಿದ ಪಾಪಿ ಜನರು:ನೀರಿನಲ್ಲೇ ನಿಂತು ಪ್ರಾಣ ಬಿಟ್ಟ ಗರ್ಭವತಿ ಆನೆ

   ಕೇರಳದಲ್ಲಿ ಅನ್ಯಾಯದ ವಿರುದ್ಧ ಹೋರಾಟಕ್ಕೆ ಸಾಥ್

   ಕೇರಳದಲ್ಲಿ ಅನ್ಯಾಯದ ವಿರುದ್ಧ ಹೋರಾಟಕ್ಕೆ ಸಾಥ್

   ಕೇರಳದಲ್ಲಿ ಮೊದಲಿನಿಂದ ನ್ಯಾಯಪರವಾದ ಸಮಾಜ ನಿರ್ಮಿಸುವುದು ಸರ್ಕಾರದ ಹೊಣೆಯಾಗಿದೆ. ರಾಜ್ಯದಲ್ಲಿ ಅನ್ಯಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುವವರು ಯಾರೇ ಆಗಿದ್ದರೂ ನಮ್ಮ ಬೆಂಬಲವು ಇರುತ್ತದೆ. ಅನ್ಯಾಯದ ವಿರುದ್ಧ ಯಾರು ಹೋರಾಡುತ್ತಾರೋ ಅಂಥವರು ಮುಂದೆ ಬರಲಿ. ನಾವೂ ಕೂಡಾ ಅಂಥವರ ಹೋರಾಟಕ್ಕೆ ಧ್ವನಿಯಾಗಿ ನಿಲ್ಲುತ್ತೇವೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

   ಕೇರಳ ಸರ್ಕಾರದಿಂದ ಕೋರಿದ ಕೇಂದ್ರ ಸರ್ಕಾರ

   ಗರ್ಭಿಣಿ ಕಾಡಾನೆ ಸಾವಿನ ಪ್ರಕರಣವನ್ನು ಕೇಂದ್ರ ಸರ್ಕಾರವು ಕೂಡಾ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆ ಘಟನೆಯ ಕುರಿತು ಸಂಪೂರ್ಣ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಆಹಾರದಲ್ಲಿ ಪಟಾಕಿ ಇರಿಸಿ ಕೊಲ್ಲುವಂಥದ್ದು ಭಾರತೀಯ ಸಂಸ್ಕೃತಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

   English summary
   Kerala Elephant Killed Case; Investigation Focused On 3 Suspects. Kerala CM Pinarayi Vijayan Tweet.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more