ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರಿದ ಇಸ್ರೋ ಮಾಜಿ ಅಧ್ಯಕ್ಷ
ತಿರುವನಂತಪುರಂ, ಅಕ್ಟೋಬರ್ 28 : ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಇಸ್ರೋದ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಮಾಧವನ್ ನಾಯರ್ ಅವರಲ್ಲದೆ, ತಿರುವಾಂಕೂರ್ ದೇವಸ್ವಂ ಮಂಡಳಿ(ಟಿಡಿಬಿ) ಅಧ್ಯಕ್ಷ, ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಜಿ ರಮಣ್ ನಾಯರ್, ಮಹಿಳಾ ಆಯೋಗದ ಮಾಜಿ ಸದಸ್ಯೆ ಡಾ. ಪ್ರಮೀಳಾ ದೇವಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಕರಾಕುಲಂ ದಿವಾಕರನ್ ನಾಯರ್, ಮಲಾಂಕರ ಚರ್ಚ್ ನ ಥಾಮಸ್ ಜಾನ್ ಅವರು ಬಿಜೆಪಿ ಸೇರಿಕೊಂಡಿದ್ದಾರೆ.
ಶಬರಿಮಲೆ ದೇಗಲ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರದ ಮೋದಿ ಸರ್ಕಾರ ತೆಗೆದುಕೊಂಡ ನಿಲುವನ್ನು ಇವರೆಲ್ಲರೂ ಬೆಂಬಲಿಸುತ್ತಾ ಬಂದಿದ್ದಾರೆ.

ಕಣ್ಣೂರಿನ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಪಿಣರಾಯಿ ವಿಜಯನ್ ಸರ್ಕಾರವು, ಅನಗತ್ಯವಾಗಿ ಎಲ್ಲರನ್ನು ಬಂಧಿಸುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ವಿಜಯನ್ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದರು.












Click it and Unblock the Notifications