ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಸ್ಟಮ್ಸ್ ಬಳಿಕ ಎನ್ಐಎ ಮುಂದೆ ಶಿವಶಂಕರ್ ಐಎಎಸ್

|
Google Oneindia Kannada News

ಕೊಚ್ಚಿ, ಜುಲೈ 27: ಕೇರಳದ ಬಹುಕೋಟಿ ಚಿನ್ನದ ಸ್ಮಗಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಐಎಎಎಸ್ ಅಧಿಕಾರಿ ಎಂ ಶಿವಶಂಕರ್ ಅವರನ್ನು ಇಂದು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ದ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

Recommended Video

India - Bangladesh ಸಂಬಂಧಕ್ಕೆ ಹುಳಿ ಹಿಂಡಿದ China | Oneindia Kannada

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು 9 ಗಂಟೆಗಳ ಕಾಲ ಕಸ್ಟಮ್ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಎನ್ಐಎ ಅಧಿಕಾರಿಗಳು ಎರಡನೇ ಬಾರಿಗೆ ವಿಚಾರಣೆ ನಡೆಸುತ್ತಿದ್ದಾರೆ. ಈ ಮುನ್ನ ಜುಲೈ 23ರಂದು 5 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು.

ಕೇರಳದ ಸ್ಮಗಲಿಂಗ್ ಕೇಸ್, ಕಣಕ್ಕಿಳಿದ ಜಾರಿ ನಿರ್ದೇಶನಾಲಯಕೇರಳದ ಸ್ಮಗಲಿಂಗ್ ಕೇಸ್, ಕಣಕ್ಕಿಳಿದ ಜಾರಿ ನಿರ್ದೇಶನಾಲಯ

ಪ್ರಕರಣದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಅವರಿಗೆ ಸಿಎಂ ಸಚಿವಾಲಯದ ಅಧೀನದ ಐಟಿ ಇಲಾಖೆಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಯನ್ನು ಕೊಡಿಸುವಲ್ಲಿ ಶಿವಶಂಕರ್ ಮಹತ್ವದ ಪಾತ್ರ ವಹಿಸಿದ್ದರು ಎಂದು ಆರೋಪ ಕೇಳಿ ಬಂದಿದೆ. ಆರೋಪ ಕೇಳಿ ಬಂದ ಬಳಿಕ ಸಿಎಂ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ತೆಗೆದು ಹಾಕಲಾಗಿದೆ.

Kerala gold smuggling case: NIA grills Sivasankar in Kochi

ವಿಚಾರಣೆ ವೇಳೆ ಸ್ವಪ್ನಗೆ ಹುದ್ದೆ ನೀಡುವಲ್ಲಿ ಯಾವುದೇ ಅಕ್ರಮ ಎಸಗಿಲ್ಲ, ಪಾರದರ್ಶಕವಾಗಿ ನೇಮಕಾತಿ ನಡೆದಿದೆ. ಚಿನ್ನದ ಸ್ಮಗಲಿಂಗ್ ವ್ಯವಹಾರಕ್ಕೂ ನನಗೂ ಸಂಬಂಧವಿಲ್ಲ ಎಂದು ಶಿವಶಂಕರ್ ಹೇಳಿದ್ದಾರೆ. ಆದರೆ, ಈ ಹುದ್ದೆ ಪಡೆಯಲು ಸ್ವಪ್ನ ನೀಡಿದ್ದ ದಾಖಲೆಗಳು ನಕಲಿ ಎಂದು ಮತ್ತೊಂದು ದೂರು ದಾಖಲಾಗಿದೆ.

ಇನ್ನೊಂದೆಡೆ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಮನಿ ಲಾಂಡ್ರಿಂಗ್ ಕಂಡು ಬಂದಿದೆ ಎಂದು ಜಾರಿ ನಿರ್ದೇಶನಾಲಯವು ದೂರು ದಾಖಲಿಸಿದ್ದು, ಆರೋಪಿಗಳ ವಿಚಾರಣೆಗಾಗಿ ಮನವಿ ಸಲ್ಲಿಸಿದೆ. ಕೇರಳದ ಚಿನ್ನದ ಸ್ಮಗಲಿಂಗ್ ಪ್ರಕರಣದ ಆರೋಪಿಗಳ ಮೇಲೆ ಮನಿಲಾಂಡ್ರಿಂಗ್ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸಲಿದೆ.

ಚಿನ್ನದ ಸ್ಮಗಲಿಂಗ್ ಕೇಸಲ್ಲಿ 20ಕ್ಕೂ ಅಧಿಕ ಹವಾಲ ಗ್ಯಾಂಗ್!ಚಿನ್ನದ ಸ್ಮಗಲಿಂಗ್ ಕೇಸಲ್ಲಿ 20ಕ್ಕೂ ಅಧಿಕ ಹವಾಲ ಗ್ಯಾಂಗ್!

ಯುಎಇ ಕಾನ್ಸುಲೇಟ್ ಅಧಿಕಾರಿಯಾಗಿದ್ದ ಪಿಎಸ್ ಸರೀತ್, ಮಾಜಿ ಉದ್ಯೋಗಿ ಸ್ವಪ್ನ ಸುರೇಶ್, ಸಂದೀಪ್ ನಾಯರ್, ಫೈಜಲ್ ಫರೀದ್ ಅವರ ವಿರುದ್ಧ Unlawful Activities (Prevention) Act ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಎನ್ಐಎ ತನಿಖೆ ಮುಂದುವರೆಸಿದೆ.

English summary
Suspended senior IAS officer M Sivasankar is being questioned by the National Investigation Agency (NIA) officials for the second time in connection with the ongoing probe into the gold smuggling case, sources said on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X