• search
 • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸ್ಮಗಲಿಂಗ್ ಕೇಸ್: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

|

ತಿರುವನಂತಪುರಂ, ಜುಲೈ 24: ಕೇರಳದ ಚಿನ್ನದ ಸ್ಮಗಲಿಂಗ್ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಎನ್ಐಎ ವಿಶೇಷ ನ್ಯಾಯಾಲಯವು ಆದೇಶಿಸಿದೆ.

   ನಾವಿದ್ದೇವೆ ಯೋಚನೆ ಮಾಡಬೇಡಿ ಎಂದ ಶಿವಣ್ಣ

   ಪ್ರಮುಖ ಆರೋಪಿಗಳಾದ ಸ್ವಪ್ನ ಸುರೇಶ್, ಸಂದೀಪ್ ನಾಯರ್ ಹಾಗೂ ಸರೀತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 21ರ ತನಕ ವಿಸ್ತರಿಸಲಾಗಿದೆ.

   ಮಾನಸಿಕ ಹಿಂಸೆ ಆರೋಪ: ವಿಚಾರಣೆ ವೇಳೆ ತೀವ್ರ ಮಾನಸಿಕ ಹಿಂಸೆ ಅನುಭವಿಸಿದ್ದಾಗಿ ಆರೋಪಿ ಸ್ವಪ್ನ ಸುರೇಶ್ ಅವರು ನ್ಯಾಯಾಲಯದ ಮುಂದೆ ಹೇಳಿದ್ದಾರೆ. ಕಸ್ಟಮ್ ಅಧಿಕಾರಿಗಳ ಒತ್ತಡಕ್ಕೆ ಮಣಿದು ಹೇಳಿಕೆ ನೀಡಿದ್ದೇನೆ ಎಂದಿದ್ದಾರೆ.

   ಎಲ್ಲಾ ಆರೋಪಿಗಳ ಜಾಮೀನು ಅರ್ಜಿಯನ್ನು ಆಗಸ್ಟ್ 5ರಂದು ವಿಚಾರಣೆ ನಡೆಸಲಾಗುವುದು ಎಂದು ವಿಶೇಷ ನ್ಯಾಯಾಲಯ ಇದೇ ವೇಳೆ ಹೇಳಿದೆ.

   ಚಿನ್ನದ ಸ್ಮಗಲಿಂಗ್ ಕೇಸಲ್ಲಿ 20ಕ್ಕೂ ಅಧಿಕ ಹವಾಲ ಗ್ಯಾಂಗ್!

   ಇನ್ನೊಂದೆಡೆ, ಕೇರಳದ ಚಿನ್ನದ ಸ್ಮಗಲಿಂಗ್ ಪ್ರಕರಣದಲ್ಲಿ ಮನಿ ಲಾಂಡ್ರಿಂಗ್ ಕಂಡು ಬಂದಿದೆ ಎಂದು ಜಾರಿ ನಿರ್ದೇಶನಾಲಯವು ದೂರು ದಾಖಲಿಸಿದ್ದು, ಆರೋಪಿಗಳ ವಿಚಾರಣೆಗಾಗಿ ಮನವಿ ಸಲ್ಲಿಸಿದೆ. ಕೇರಳದ ಚಿನ್ನದ ಸ್ಮಗಲಿಂಗ್ ಪ್ರಕರಣದ ಆರೋಪಿಗಳ ಮೇಲೆ ಮನಿಲಾಂಡ್ರಿಂಗ್ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸಲಿದೆ.

   ದುಬೈನಲ್ಲಿರುವ ಉದ್ಯಮಿ ಫೈಜಲ್ ಫರೀದ್ ದುಬೈನಲ್ಲಿ ಚಿನ್ನ ಖರೀದಿಸಿ ಕೇರಳದ ಕಾನ್ಸುಲೇಟ್ ಕಚೇರಿಗೆ ಕಳುಹಿಸುತ್ತಿದ್ದ ಇಲ್ಲಿ ಸ್ವಪ್ನ ಸುರೇಶ್, ಸರೀತ್ ಅದನ್ನು ಹವಾಲ ಗ್ಯಾಂಗಿಗೆ ಹಂಚುತ್ತಿದ್ದರು. ಕೇರಳದ ಹೊರಗಡೆ ಎಲ್ಲವೂ ಮಾರಾಟವಾಗುತ್ತಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ.

   English summary
   Kerala Gold Smuggling Case: Special NIA Court in Kochi remands accused Swapna Suresh and Sandeep Nair to judicial custody till August 21.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X