ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ವಪ್ನಾಗೆ ಜಾಮೀನಿಲ್ಲ, ಕೇರಳ ಸ್ಮಗಲಿಂಗ್ ಕೇಸಿಗೆ IS ಲಿಂಕ್?

|
Google Oneindia Kannada News

ತಿರುವನಂತಪುರಂ, ಜುಲೈ 10: ಕೇರಳದಲ್ಲಿ ಸಂಚಲನ ಮೂಡಿಸಿರುವ ಚಿನ್ನದ ಸ್ಮಗಲಿಂಗ್ ಕೇಸಿನ ಪ್ರಮುಖ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಕೇರಳ ಹೈಕೋರ್ಟ್ ಮುಂದೂಡಿದೆ. ವಿಚಾರಣೆ ವೇಳೆ ಸ್ವಪ್ನ ಸುರೇಶ್ ಗೆ ಜಾಮೀನು ನೀಡುವುದಕ್ಕೆ ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಆಕ್ಷೇಪ ವ್ಯಕ್ತಪಡಿಸಿದೆ.

Recommended Video

ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಕಾಮೇಗೌಡರು | KameGowda | Oneindia Kannada

ರಿಪಬ್ಲಿಕ್ ಟಿವಿ ಪ್ರಕಾರ, ಜಾಮೀನು ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆ, ಕೇರಳ ಚಿನ್ನದ ಸ್ಮಗಲಿಂಗ್ ಪ್ರಕರಣಕ್ಕೂ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಗೂ ನಂಟಿರುವ ಶಂಕೆ ವ್ಯಕ್ತವಾಗಿದೆ ಎಂದು ಕೋರ್ಟಿಗೆ ಎನ್ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

NIA ತನಿಖೆಗೆ ಕೇರಳದ ಚಿನ್ನದ ಸ್ಮಗಲಿಂಗ್ ಪ್ರಕರಣNIA ತನಿಖೆಗೆ ಕೇರಳದ ಚಿನ್ನದ ಸ್ಮಗಲಿಂಗ್ ಪ್ರಕರಣ

ಸ್ವಪ್ನ ಸುರೇಶ್, ಸಂದೀಪ್ ನಾಯರ್ ಹಾಗೂ ಸರೀತ್ ಕುಮಾರ್ ಅವರ ವಿಚಾರಣೆ ಅಗತ್ಯವಾಗಿದ್ದು, ಈ ಜಾಲದಲ್ಲಿರುವ ಇನ್ನಷ್ಟು ಮಂದಿಯ ಬಗ್ಗೆ ತಿಳಿಯಬೇಕಿದೆ ಎಂದು ಎನ್ಐಎ ಪರ ವಕೀಲರು ವಾದಿಸಿದರು.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಪ್ರತಿ ಕೊಡುವಂತೆ ಸ್ವಪ್ನ ಪರ ವಕೀಲರು ಮನವಿ ಮಾಡಿಕೊಂಡರು. ಆದರೆ, ಇದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ಈ ಸಮಯದಲ್ಲಿ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಎನ್ಐಎ ತಿಳಿಸಿದೆ.

ಕೇಂದ್ರ ತನಿಖಾ ತಂಡದ ಪರ ವಕೀಲ ರವಿ ಪ್ರಕಾಶ್

ಕೇಂದ್ರ ತನಿಖಾ ತಂಡದ ಪರ ವಕೀಲ ರವಿ ಪ್ರಕಾಶ್

ಈ ಬಗ್ಗೆ ವಿವರಣೆ ನೀಡಿದ ಕೇಂದ್ರ ತನಿಖಾ ತಂಡದ ಪರ ವಕೀಲ ರವಿ ಪ್ರಕಾಶ್, ಇದೀಗ ಇದು ಎನ್ಐಎ ಪ್ರಕರಣವಾಗಿದ್ದು, ಹೈಕೋರ್ಟಿನಲ್ಲಿ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ, ವಿಶೇಷ ಕೋರ್ಟಿನಲ್ಲಿ ವಿಚಾರಣೆ ನಡೆಸಬೇಕು ಎಂದಿದ್ದಾರೆ.

ನಾಲ್ಕೈದು ದಿನಗಳಿಂದ ನಾಪತ್ತೆಯಾಗಿರುವ ಸ್ವಪ್ನ ಆನ್ ಲೈನ್ ಮೂಲಕ ಜಾಮೀನು ಅರ್ಜಿ ಹಾಕಿದ್ದರು. ಯುಎಪಿಎ ಕಾಯ್ದೆ ಉಲ್ಲಂಘನೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ಸಾಧ್ಯವಿಲ್ಲ ಎಂದು ಮುಂದಿನ ಮಂಗಳವಾರಕ್ಕೆ ಮುಂದೂಡಲಾಗಿದೆ.

''ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌'' ನಲ್ಲಿದ್ದ 30 ಕೆಜಿ ಚಿನ್ನ

''ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌'' ನಲ್ಲಿದ್ದ 30 ಕೆಜಿ ಚಿನ್ನ

ಏನಿದು ಪ್ರಕರಣ: ರಾಜತಾಂತ್ರಿಕ ರಕ್ಷಣೆ ಹೊಂದಿರುವ ''ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌'' ನಲ್ಲಿದ್ದ 30 ಕೆಜಿ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶ ಪಡಿಸಿಕೊಂಡಿದ್ದರು. ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಈ ಚಿನ್ನ ಅಕ್ರಮ ಸಾಗಣೆಯ ಆರೋಪಿ ರಾಜತಾಂತ್ರಿಕ ಕಚೇರಿಯ ಮಾಜಿ ಸಿಬ್ಬಂದಿ ಸ್ವಪ್ನ ಸುರೇಶ್ ಎಂದು ಆರೋಪಿಸಲಾಗಿದೆ.

30 ಕೆಜಿ ಚಿನ್ನದ ಸ್ಮಗ್ಲರ್ ಸ್ವಪ್ನಾಗೂ ಸಿಎಂ ಕಚೇರಿಗೂ ಏನಿದು ನಂಟು?30 ಕೆಜಿ ಚಿನ್ನದ ಸ್ಮಗ್ಲರ್ ಸ್ವಪ್ನಾಗೂ ಸಿಎಂ ಕಚೇರಿಗೂ ಏನಿದು ನಂಟು?

 ಕೇರಳ ಸ್ಮಗಲಿಂಗ್ ಕೇಸಿನ ಆರೋಪಿಗಳು ಯಾರು?

ಕೇರಳ ಸ್ಮಗಲಿಂಗ್ ಕೇಸಿನ ಆರೋಪಿಗಳು ಯಾರು?

ಸಿಎಂ ಕಚೇರಿಯ ಮಾಜಿ ಕಾನ್ಸುಲೆಟ್ ಸರಿತಾ ನಾಯರ್, ಸ್ವಪ್ನ ಸುರೇಶ್ ಅಲ್ಲದೆ ಕಾನ್ಸುಲೆಟ್ ಪಿಆರ್ ಒ ಸರಿತ್ ಕುಮಾರ್ ಪ್ರಮುಖ ಆರೋಪಿಗಳಾಗಿದ್ದಾರೆ. ಕೇರಳ ರಾಜ್ಯ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ಲಿಮಿಟೆಡ್ ( ಕೆಎಸ್ ಐಟಿ ಎಲ್) ಹಾಗೂ ಸ್ಪೇಸ್ ಪಾರ್ಕ್ ನಲ್ಲಿ ಸ್ವಪ್ನ ಕಾರ್ಯ ನಿರ್ವಹಿಸಿದ್ದರು. ಸದ್ಯಕ್ಕೆ ಸರಿತ್ ಕುಮಾರ್ ಬಂಧಿಸಲಾಗಿದ್ದು, ಸ್ವಪ್ನ ನಾಯರ್ ನಾಪತ್ತೆಯಾಗಿದ್ದಾರೆ.

ತನಿಖೆಗೆ ಸಹರಕರಿಸುವೆ: ಪಿಣರಾಯಿ ವಿಜಯನ್

ತನಿಖೆಗೆ ಸಹರಕರಿಸುವೆ: ಪಿಣರಾಯಿ ವಿಜಯನ್

ಈ ಪ್ರಕರಣದ ತನಿಖೆ ಕುರಿತಂತೆ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳಬಹುದು. ರಾಜ್ಯ ಸರ್ಕಾರ ಇದಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಬೆನ್ನಲ್ಲೇ ರಾಷ್ಟ್ರೀಯ ತನಿಖಾ ತಂಡ(ಎನ್ಐಎ) ತನಿಖೆ ಆರಂಭಿಸಿದೆ. ಯುಎಇ ರಾಜತಾಂತ್ರಿಕ ಸಂಸ್ಥೆ ಕೂಡಾ ಈ ಕುರಿತಂತೆ ಆಂತರಿಕ ತನಿಖೆ ನಡೆಸಲು ಮುಂದಾಗಿದೆ.

English summary
Kerala High Court on Friday adjourned hearing of anticipatory bail application of Swapna Suresh, the main accused in the high-profile Kerala gold smuggling case, till Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X