ಕೇರಳದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ; ಮೇ 8ರಿಂದ ಜಾರಿ
ತಿರುವನಂತಪುರಂ, ಮೇ 06; ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕೇರಳದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಕೋವಿಡ್ ಹರಡುವಿಕೆ ತಡೆಯಲು ಕೇರಳ ಸರ್ಕಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಿದೆ. ಮೇ 8 ರಿಂದ 16ರ ತನಕ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಗುರುವಾರ ಘೋಷಣೆ ಮಾಡಲಾಗಿದೆ.

ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 17,43,933ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,75,657ಕ್ಕೆ ಏರಿಕೆಯಾಗಿದೆ. 5,566 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿ ಲಾಕ್ ಡೌನ್ ಕುರಿತು ಮಾಹಿತಿ ನೀಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆಯಂತೆ ಮೇ 8ರ ಬೆಳಗ್ಗೆ 6 ರಿಂದ 16ರ ತನಕ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ.
Lockdown to be imposed in the state from 6 am on May 8 to May 16, in wake of the surge in COVID-19 cases in the second wave: Kerala CM Pinarayi Vijayan
— ANI (@ANI) May 6, 2021
(file photo) pic.twitter.com/16N1wY47It
ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿತ್ತು. ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಹೊಸ ಪ್ರಕರಣವಿದಾಗಿತ್ತು. ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಅಧ್ಯಯನ ಮಾಡಿದ ಬಳಿಕ ಲಾಕ್ ಡೌನ್ ಜಾರಿಗೊಳಿಸುವ ತೀರ್ಮಾನವನ್ನು ಮಾಡಲಾಗಿದೆ.
ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ವಾರ್ಡ್ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ನೀಡಲು, ಆಕ್ಸಿಜನ್ ವ್ಯವಸ್ಥೆ ಮಾಡಲು ವಾರ್ಡ್ ಮಟ್ಟದ ಸಮಿತಿಗಳನ್ನು ಸಕ್ರಿಯಗೊಳಿಸಬೇಕು ಎಂದು ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ.












Click it and Unblock the Notifications