ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ; ಮೇ 8ರಿಂದ ಜಾರಿ

|
Google Oneindia Kannada News

ತಿರುವನಂತಪುರಂ, ಮೇ 06; ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕೇರಳದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಕೋವಿಡ್ ಹರಡುವಿಕೆ ತಡೆಯಲು ಕೇರಳ ಸರ್ಕಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಿದೆ. ಮೇ 8 ರಿಂದ 16ರ ತನಕ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಗುರುವಾರ ಘೋಷಣೆ ಮಾಡಲಾಗಿದೆ.

ಕೇರಳ; 2001ರ ಬಳಿಕ ಹೆಚ್ಚು ಮಹಿಳಾ ಅಭ್ಯರ್ಥಿಗಳು ಆಯ್ಕೆ ಕೇರಳ; 2001ರ ಬಳಿಕ ಹೆಚ್ಚು ಮಹಿಳಾ ಅಭ್ಯರ್ಥಿಗಳು ಆಯ್ಕೆ

Kerala Government Announced Complete Lockdown From May 8 To 16

ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 17,43,933ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,75,657ಕ್ಕೆ ಏರಿಕೆಯಾಗಿದೆ. 5,566 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.

ನಿತ್ಯದ ಕೋವಿಡ್ ಪ್ರಕರಣಗಳಲ್ಲಿ ಶೇ.2.4ರಷ್ಟು ಬೆಳವಣಿಗೆ: ಲವ್ ಅಗರ್ವಾಲ್ ನಿತ್ಯದ ಕೋವಿಡ್ ಪ್ರಕರಣಗಳಲ್ಲಿ ಶೇ.2.4ರಷ್ಟು ಬೆಳವಣಿಗೆ: ಲವ್ ಅಗರ್ವಾಲ್

ಮುಖ್ಯಮಂತ್ರಿಗಳ ಕಚೇರಿ ಲಾಕ್ ಡೌನ್ ಕುರಿತು ಮಾಹಿತಿ ನೀಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆಯಂತೆ ಮೇ 8ರ ಬೆಳಗ್ಗೆ 6 ರಿಂದ 16ರ ತನಕ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ.

ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿತ್ತು. ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಹೊಸ ಪ್ರಕರಣವಿದಾಗಿತ್ತು. ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಅಧ್ಯಯನ ಮಾಡಿದ ಬಳಿಕ ಲಾಕ್ ಡೌನ್ ಜಾರಿಗೊಳಿಸುವ ತೀರ್ಮಾನವನ್ನು ಮಾಡಲಾಗಿದೆ.

ಎಲ್ಲಾ ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಎಷ್ಟಿದೆ?: ಕೇಂದ್ರ ಮಾಹಿತಿ ಎಲ್ಲಾ ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಎಷ್ಟಿದೆ?: ಕೇಂದ್ರ ಮಾಹಿತಿ

ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ವಾರ್ಡ್‌ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ನೀಡಲು, ಆಕ್ಸಿಜನ್ ವ್ಯವಸ್ಥೆ ಮಾಡಲು ವಾರ್ಡ್ ಮಟ್ಟದ ಸಮಿತಿಗಳನ್ನು ಸಕ್ರಿಯಗೊಳಿಸಬೇಕು ಎಂದು ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ.

English summary
COVID cases rising in Kerala state. Government has decided to impose lockdown from May 8 to 16, 2021 to break the chain of transmission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X