ರಾಜ್ಯಪಾಲರು ಎಂದರೆ ರಬ್ಬರ್ ಸ್ಟ್ಯಾಂಪ್ಅಲ್ಲ, ಸಿಎಂ ವಿರುದ್ಧ ಸಿಡಿಮಿಡಿ

ತಿರುವನಂತಪುರಂ, ಜನವರಿ.16: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ಕೇರಳ ಸರ್ಕಾರವು ಸುಪ್ರೀಂಕೋರ್ ಮೊರೆ ಹೋಗಿದೆ. ಇದರ ಬೆನ್ನಲ್ಲೇ ಸರ್ಕಾರದ ವಿರುದ್ಧ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕೆಂಡಾಮಂಡಲರಾಗಿದ್ದಾರೆ.

ಸಿಎಎ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಕ್ಕೆ ತಮ್ಮ ಅಭ್ಯಂತರವಿಲ್ಲ. ಆದರೆ, ರಾಜ್ಯದ ಸಾಂವಿಧಾನಿಕ ವ್ಯವಸ್ಥೆಯ ಮುಖ್ಯಸ್ಥರಾಗಿರುವ ತಮಗೆ ಮಾಹಿತಿ ನೀಡದೇ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಸಿಡಿಮಿಡಿಗೊಂಡಿದ್ದಾರೆ.

ರಾಜ್ಯ ಸರ್ಕಾರವು ತೆಗೆದುಕೊಳ್ಳುವ ನಿರ್ಧಾರವನ್ನು ರಾಜ್ಯಪಾಲರ ಗಮನಕ್ಕೆ ತರುತ್ತಿಲ್ಲ. ಸುದ್ದಿ ಮಾಧ್ಯಮ ಹಾಗೂ ದಿನಪತ್ರಿಕೆಗಳ ಮೂಲಕ ಅದನ್ನೆಲ್ಲ ತಿಳಿದುಕೊಳ್ಳುವಂತಾ ಪರಿಸ್ಥಿತಿ ಎದುರಾಗಿದೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Kerala Government Challenged CAA: Governor Is Not Just A Rubber Stamp

ರಾಜ್ಯಪಾಲರು ಎಂದರೆ ರಬ್ಬರ್ ಸ್ಟ್ಯಾಂಪ್ ಅಲ್ಲ?:

ಕೇರಳ ಸರ್ಕಾರದ ವಿರುದ್ಧ ಕಿಡಿ ಕಾರಿದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ರಾಜ್ಯಪಾಲರು ಎಂದರೆ ರಬ್ಬರ್ ಸ್ಟ್ಯಾಂಪ್ ಅಲ್ಲ. ಒಂದು ಸಾಂವಿಧಾನಿಕ ವ್ಯವಸ್ಥೆ ಮುಖ್ಯಸ್ಥರಿಗೇ ತಿಳಿಸದೇ ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಷ್ಟು ಸರಿ ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಶಿಷ್ಟಾಚಾರದ ಜೊತೆಗೆ ಸೌಜನ್ಯವನ್ನೂ ಕೂಡಾ ಉಲ್ಲಂಘನೆ ಮಾಡಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದ್ದಾರೆ.

ಈ ಹಿಂದೆ ಜನವರಿ.14ರಂದು ಸಿಎಎ ವಿರುದ್ಧ ಕೇರಳ ಸರ್ಕಾರವು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಗ್ರೀಕ್ಸ್, ರೋಮನ್ಸ್, ಅರಬ್ಸ್, ಪ್ರತಿಯೊಬ್ಬರು ಈ ನೆಲಕ್ಕೆ ಬಂದಿದ್ದಾರೆ. ಕ್ರಿಶ್ಚಿಯನ್ ಮತ್ತು ಮುಸ್ಲಿಂರು ಆರಂಭದಿಂದಲೂ ಇದ್ದಾರೆ. ಎಲ್ಲರ ಒಳ್ಳಗೊಳ್ಳುವಿಕೆ ನಮ್ಮ ಸಂಪ್ರದಾಯವಾಗಿದೆ. ನಮ್ಮ ವಿಧಾನಸಭೆಯು ಸಂಪ್ರದಾಯವನ್ನು ಉಳಿಸಬೇಕಾದ ಅಗತ್ಯವಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾದಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+