• search
 • Live TV
ತಿರುವನಂತಪುರಂ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಮಾನ ದುರಂತ: ಮೃತಪಟ್ಟ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಕೇರಳ

|

ತಿರುವನಂತಪುರಂ, ಆಗಸ್ಟ್ 8: ಕೋಳಿಕ್ಕೋಡ್ ವಿಮಾನ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಕೇರಳ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

   Kerala Flight crash ದುರಂತದಲ್ಲಿದ್ದ 40 ಮಂದಿಗೆ Corona | Oneindia Kannada

   ಶುಕ್ರವಾರ ರಾತ್ರಿ ದುಬೈನಿಂದ ಕೇರಳದ ಕೋಳಿಕ್ಕೋಡ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿತ್ತು. ಒಟ್ಟು 190 ಪ್ರಯಾಣಿಕರು ವಿಮಾನದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅದರಲ್ಲಿ ಹದಿನೆಂಟು ಜನರು ಸಾವನ್ನಪ್ಪಿದ್ದಾರೆ. ಇನ್ನು 22 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

   ಕೋಳಿಕ್ಕೋಡ್ ವಿಮಾನ ದುರಂತದಲ್ಲಿ ಮೃತಪಟ್ಟ ಓರ್ವನಿಗೆ ಕೊರೊನಾ!

   ವಿಮಾನ ಅಪಘಾತ ಸಂಭವಿಸಿದ ಕೋಳಿಕ್ಕೋಡ್ ಏರ್‌ಪೋರ್ಟ್‌ಗೆ ಇಂದು ಬೆಳಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದರು.

   ವಿಮಾನ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗಳಿಗೆ ತುತ್ತಾದ ಜನರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದರು.

   ವಿಮಾನ ಪತನ ಹಿನ್ನೆಲೆ ವಂದೇ ಭಾರತ್ ಮಿಷನ್ ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಈಗಾಗಲೇ ನಿರ್ಧರಿಸಿದಂತೆ ಪ್ರಕ್ರಿಯೆ ನಡೆಯಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಕೋಳಿಕ್ಕೋಡ್ ಘಟನೆ ಬಗ್ಗೆ ಬಾಂಗ್ಲಾದೇಶ ವಿದೇಶಾಂಗ ಸಚಿವ ಮೊಮಿನ್ ಸಂತಾಪ ಸೂಚಿಸಿದ್ದಾರೆ.

   ಪೈಲೆಟ್ ಹಾಗೂ ಸಿಬ್ಬಂದಿ ಒಟ್ಟು 190 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. ಗಾಯಗೊಂಡ 149 ಪ್ರಯಾಣಿಕರನ್ನು ಮಲಪ್ಪುರಂ ಮತ್ತು ಕೋಳಿಕ್ಕೋಡ್ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಅದರಲ್ಲಿ 22 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಥಮ ಚಿಕಿತ್ಸಾ ನಂತರ 22 ಜನರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು. ಜೊತೆಗೆ ಕೊರೊನಾ ವೈರಸ್ ಪರೀಕ್ಷೆಯೂ ಕಡ್ಡಾಯ, ಎಲ್ಲರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.

   English summary
   Kerala government announces Rs 10 lakh compensation to families of those who lost their lives in the Air India Express flight crash at Karipur airport in Kozhikode.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X